Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:15 - ಪರಿಶುದ್ದ ಬೈಬಲ್‌

15 ನಿಮ್ಮ ದೇವರಾದ ಯೆಹೋವನು ಯಾವಾಗಲೂ ನಿಮ್ಮ ಜೊತೆಯಲ್ಲಿರುವನು. ಸುಳ್ಳುದೇವರನ್ನು ಪೂಜಿಸುವವರನ್ನು ಯೆಹೋವನು ದ್ವೇಷಿಸುವುದರಿಂದ ಅವರನ್ನು ಈ ಲೋಕದಿಂದ ಅಳಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ಮಧ್ಯೆಯಿರುವ ನಿಮ್ಮ ದೇವರಾದ ಸರ್ವೇಶ್ವರ ತಮಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂವಿುಯ ಮೇಲೆ ಉಳಿಯದಂತೆ ನಾಶಮಾಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ನಿಮ್ಮ ಮಧ್ಯದಲ್ಲಿರುವ ನಿಮ್ಮ ಯೆಹೋವ ದೇವರು ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರು. ನಿಮ್ಮ ದೇವರ ಕೋಪವು ನಿಮ್ಮ ಮೇಲೆ ಉರಿಯಲು, ಅವರು ನಿಮ್ಮನ್ನು ಭೂಮಿಯ ಮೇಲಿನಿಂದ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:15
20 ತಿಳಿವುಗಳ ಹೋಲಿಕೆ  

ನೀವು ಇತರ ದೇವರುಗಳನ್ನು ಪೂಜಿಸುವುದನ್ನು ಜೀವಸ್ವರೂಪನಾದ ಯೆಹೋವನು ದ್ವೇಷಿಸುವುದರಿಂದ ಬೆಂಕಿಯಂತೆ ಆತನು ನಿಮ್ಮನ್ನು ದಹಿಸಿ ಬಿಡುವನು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಳ್ಳುವನು; ಆಕಾಶವನ್ನು ಮುಚ್ಚಿ ಮಳೆಬೀಳದಂತೆ ಮಾಡುವನು. ಆಗ ಹೊಲದಲ್ಲಿ ಧಾನ್ಯ ಬೆಳೆಯುವುದಿಲ್ಲ. ಆಗ ಆತನು ಕೊಡುವ ಒಳ್ಳೆಯ ದೇಶದಲ್ಲಿಯೇ ಊಟಕ್ಕಿಲ್ಲದೆ ಸಾಯುವಿರಿ.


ಯಾಕೆಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶಮಾಡುವನು.


ಪಾಪದಿಂದ ತುಂಬಿದ ಇಸ್ರೇಲ್ ದೇಶವನ್ನು ಯೆಹೋವನು ನೋಡುತ್ತಿದ್ದಾನೆ. ಆತನು ಹೇಳಿದ್ದೇನೆಂದರೆ, “ನಾನು ಇಸ್ರೇಲರನ್ನು ಈ ಭೂಮುಖದಿಂದ ಅಳಿಸಿಬಿಡುವೆನು. ಆದರೆ ಯಾಕೋಬನ ಸಂತತಿಯವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ.


“ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದ್ದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”


ದೇವರೇ, ನಿನ್ನ ಕೋಪದ ಪೂರ್ಣ ಬಲವನ್ನು ಯಾರೂ ತಿಳಿಯರು. ನಿನ್ನಲ್ಲಿ ನಮಗಿರುವ ಭಯಭಕ್ತಿಯು ನಿನ್ನ ಕೋಪದಷ್ಟೇ ದೊಡ್ಡದಾಗಿವೆ.


ದೇವರೇ, ನಿನ್ನ ಕೋಪದಿಂದ ನಾವು ನಾಶವಾದೆವು. ನಿನ್ನ ರೌದ್ರವು ನಮ್ಮನ್ನು ತಲ್ಲಣಗೊಳಿಸಿದೆ.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ಅವನ ರಾಜ್ಯವು ವಿನಾಶಗೊಳ್ಳಲು ಮತ್ತು ಹಾಳಾಗಲು ಆ ಪಾಪವೇ ಕಾರಣವಾಯಿತು.


ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು.


ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ.


ಏಳು ದಿನಗಳ ನಂತರ ನಾನು ದೊಡ್ಡ ಮಳೆಯನ್ನು ಭೂಮಿಯ ಮೇಲೆ ಸುರಿಸುವೆನು. ಈ ಮಳೆಯು ನಲವತ್ತು ದಿವಸ ಹಗಲಿರುಳು ಸುರಿಯುವುದು. ನಾನು ನಿರ್ಮಿಸಿದ ಪ್ರತಿಯೊಂದು ಜೀವಿಯನ್ನೂ ನಾನು ಭೂಮಿಯ ಮೇಲಿಂದ ಅಳಿಸಿಬಿಡುವೆನು” ಎಂದು ಹೇಳಿದನು.


ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!


ಅಪರಿಚಿತರೊಂದಿಗೂ ನೀವು ನ್ಯಾಯಬದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯ ದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳುಮಾಡುತ್ತವೆ.


ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನ್ನನ್ನು ಶೀಘ್ರದಲ್ಲಿ ಈ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ಈ ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನ್ನು ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.’”


ನಾನು ವಾಸಿಸುವ ದೇಶವನ್ನು ನೀವು ಅಶುದ್ಧಮಾಡಬಾರದು, ಯಾಕೆಂದರೆ ಯೆಹೋವನಾದ ನಾನೇ ಇಸ್ರೇಲರೊಂದಿಗೆ ವಾಸಿಸುತ್ತೇನೆ.”


“ಯೆಹೋವನನ್ನೇ ಅನುಸರಿಸಿರಿ. ಇಸ್ರೇಲಿಗೆ ಸೇರಿಲ್ಲದ ಅನ್ಯರೊಂದಿಗೆ ಸ್ನೇಹ ಮಾಡಬೇಡಿ. ಅವರ ಜನರನ್ನು ಮದುವೆಯಾಗಬೇಡಿ. ನೀವು ಅವರೊಂದಿಗೆ ಸ್ನೇಹ ಮಾಡಿದರೆ,


ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆಮಾಡಿದರೆ ಈ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು,” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು