ಧರ್ಮೋಪದೇಶಕಾಂಡ 7:1 - ಪರಿಶುದ್ದ ಬೈಬಲ್1 “ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು. ಅಧ್ಯಾಯವನ್ನು ನೋಡಿ |
ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.
ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.
ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.