12 “ನೀವು ಈ ಕಟ್ಟಳೆಗಳಿಗೆ ಕಿವಿಗೊಡುವುದಾದರೆ ಮತ್ತು ಅವುಗಳಿಗೆ ಎಚ್ಚರಿಕೆಯಿಂದ ವಿಧೇಯರಾದರೆ, ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರೊಡನೆ ಮಾಡಿಕೊಂಡ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವನು;
12 ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ಒಡಂಬಡಿಕೆಯನ್ನು ನಂಬಿಗಸ್ತಿಕೆಯಿಂದ ನೆರವೇರಿಸುವವನಾಗಿದ್ದಾನೆ.
12 “ಈ ವಿಧಿಗಳನ್ನು ನೀವು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸುವರು, ನಿಮಗೆ ಕೃಪೆತೋರುವರು,
12 ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ನಿಮ್ಮಲ್ಲಿ ನೆರವೇರಿಸುವವನಾಗಿ
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.
ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.
“ಯೆಹೋವನು ಹೀಗೆನ್ನುತ್ತಾನೆ: ‘ಇಂದು ನಾನು ನಿಮಗೆ ಕೊಟ್ಟ ಆಜ್ಞೆಗಳನ್ನೆಲ್ಲ ಗಮನವಿಟ್ಟು ಕೇಳಿರಿ: ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕು. ಹೀಗೆ ಮಾಡಿದರೆ
“ನಾನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಲು ನಾನು ಇದೆಲ್ಲವನ್ನು ಮಾಡಿದೆ. ನಾನು ಅವರಿಗೆ ಫಲವತ್ತಾದ ಭೂಮಿಯನ್ನೂ ಹಾಲು ಮತ್ತು ಜೇನು ಹರಿಯುವ ಪ್ರದೇಶವನ್ನೂ ಕೊಡುವ ವಾಗ್ದಾನ ಮಾಡಿದ್ದೆ. ನೀವು ಈಗ ಈ ಪ್ರದೇಶದಲ್ಲಿ ವಾಸಮಾಡುತ್ತಿದ್ದೀರಿ.” ನಾನು, “ಯೆಹೋವನೇ ನಿನ್ನ ಅಪ್ಪಣೆಯಂತಾಗಲಿ” ಎಂದು ಉತ್ತರಿಸಿದೆನು.
ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”
“ಇಸ್ರೇಲಿನ ದೇವರಾದ ಯೆಹೋವನೇ, ಭೂಲೋಕದಲ್ಲಾಗಲಿ ಆಕಾಶಮಂಡಲದಲ್ಲಾಗಲಿ ನಿನ್ನಂತಹ ದೇವರು ಮತ್ತೊಬ್ಬರಿಲ್ಲ. ನೀನು ಜನರನ್ನು ಪ್ರೀತಿಸುವುದರಿಂದ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ನೀನು ನಿನ್ನ ಒಡಂಬಡಿಕೆಗಳನ್ನು ನೆರವೇರಿಸುವೆ. ನಿನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸುವ ಜನರಿಗೆ ನೀನು ದಯಾಳುವಾಗಿರುವೆ ಮತ್ತು ನಂಬಿಗಸ್ತನಾಗಿರುವೆ.
ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.
ನಾನು ಯೆಹೋವನಾದ ನನ್ನ ದೇವರನ್ನು ಪ್ರಾರ್ಥಿಸಿದೆ. ನಾನು ನನ್ನ ಎಲ್ಲ ಪಾಪಗಳ ಬಗ್ಗೆ ಆತನಿಗೆ ಹೇಳಿದೆ. ನಾನು, “ಯೆಹೋವನೇ, ನೀನು ಭಯಂಕರನಾಗಿರುವೆ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ, ಮಾಡಿದ ಪ್ರೀತಿಯ ಮತ್ತು ಕರುಣೆಯ ವಾಗ್ದಾನಗಳನ್ನು ನೀನು ನೆರವೇರಿಸುವೆ.