ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!
ಆತನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಡೆಸಿದ್ದನ್ನು ನೀವು ನೋಡಿದಿರಿ. ಆತನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬರಲು ತನ್ನ ಮಹಾಶಕ್ತಿಯನ್ನೂ ಬಲವನ್ನೂ ಬಳಸಿದ್ದನ್ನು ನೀವು ನೋಡಿದಿರಿ. ನೀವು ಭಯಪಡುವ ಎಲ್ಲಾ ಜನರ ಮೇಲೆ ದೇವರಾದ ಯೆಹೋವನು ಅದೇ ಶಕ್ತಿಯನ್ನು ಬಳಸುವನು.
ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.