ಧರ್ಮೋಪದೇಶಕಾಂಡ 6:3 - ಪರಿಶುದ್ದ ಬೈಬಲ್3 ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದದರಿಂದ ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವದಕ್ಕೂ ನೀವು ಬಹಳವಾಗಿ ಹೆಚ್ಚುವದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹೀಗಿರುವುದರಿಂದ ಓ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ವಿಧೇಯರಾಗಿರಿ. ಅಧ್ಯಾಯವನ್ನು ನೋಡಿ |
ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.