ಧರ್ಮೋಪದೇಶಕಾಂಡ 6:11 - ಪರಿಶುದ್ದ ಬೈಬಲ್11 ನೀವು ಕೂಡಿಸಿಡದ ಉತ್ತಮ ವಸ್ತುಗಳಿಂದ ತುಂಬಿರುವ ಮನೆಗಳನ್ನು ಯೆಹೋವನು ನಿಮಗೆ ಕೊಡುತ್ತಾನೆ. ನೀವು ತೋಡದಿರುವ ಬಾವಿಗಳನ್ನು ನಿಮಗೆ ಕೊಡುವನು. ನೀವು ನೆಡದಿರುವ ದ್ರಾಕ್ಷಾತೋಟಗಳನ್ನೂ ಎಣ್ಣೆಮರಗಳ ತೋಪುಗಳನ್ನೂ ನಿಮಗೆ ಕೊಡುವನು. ನಿಮಗೆ ತಿನ್ನಲು ಯಾವ ಕೊರತೆಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀನು ಕಟ್ಟದ ಸುಂದರವಾದ ದೊಡ್ಡ ಪಟ್ಟಣಗಳನ್ನು, ನೀನು ಕೂಡಿಸದ ಉತ್ತಮೋತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನು, ನೀನು ತೋಡದ ನೀರುಗುಂಡಿಗಳನ್ನು, ನೀನು ಬೆಳಸದ ದ್ರಾಕ್ಷಿತೋಟಗಳನ್ನು ಹಾಗು ಎಣ್ಣೆಮರಗಳನ್ನು ಅನುಭವಿಸುತ್ತಾ ತೃಪ್ತನಾಗಿ ಇರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀವು ಕೂಡಿಸದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ನೀವು ಅಗೆಯದ ನೀರಗುಂಡಿಗಳನ್ನೂ ನೀವು ಬೆಳಸದ ದ್ರಾಕ್ಷೇತೋಟಗಳನ್ನೂ ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀವು ಕೂಡಿಸದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ನೀವು ಅಗೆಯದಿರುವ ಬಾವಿಗಳನ್ನೂ, ನೀವು ನೆಡದ ದ್ರಾಕ್ಷಿತೋಟಗಳನ್ನೂ, ಓಲಿವ್ ತೋಟಗಳನ್ನೂ ನಿಮಗೆ ಕೊಡಲಾಗಿ, ನೀವು ತಿಂದು ತೃಪ್ತರಾಗಿರುವಿರಿ. ಅಧ್ಯಾಯವನ್ನು ನೋಡಿ |
“‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’”
ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.