ಧರ್ಮೋಪದೇಶಕಾಂಡ 6:14 - ಪರಿಶುದ್ದ ಬೈಬಲ್14 ಇತರ ದೇವರುಗಳನ್ನು ಅವಲಂಭಿಸಬಾರದು. ನಿಮ್ಮ ಸುತ್ತಲೂ ಇರುವವರ ದೇವರುಗಳನ್ನು ಪೂಜಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸುತ್ತಮುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸುತ್ತಮುತ್ತಲಿರುವ ಜನಾಂಗಗಳು ಹಿಂಬಾಲಿಸುವ ದೇವರುಗಳನ್ನು ನೀನು ಆರಾಧಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಮ್ಮ ಸುತ್ತಲಿರುವ ಜನರ ದೇವರುಗಳಾಗಿರುವ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ. ಅಧ್ಯಾಯವನ್ನು ನೋಡಿ |
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.