Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:24 - ಪರಿಶುದ್ದ ಬೈಬಲ್‌

24 ಈ ಉಪದೇಶಗಳನ್ನೆಲ್ಲಾ ಅನುಸರಿಸಬೇಕೆಂದು ಯೆಹೋವನು ನಮಗೆ ಆಜ್ಞಾಪಿಸಿದ್ದಾನೆ. ನಮ್ಮ ದೇವರಾದ ಯೆಹೋವನನ್ನು ನಾವು ಗೌರವಿಸತಕ್ಕದ್ದು. ಆಗ ಇಂದಿನಂತೆ ಯೆಹೋವನು ನಮ್ಮನ್ನು ಜೀವಂತವಾಗಿರಿಸಿ ನಮಗೆ ಒಳ್ಳೆಯದನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ನಮಗೆ ಅಪ್ಪಣೆಮಾಡಿದ್ದಾರೆ. ಸದಾ ಶುಭವುಂಟಾಗಬೇಕಾದರೆ, ಅವರು ಎಂದಿನಂತೆ ನಮ್ಮ ಪ್ರಾಣಗಳನ್ನು ಕಾಪಾಡಬೇಕಾದರೆ ನಾವು ನಮ್ಮ ದೇವರಾದ ಸರ್ವೇಶ್ವರನಿಗೆ ಭಯಭಕ್ತಿಯುಳ್ಳವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ ಆತನು ಇಂದಿನಂತೆ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯ ಭಕ್ತಿಯುಳ್ಳವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಮಗೆ ಎಂದೆಂದಿಗೂ ಒಳ್ಳೆಯದಾಗುವಂತೆಯೂ, ಇಂದಿನಂತೆ ನಾವು ಬದುಕುವಂತೆಯೂ, ನಾವು ಈ ನಿಯಮಗಳನ್ನೆಲ್ಲಾ ಕೈಗೊಂಡು ನಮ್ಮ ಯೆಹೋವ ದೇವರಿಗೆ ಭಯಪಡಬೇಕೆಂದು ಅವರು ನಮಗೆ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:24
20 ತಿಳಿವುಗಳ ಹೋಲಿಕೆ  

ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಧಿಸಬೇಕೆಂಬ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು.


ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು. ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ.


ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು.


ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು” ಎಂದು ಮೋಶೆ ಹೇಳಿದ್ದಾನೆ.


“ನಾನು ಈ ದಿನ ಕೊಡುವ ಎಲ್ಲಾ ಆಜ್ಞೆಗಳನ್ನು ನೀವು ಅನುಸರಿಸಬೇಕು. ಆಗ ನೀವು ದೊಡ್ಡ ಜನಾಂಗವಾಗಿ ಅಭಿವೃದ್ಧಿಯಾಗುವಿರಿ. ನಿಮ್ಮ ಪೂರ್ವಿಕರಿಗೆ ಯೆಹೋವನು ವಾಗ್ದಾನ ಮಾಡಿದ ದೇಶವನ್ನು ನೀವು ಪಡೆದುಕೊಳ್ಳುವಿರಿ.


“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.


ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದು ದೀನತೆಯಿಂದಿರು; ಆಗ ನೀನು ಐಶ್ವರ್ಯ, ಸನ್ಮಾನ ಮತ್ತು ನಿಜಜೀವವನ್ನು ಹೊಂದಿಕೊಳ್ಳುವೆ.


ನೀನು ಜ್ಞಾನಿಯಾಗಿದ್ದರೆ ನಿನ್ನ ಜ್ಞಾನವು ನಿನಗೇ ಲಾಭಕರ. ಆದರೆ ನೀನು ದುರಾಭಿಮಾನದಿಂದ ಬೇರೆಯವರನ್ನು ಗೇಲಿಮಾಡಿದರೆ ನಿನ್ನನ್ನೇ ಕಷ್ಟಕ್ಕೆ ಗುರಿಮಾಡಿಕೊಳ್ಳುವೆ.


ನಮಗೆ ಜೀವಕೊಟ್ಟವನು ಆತನೇ. ನಮ್ಮನ್ನು ಕಾಪಾಡುವವನೂ ಆತನೇ.


ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.


ಆದರೆ ಯಾರು ದೇವರಾದ ಯೆಹೋವನನ್ನು ಮಾತ್ರ ಸೇವಿಸಿದರೋ ಅವರು ಈಗಲೂ ಜೀವಂತರಾಗಿದ್ದಾರೆ.


ಯೇಸು, “ನಿನ್ನ ಉತ್ತರ ಸರಿಯಾಗಿದೆ. ನೀನು ಹಾಗೆಯೇ ಮಾಡು, ಆಗ ನಿನಗೆ ನಿತ್ಯಜೀವ ದೊರೆಯುವುದು” ಅಂದನು.


ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ, ಯೆಹೋವನು ನಿಮ್ಮನ್ನು ಪರೀಕ್ಷಿಸಲು ಬಂದಿದ್ದಾನೆ. ನೀವು ಆತನಲ್ಲಿ ಭಕ್ತಿಯುಳ್ಳವರಾಗಿರಬೇಕೆಂದು ಆತನು ಬಯಸುತ್ತಾನೆ. ಆಗ ನೀವು ಪಾಪ ಮಾಡುವುದಿಲ್ಲ” ಎಂದು ಹೇಳಿದನು.


ಯೆಹೋವನು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನದಂತೆ ನಮಗೆ ಆ ದೇಶವನ್ನು ಕೊಡುವುದಕ್ಕಾಗಿ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.


ನೀವೂ ಮತ್ತು ನಿಮ್ಮ ಸಂತತಿಯವರೂ ಜೀವಿಸುವ ದಿನಗಳಲ್ಲೆಲ್ಲಾ ದೇವರಾದ ಯೆಹೋವನನ್ನು ಗೌರವಿಸಬೇಕು. ನಾನೀಗ ಕೊಡುವ ಎಲ್ಲಾ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸಬೇಕು. ಹಾಗೆ ಮಾಡಿದ್ದಲ್ಲಿ ನೀವು ನೆಲೆಸುವ ಜಾಗದಲ್ಲಿ ನೀವು ಬಹುಕಾಲ ಜೀವಿಸುವಿರಿ.


ಅವನು ಕಾಯಿಲೆಯಿಂದ ಹಾಸಿಗೆಯಲ್ಲಿರುವಾಗ ಯೆಹೋವನು ಅವನಿಗೆ ಬಲವನ್ನು ಕೊಡುವನು. ಅವನು ಕಾಯಿಲೆಯಿಂದ ಹಾಸಿಗೆಯಲ್ಲಿದ್ದರೂ ಯೆಹೋವನು ಅವನನ್ನು ಗುಣಪಡಿಸುವನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು