ಧರ್ಮೋಪದೇಶಕಾಂಡ 5:4 - ಪರಿಶುದ್ದ ಬೈಬಲ್4 ಆ ಪರ್ವತದಲ್ಲಿ ಯೆಹೋವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಬೆಂಕಿಯೊಳಗಿಂದ ನಿಮ್ಮೊಂದಿಗೆ ಮಾತಾಡಿರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರ ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ಮುಖಾಮುಖಿಯಾಗಿ ನಮ್ಮೊಂದಿಗೆ ಮಾತಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ವಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತಾಡಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮುಖಾಮುಖಿಯಾಗಿ ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದರು. ಅಧ್ಯಾಯವನ್ನು ನೋಡಿ |
ಯೆಹೋವನು ಮೋಶೆಯೊಂದಿಗೆ ಮುಖಾಮುಖಿಯಾಗಿ ಮಾತಾಡುತ್ತಿದ್ದನು. ಒಬ್ಬನು ತನ್ನ ಸ್ನೇಹಿತನೊಂದಿಗೆ ಮಾತಾಡುವಂತೆ ಯೆಹೋವನು ಮೋಶೆಯೊಂದಿಗೆ ಮಾತಾಡುತ್ತಿದ್ದನು. ಯೆಹೋವನೊಂದಿಗೆ ಮಾತಾಡಿದ ನಂತರ ಮೋಶೆಯು ಪಾಳೆಯಕ್ಕೆ ಮರಳಿ ಹೋಗುತ್ತಿದ್ದನು. ನೂನನ ಮಗನೂ ಯೌವನಸ್ಥನೂ ಆಗಿದ್ದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯು ಗುಡಾರವನ್ನು ಬಿಟ್ಟುಹೋದಾಗ ಯೆಹೋಶುವನು ಗುಡಾರದಲ್ಲಿಯೇ ಇರುತ್ತಿದ್ದನು.
ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.