Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:18 - ಪರಿಶುದ್ದ ಬೈಬಲ್‌

18 ಯೋಗ್ಯವಾದವುಗಳನ್ನು, ಸರಿಯಾದವುಗಳನ್ನು ಮತ್ತು ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡಬೇಕು. ಆಗ ನಿಮ್ಮ ಕಾರ್ಯಗಳೆಲ್ಲವೂ ಸಫಲವಾಗುವುವು. ಅಲ್ಲದೆ ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದೊಳಗೆ ನೀವು ಹೋಗಿ ಅದನ್ನು ವಶಪಡಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನ ದೃಷ್ಟಿಗೆ ಯಾವುದು ನ್ಯಾಯವೂ ಮತ್ತು ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವುದು, ಮತ್ತು ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರನ ದೃಷ್ಟಿಯಲ್ಲಿ ಯಾವುದು ನ್ಯಾಯವೋ, ಯೋಗ್ಯವೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭ ಉಂಟಾಗುವುದು ಮತ್ತು ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನ ದೃಷ್ಟಿಗೆ ಯಾವದು ನ್ಯಾಯವೂ ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವದು, ಮತ್ತು ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮಗೆ ಒಳ್ಳೆಯದಾಗುವಂತೆಯೂ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ಒಳ್ಳೆಯ ದೇಶವನ್ನು ನೀವು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವಂತೆಯೂ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೂ, ಒಳ್ಳೆಯದನ್ನೂ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:18
23 ತಿಳಿವುಗಳ ಹೋಲಿಕೆ  

ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”


ಆದ್ದರಿಂದ ನೀವು ಅದನ್ನು ತಿನ್ನದೆ ಯೆಹೋವನು ನಿಮಗೆ ತಿಳಿಸಿದಂತೆ ಮಾಡಿರಿ. ಆಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.


ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.


ನನ್ನನ್ನು ಕಳುಹಿಸಿದಾತನು (ದೇವರು) ನನ್ನೊಂದಿಗೆ ಇದ್ದಾನೆ. ಆತನಿಗೆ ಮೆಚ್ಚಿಕೆಯಾದದ್ದನ್ನೇ ನಾನು ಯಾವಾಗಲೂ ಮಾಡುತ್ತೇನೆ. ಆದ್ದರಿಂದ ಆತನು ನನ್ನನ್ನು ಒಬ್ಬಂಟಿಗನಾಗಿ ಬಿಟ್ಟುಬಿಟ್ಟಿಲ್ಲ” ಎಂದು ಹೇಳಿದನು.


ಆದರೆ ಒಬ್ಬ ಪಾಪಿ ತನ್ನ ದುಷ್ಟತನವನ್ನು ಬಿಟ್ಟು ನೀತಿವಂತನಾಗಿ ಬಾಳಿದರೆ ಅವನು ಜೀವಿಸುವನು.


ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.


ಅವನು ಹಿಂದೆ ಮಾಡಿದ ದುಷ್ಕೃತ್ಯಗಳನ್ನು ನಾನು ನನ್ನ ನೆನಪಿಗೆ ತರುವದಿಲ್ಲ. ಯಾಕೆಂದರೆ ಈಗ ಅವನು ಶಿಷ್ಟನಾಗಿ ಬಾಳುತ್ತಿದ್ದಾನೆ. ಆದುದರಿಂದ ಅವನು ಜೀವಿಸುವನು.


“ಒಂದುವೇಳೆ ನಾನು ಒಬ್ಬ ದುಷ್ಟನಿಗೆ ನೀನು ಸಾಯುವಿ ಎಂದು ಹೇಳಿದರೆ ಅವನು ತನ್ನ ಜೀವಿತವನ್ನು ಬದಲಾಯಿಸಿ, ದುಷ್ಟತ್ವವನ್ನು ನಿಲ್ಲಿಸಿ, ಅವನು ನೀತಿವಂತನಾಗಿ ಬಾಳಿ


ಆದರೆ ಒಬ್ಬ ಪಾಪಿ ಬದಲಾವಣೆ ಹೊಂದಿ ನೀತಿವಂತನಾಗಿ ಬಾಳಿದರೆ ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


“ಒಂದುವೇಳೆ ದುಷ್ಟನೊಬ್ಬನು ತಾನು ಮಾಡಿದ ಎಲ್ಲಾ ಪಾಪಗಳಿಗೆ ವಿಮುಖನಾದರೆ, ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾದರೆ, ನ್ಯಾಯವಾದುದ್ದನ್ನೂ ಸರಿಯಾದುದ್ದನ್ನೂ ಮಾಡಿದರೆ, ಅವನು ಸಾಯದೆ ಬದುಕುವನು.


“ಒಬ್ಬ ವ್ಯಕ್ತಿ ನೀತಿವಂತನಾಗಿದ್ದರೆ ಅವನು ಬಾಳುವನು. ಆ ಮನುಷ್ಯನು ಜನರನ್ನು ಸರಿಯಾದ ರೀತಿಯಲ್ಲಿ ನೋಡುವನು.


ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು.


ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ; ಅವುಗಳನ್ನು ಕೈಕೊಂಡು ನಡೆದರೆ ಒಳ್ಳೆಯದಾಗುವುದು.


ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಟ್ಟರೆ, ನಾನು ನಿಮಗೆ ಕೊಡುವ ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾದರೆ ಇದು ಸಂಭವಿಸುವುದು. ನಿಮ್ಮ ದೇವರಾದ ಯೆಹೋವನು ಸರಿಯೆಂದು ಹೇಳುವ ಕಾರ್ಯಗಳನ್ನೇ ನೀವು ಮಾಡಬೇಕು.


ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.


“ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡದಂತೆ ಎಚ್ಚರವಾಗಿರಿ. ನಾನು ಕೊಡುವ ವಿಧಿನಿಯಮಗಳಿಗೆ ವಿಧೇಯರಾಗಿರಿ.


ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.


ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.


“‘ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳದಿರುವದೇಕೆ?’ ಎಂದು ನೀವು ಕೇಳಬಹುದು. ಮಗನು ನ್ಯಾಯವಾದುದ್ದನ್ನು ಮತ್ತು ಸರಿಯಾದುದ್ದನ್ನು ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದ್ದರಿಂದ ಅವನು ಬಾಳುವನು.


ಯೆಹೋವನು ಹೇಳಿದಂತೆಯೇ, ಅಲ್ಲಿ ವಾಸವಾಗಿರುವ ನಿಮ್ಮ ವೈರಿಗಳನ್ನೆಲ್ಲಾ ಹೊರಗಟ್ಟುವಿರಿ.


“ಯೆಹೋವನೇ, ನಾನು ನಿನಗೆ ಪೂರ್ಣಹೃದಯದಿಂದ ನಂಬಿಗಸ್ತನಾಗಿ ಸೇವೆಮಾಡಿದ್ದನ್ನು ಜ್ಞಾಪಿಸಿಕೋ. ನಿನಗೆ ಇಷ್ಟವಾದದ್ದನ್ನೆಲ್ಲ ನಾನು ಮಾಡಿದ್ದೇನೆ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


“ದೇವರಾದ ಯೆಹೋವನು ನಮಗೆ ಈ ದೇಶವನ್ನು ಕೊಡುವುದಾಗಿ ನಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ್ದನು. ಈಗ ಆ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಅದರಲ್ಲಿರುವ ದೊಡ್ಡದೊಡ್ಡ ನಗರಗಳನ್ನು ನೀವು ಕೈಯಿಂದ ಕಟ್ಟಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು