Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:32 - ಪರಿಶುದ್ದ ಬೈಬಲ್‌

32 “ಆದ್ದರಿಂದ, ಇಸ್ರೇಲ್ ಜನರೇ, ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಲು ನೀವು ಎಚ್ಚರದಿಂದಿರಬೇಕು. ಆತನನ್ನು ಹಿಂಬಾಲಿಸುವುದನ್ನು ನಿಲ್ಲಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದದರಿಂದ ನೀವು ಸ್ವಲ್ಪವಾದರೂ ತಪ್ಪದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:32
26 ತಿಳಿವುಗಳ ಹೋಲಿಕೆ  

ಒಳ್ಳೆಯ ಮಾರ್ಗವನ್ನು ಬಿಟ್ಟು ಹೋಗಬೇಡ; ಆದರೆ ಕೆಡುಕಿಗೆ ಯಾವಾಗಲೂ ದೂರವಾಗಿರು.


“ಯೆಹೋವನ ಆಜ್ಞೆಗಳನ್ನೆಲ್ಲಾ ಜಾಗರೂಕತೆಯಿಂದ ಕೈಕೊಂಡು ನಡೆಯಿರಿ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಎಲ್ಲವನ್ನು ಪಾಲಿಸಿರಿ. ಆ ಧರ್ಮಶಾಸ್ತ್ರಕ್ಕೆ ವಿಮುಖರಾಗಬೇಡಿ.


ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ.


ಆಗ ಅರಸನು ತನ್ನ ಪ್ರಜೆಗಳಿಗಿಂತ ತಾನು ಉತ್ತಮನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ಧರ್ಮಶಾಸ್ತ್ರಕ್ಕೆ ವಿಮುಖನಾಗದೆ ಅದನ್ನು ಚಾಚೂತಪ್ಪದೆ ಅನುಸರಿಸುವನು. ಆಗ ರಾಜನೂ ಅವನ ಸಂತತಿಯವರೂ ಇಸ್ರೇಲ್ ರಾಜ್ಯವನ್ನು ಬಹುಕಾಲ ಆಳುವರು.


ನಾನು ಈ ಹೊತ್ತು ಬೋಧಿಸುವ ಯಾವುದನ್ನೂ ನೀವು ಉಲ್ಲಂಘಿಸಬಾರದು. ಇತರ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಪೂಜಿಸಬಾರದು.


“‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.


“ನಿಮ್ಮಲ್ಲಿ ಯಾರಿಗಾದರೂ ಚರ್ಮರೋಗವಿದ್ದಲ್ಲಿ ಯಾಜಕನು ಹೇಳುವ ರೀತಿಯನ್ನು ಅನುಸರಿಸಬೇಕು. ನಾನು ಯಾಜಕರಿಗೆ ತಿಳಿಸಿದ ಮೇರೆಗೆ ನೀವು ಮಾಡಬೇಕು.


“ನಾನು ಆಜ್ಞಾಪಿಸಿದ ಪ್ರಕಾರವೇ ನೀವು ಮಾಡಿರಿ. ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆಯಬಾರದು.


ಈ ದೇಶದಲ್ಲಿ ನೀವು ವಾಸಿಸುವಾಗ ನಾನು ಈ ಹೊತ್ತು ನಿಮಗೆ ಕೊಡುವ ಕಟ್ಟಳೆಗಳನ್ನೂ ವಿಧಿನಿಯಮಗಳನ್ನೂ ತಪ್ಪದೆ ಪರಿಪಾಲಿಸಬೇಕು.


“ನಾನು ಈ ದಿನ ಕೊಡುವ ಎಲ್ಲಾ ಆಜ್ಞೆಗಳನ್ನು ನೀವು ಅನುಸರಿಸಬೇಕು. ಆಗ ನೀವು ದೊಡ್ಡ ಜನಾಂಗವಾಗಿ ಅಭಿವೃದ್ಧಿಯಾಗುವಿರಿ. ನಿಮ್ಮ ಪೂರ್ವಿಕರಿಗೆ ಯೆಹೋವನು ವಾಗ್ದಾನ ಮಾಡಿದ ದೇಶವನ್ನು ನೀವು ಪಡೆದುಕೊಳ್ಳುವಿರಿ.


ಹೌದು, ಆ ಜನರು ಸರಿಯಾದ ಮಾರ್ಗವನ್ನು ತಿಳಿಯದೆ ಹೋಗಿದ್ದರೇ ಒಳ್ಳೆಯದಾಗುತ್ತಿತ್ತು. ಸರಿಯಾದ ಮಾರ್ಗವನ್ನು ಅರಿತುಕೊಂಡು, ಪವಿತ್ರ ಬೋಧನೆಗಳಿಗೆ ವಿಮುಖರಾಗುವುದಕ್ಕಿಂತ ಅದನ್ನು ತಿಳಿದುಕೊಳ್ಳದಿದ್ದರೇ ಚೆನ್ನಾಗಿರುತ್ತಿತ್ತು.


ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.


ಇಸ್ರೇಲಿನ ಜನರು ತಮ್ಮ ದೇಶವನ್ನು ತೊರೆದು ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ದೇಶದಲ್ಲಿಯೇ ನೆಲೆಸುವಂತೆ ನಾನು ಮಾಡುತ್ತೇನೆ. ನಾನು ನನ್ನ ಸೇವಕನಾದ ಮೋಶೆಯ ಮೂಲಕ ಅವರಿಗೆ ಬೋಧಿಸಿದ ಆಜ್ಞೆಗಳಿಗೆಲ್ಲಾ ಅವರು ವಿಧೇಯರಾಗಿದ್ದರೆ, ನಾನು ಅವರನ್ನು ಅವರ ದೇಶದಲ್ಲಿ ನೆಲೆಗೊಳಿಸುವೆನು.”


ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ, ಇಡೀ ಧರ್ಮಶಾಸ್ತ್ರಕ್ಕೆ ನಾವು ಚಾಚೂತಪ್ಪದೆ ಎಚ್ಚರಿಕೆಯಿಂದ ವಿಧೇಯರಾದರೆ, ನಾವು ಒಳ್ಳೆಯದನ್ನು ಮಾಡಿದೆವೆಂದು ದೇವರು ಹೇಳುತ್ತಾನೆ.’


ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.


ಆತನು ನಿಮಗೆ ಬರೆಯಿಸಿಕೊಟ್ಟ ನಿಯಮಗಳಿಗೆ, ಶಾಸ್ತ್ರಗಳಿಗೆ, ಉಪದೇಶಗಳಿಗೆ ಮತ್ತು ಆಜ್ಞೆಗಳಿಗೆ ನೀವು ವಿಧೇಯರಾಗಿರಬೇಕು. ನೀವು ಎಲ್ಲಾ ಕಾಲದಲ್ಲೂ ಇವುಗಳಿಗೆ ವಿಧೇಯತೆಯಿಂದಿರಬೇಕು. ನೀವು ಅನ್ಯದೇವತೆಗಳನ್ನು ಪೂಜಿಸಲೇಬಾರದು.


ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಯೋಷೀಯನು ಮಾಡಿದನು. ಯೋಷೀಯನು ತನ್ನ ಪೂರ್ವಿಕನಾದ ದಾವೀದನಂತೆ ದೇವರನ್ನು ಅನುಸರಿಸಿದನು. ಯೋಷೀಯನು ದೇವರ ಬೋಧನೆಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಅವುಗಳನ್ನು ಅನುಸರಿಸಿದನು.


ನಾನೇ ನಿಮ್ಮ ದೇವರಾದ ಯೆಹೋವನು. ನನ್ನ ಕಟ್ಟಳೆಗಳಿಗೆ ವಿಧೇಯರಾಗಿರಿ, ನನ್ನ ಆಜ್ಞೆಗಳನ್ನು ಅನುಸರಿಸಿರಿ. ನಾನು ಹೇಳಿದವುಗಳನ್ನು ಮಾಡಿರಿ.


ಆತನ ಆಜ್ಞೆಗಳಿಗೆ ವಿಧೇಯರಾಗಿರಲು ಎಚ್ಚರದಿಂದಿರಬೇಕು. ಆತನು ನಿಮಗೆ ಕೊಟ್ಟ ವಿಧಿನಿಯಮಗಳನ್ನು ಪರಿಪಾಲಿಸಲು ತಯಾರಾಗಿರಬೇಕು.


ಅವರು ಹೇಳಿದ ಹಾಗೆ ಎಲ್ಲವನ್ನು ಅಕ್ಷರಶಃ ಪರಿಪಾಲಿಸಬೇಕು. ಅವರ ತೀರ್ಪನ್ನು ಬದಲಾಯಿಸಬಾರದು.


ನಾವು ಅವರ ದೇಶವನ್ನು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರಿಗೆ ಹಂಚಿದೆವು.


ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.


ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ, ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.


ಅವು ನಿನಗೆ ದೀರ್ಘಾಯುಷ್ಯವನ್ನು ನೀಡಿ ಸಂತೋಷ ಸಮಾಧಾನಗಳಿಂದ ಕೂಡಿದ ಜೀವಿತವನ್ನು ಕೊಡುತ್ತವೆ.


ಆದರೆ ನೀವು ತಪ್ಪು ಕಾರ್ಯಮಾಡಿದರೆ, ದುಷ್ಟತ್ವದಲ್ಲಿ ಜೀವಿಸಿದರೆ ನಿಮ್ಮ ಹಿಂದಿನಿಂದ ಒಂದು ಸ್ವರ, “ಇದು ಸರಿಯಾದ ಮಾರ್ಗ. ಈ ಮಾರ್ಗದಲ್ಲಿ ಮುಂದುವರಿಯಿರಿ” ಎಂದು ಹೇಳುವುದು ಕೇಳಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು