Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:13 - ಪರಿಶುದ್ದ ಬೈಬಲ್‌

13 ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವ್ಯವಸಾಯವನ್ನೂ, ನಿಮಗಿರುವ ದವಸ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮನ್ನು ಅಚಲವಾಗಿ ಪ್ರೀತಿಸಿ, ಅಭಿವೃದ್ಧಿಗೊಳಿಸುವರು; ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಿಮ್ಮ ಸಂತಾನವನ್ನು, ವ್ಯವಸಾಯವನ್ನು, ದವಸಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಹಾಗು ದನಕುರಿಗಳ ಮಂದೆಯನ್ನು ವೃದ್ಧಿಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮನ್ನು ಪ್ರೀತಿಸಿ ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ ವ್ಯವಸಾಯವನ್ನೂ ನಿಮಗಿರುವ ಧಾನ್ಯದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ನಿಮ್ಮ ದನಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:13
26 ತಿಳಿವುಗಳ ಹೋಲಿಕೆ  

ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.


ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ಹೌದು, ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. ನೀವು ನನ್ನನ್ನು ಪ್ರೀತಿಸಿದರಿಂದ ಮತ್ತು ನಾನು ದೇವರಿಂದ ಬಂದೆನೆಂದು ನೀವು ನಂಬುವುದರಿಂದ ಆತನು ನಿಮ್ಮನ್ನು ಪ್ರೀತಿಸುತ್ತಾನೆ.


ನೀವು ನಿಮ್ಮ ದೇವರಾದ ಯೆಹೋವನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಾನು ನಿಮ್ಮೊಳಗಿಂದ ಎಲ್ಲಾ ವ್ಯಾಧಿಯನ್ನು ತೆಗೆದುಬಿಡುವೆನು.


ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.


ಯೆಹೋವನು ಯೋಬನ ಜೀವಿತದ ಅಂತಿಮ ಸ್ಥಿತಿಯನ್ನು ಮೊದಲನೆ ಸ್ಥಿತಿಗಿಂತಲೂ ಹೆಚ್ಚಾಗಿ ಆಶೀರ್ವದಿಸಿದನು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಒಂದು ಸಾವಿರ ಜೊತೆ ಎತ್ತುಗಳೂ ಒಂದು ಸಾವಿರ ಹೆಣ್ಣು ಕತ್ತೆಗಳೂ ಇದ್ದವು.


“ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯ ವಸ್ತುಗಳನ್ನು ಕೊಡುವನು; ನಿಮಗೆ ಹೆಚ್ಚು ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಪಶುಗಳು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶದಲ್ಲಿ ನಿಮ್ಮ ಹೊಲವು ಒಳ್ಳೆಯ ಬೆಳೆಗಳನ್ನು ಫಲಿಸುತ್ತದೆ.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.


ದೇವರು ನಿಮ್ಮನ್ನೇ ಯಾಕೆ ಪ್ರೀತಿಸಿ ಆರಿಸಿಕೊಂಡನು? ನೀವು ದೊಡ್ಡ ಜನಾಂಗವಾಗಿರುವ ಕಾರಣದಿಂದಲ್ಲ, ನಿಜವಾಗಿಯೂ ನೀವು ಚಿಕ್ಕ ಜನಾಂಗವೇ.


ಯಾಕೆಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ; ಆತನು ನ್ಯಾಯವನ್ನು ಪ್ರೀತಿಸುತ್ತಾನೆ. ನೀತಿವಂತರು ಆತನ ಮುಖವನ್ನು ನೋಡುವರು.


“ಬಳಿಕ ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವೆನು. ನಾನು ನಿಮ್ಮೊಡನೆ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ನೆರವೇರಿಸುವೆನು.


ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರ ಮಾಡುವನು.


ನಿಮ್ಮ ಪೂರ್ವಿಕರು ವಾಸಿಸಿದ ಸ್ಥಳಕ್ಕೆ ನಿಮ್ಮನ್ನು ಮತ್ತೆ ಬರಮಾಡುವನು. ಆ ದೇಶವು ನಿಮ್ಮದಾಗುವುದು. ಯೆಹೋವನು ನಿಮಗೆ ಒಳ್ಳೆಯದನ್ನು ಮಾಡುವನು. ನಿಮ್ಮ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಅಭಿವೃದ್ಧಿಪಡಿಸುವನು.


ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ.


ಯೆಹೋವನು ಕುರುಡರಿಗೆ ದೃಷ್ಟಿಕೊಡುವನು. ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು. ಯೆಹೋವನು ನೀತಿವಂತರನ್ನು ಪ್ರೀತಿಸುವನು.


ದುಷ್ಟರ ಜೀವಿತವು ಯೆಹೋವನಿಗೆ ಅಸಹ್ಯ. ಒಳ್ಳೆಯದನ್ನು ಮಾಡಲಿಚ್ಛಿಸುವವರು ಯೆಹೋವನಿಗೆ ಪ್ರಿಯ.


ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”


“ನಾನು ಹೇಳಿದಂಥ ಎಲ್ಲಾ ಧರ್ಮಶಾಸ್ತ್ರವನ್ನು ಅನುಸರಿಸಿ ಅದಕ್ಕೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ಪ್ರಪಂಚದ ಎಲ್ಲಾ ದೇಶಗಳಿಗಿಂತ ನಿಮ್ಮ ದೇಶವನ್ನು ಅತೀ ಉನ್ನತಸ್ಥಾನದಲ್ಲಿರುವ ದೇಶವನ್ನಾಗಿ ಮಾಡುವನು.


ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.


ನೀನು ಅವನನ್ನೂ ಅವನ ಕುಟುಂಬವನ್ನೂ ಅವನ ಆಸ್ತಿಯನ್ನೂ ಸಂರಕ್ಷಿಸುತ್ತಿರುವೆ. ಅವನ ಕೆಲಸಕಾರ್ಯಗಳನ್ನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲೆಲ್ಲಾ ವೃದ್ಧಿಯಾಗುತ್ತಿದೆ.


ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. ಅವರ ಪಶುಗಳು ಅಸಂಖ್ಯಾತಗೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು