ಧರ್ಮೋಪದೇಶಕಾಂಡ 6:9 - ಪರಿಶುದ್ದ ಬೈಬಲ್9 ಅವುಗಳನ್ನು ನಿಮ್ಮ ಬಾಗಿಲಿನ ಮೇಲೆಯೂ ನಿಲುವುಪಟ್ಟಿಗಳ ಮೇಲೆಯೂ ಬರೆಯಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿಮ್ಮ ಮನೆಬಾಗಿಲಿನ ನಿಲುವು ಪಟ್ಟಿಗಳಲ್ಲಿಯೂ ಮತ್ತು ದ್ವಾರಗಳ ಮೇಲೆಯೂ ಇವುಗಳನ್ನು ಬರೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿನ್ನ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲೂ ತಲೆಬಾಗಿಲಿನ ಮೇಲೂ ಅವುಗಳನ್ನು ಬರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿಮ್ಮ ಮನೆ ಬಾಗಲಿನ ನಿಲುವುಪಟ್ಟಿಗಳಲ್ಲಿಯೂ ತಲೆಬಾಗಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು. ಅಧ್ಯಾಯವನ್ನು ನೋಡಿ |
ಆ ಬಳಿಕ ಆ ಹಾಸಿಗೆಯ ಮೇಲೆ ಮಲಗಿ ಆ ದೇವರುಗಳನ್ನು ಪ್ರೀತಿಸಿ ನನಗೆ ವಿರುದ್ಧವಾಗಿ ಪಾಪ ಮಾಡುತ್ತೀರಿ. ನೀವು ಆ ದೇವರುಗಳನ್ನು ಪ್ರೀತಿಸುತ್ತೀರಿ. ಅವುಗಳ ಬೆತ್ತಲೆ ಶರೀರಗಳನ್ನು ನೋಡುವದರಲ್ಲಿ ಸಂತೋಷಿಸುವಿರಿ. ನೀವು ನನ್ನೊಂದಿಗೆ ಇದ್ದಿರಿ. ಆದರೆ ಈಗ ನನ್ನನ್ನು ತೊರೆದು ಅವುಗಳನ್ನು ಸೇರಿಕೊಂಡಿದ್ದೀರಿ. ನನ್ನನ್ನು ಜ್ಞಾಪಕ ಹುಟ್ಟಿಸುವ ವಿಷಯಗಳನ್ನು ನೀವು ಅಡಗಿಸಿಡುತ್ತೀರಿ. ಅವುಗಳನ್ನು ಬಾಗಿಲ ಹಿಂದೆ ಅಡಗಿಸಿಡುತ್ತೀರಿ. ಅನಂತರ ನೀವು ಹೋಗಿ ಆ ಸುಳ್ಳುದೇವರೊಂದಿಗೆ ಒಪ್ಪಂದ ಮಾಡುತ್ತೀರಿ.