ಧರ್ಮೋಪದೇಶಕಾಂಡ 6:5 - ಪರಿಶುದ್ದ ಬೈಬಲ್5 ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.
ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.