Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:12 - ಪರಿಶುದ್ದ ಬೈಬಲ್‌

12 “ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಿ ಆತನನ್ನೇ ಸೇವಿಸಿರಿ. ಆತನನ್ನು ಮರೆತುಬಿಡಬೇಡಿರಿ. ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಾಗ ಆತನೇ ನಿಮ್ಮನ್ನು ವಿಮೋಚಿಸಿದನಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈಜಿಪ್ಟ್ ದೇಶದಲ್ಲಿ ಗುಲಾಮನಾಗಿದ್ದ ನಿನ್ನನ್ನು ಬಿಡುಗಡೆ ಮಾಡಿದ ಸರ್ವೇಶ್ವರನನ್ನು ಆಗ ಮರೆತುಬಿಡದಂತೆ ಎಚ್ಚರಿಕೆಯಿಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯಬಾರದು, ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ಯೆಹೋವ ದೇವರನ್ನು ಮರೆಯದ ಹಾಗೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:12
22 ತಿಳಿವುಗಳ ಹೋಲಿಕೆ  

ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು.


ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.


ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೀವು ಮರೆಯಲೇಬಾರದು. ನೀವು ಅನ್ಯದೇವರುಗಳನ್ನು ಪೂಜಿಸಬಾರದು.


ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು.


ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು. ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ. ಅವರು ಜಾಗ್ರತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು.


ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.


ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.


“ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.


ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ.


ನಿಮಗೆ ಬೇಕಾದಷ್ಟು ಆಹಾರ ಇರುವುದು. ಆಗ ನೀವು ನಿಮಗೆ ಉತ್ತಮ ದೇಶವನ್ನು ಕೊಟ್ಟಿರುವ ಯೆಹೋವ ದೇವರನ್ನು ಸ್ತುತಿಸುವಿರಿ.


ನೀವು ನಿಮ್ಮನ್ನು ನಿರ್ಮಿಸಿದ ಬಂಡೆಯಂತಿರುವ ದೇವರನ್ನು ತೊರೆದುಬಿಟ್ಟಿರಿ; ನಿಮಗೆ ಪ್ರಾಣವನ್ನು ಕೊಟ್ಟ ದೇವರನ್ನು ನೀವು ಮರೆತುಬಿಟ್ಟಿರಿ.


ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಿದ್ದನು. ಅವರ ಪೂರ್ವಿಕರು ಯೆಹೋವನನ್ನು ಆರಾಧಿಸುತ್ತಿದ್ದರು. ಆದರೆ ಇಸ್ರೇಲರು ಯೆಹೋವನನ್ನು ಅನುಸರಿಸದೆ ತಮ್ಮ ಸುತ್ತಮುತ್ತಲಿನ ಜನರ ಸುಳ್ಳುದೇವರುಗಳನ್ನು ಪೂಜಿಸಲು ಆರಂಭಿಸಿದರು. ಆದ್ದರಿಂದ ಯೆಹೋವನಿಗೆ ಕೋಪ ಬಂತು.


ಆದರೆ ನೀವು ಯೆಹೋವನನ್ನು ಅನುಸರಿಸಲೇಬೇಕು. ನಿಮ್ಮನ್ನು ಈಜಿಪ್ಟಿನಿಂದ ಹೊರಗೆತಂದ ದೇವರೇ ನಿಮ್ಮ ಯೆಹೋವ. ಯೆಹೋವನು ನಿಮ್ಮನ್ನು ರಕ್ಷಿಸಲು ತನ್ನ ಮಹಾಶಕ್ತಿಯನ್ನು ಬಳಸಿದನು. ನೀವು ಯೆಹೋವನನ್ನು ಗೌರವಿಸಿ ಆರಾಧಿಸಬೇಕು ಮತ್ತು ಆತನಿಗೆ ಯಜ್ಞಗಳನ್ನು ಅರ್ಪಿಸಬೇಕು.


ದೇವರನ್ನು ಮರೆಯುವವನು ಆ ಜವುಗು ಸಸ್ಯಗಳಂತೆಯೇ ಇರುವನು. ದೇವರನ್ನು ಮರೆಯುವವನಿಗೆ ನಿರೀಕ್ಷೆಯೇ ಇಲ್ಲ.


ನಾವು ನಿನ್ನನ್ನು ಮರೆತಿಲ್ಲದಿದ್ದರೂ ನಾವು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿಲ್ಲದಿದ್ದರೂ ಇವೆಲ್ಲಾ ನಮಗೆ ಬಂದಿವೆ.


ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.


ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.


ಯೆರೆಮೀಯನೇ, ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನಾನು ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಿಕರನ್ನು ಅಲ್ಲಿಂದ ಹೊರತಂದೆನು. ನಾನು ಹಾಗೆ ಮಾಡಿದಾಗ ಅವರ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆ.


“ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.


ಯಾರೂ ನಿಮ್ಮನ್ನು ಮೋಸಕರವಾದ ಮತ್ತು ನಿರರ್ಥಕವಾದ ತತ್ವಜ್ಞಾನ ಬೋಧನೆಯಿಂದ ತಪ್ಪು ದಾರಿಗೆ ನಡೆಸದಂತೆ ಜಾಗ್ರತೆಯಿಂದಿರಿ. ಆ ತತ್ವಜ್ಞಾನಗಳು ಜನರಿಂದ ಬಂದುವೇ ಹೊರತು ಕ್ರಿಸ್ತನಿಂದಲ್ಲ. ಅವು ಈ ಲೋಕದ ಜನರ ನಿರರ್ಥಕ ತತ್ವಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು