ಧರ್ಮೋಪದೇಶಕಾಂಡ 7:14 - ಪರಿಶುದ್ದ ಬೈಬಲ್14 “ಎಲ್ಲಾ ಜನರಿಗಿಂತ ನೀವು ಹೆಚ್ಚಾಗಿ ಆಶೀರ್ವದಿಸಲ್ಪಡುವಿರಿ. ಪ್ರತಿಯೊಂದು ಕುಟುಂಬದಲ್ಲಿ ಹೆಚ್ಚು ಮಕ್ಕಳಿರುವರು. ನಿಮ್ಮ ಹಸುಗಳು ಮರಿಗಳನ್ನು ಈಯುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀವು ಎಲ್ಲ ಜನಗಳಿಗಿಂತ ಹೆಚ್ಚಾಗುವಿರಿ, ದೇವರ ಅನುಗ್ರಹವನ್ನು ಹೊಂದುವಿರಿ. ನಿಮ್ಮಲ್ಲಿ ಸ್ತ್ರೀಪುರುಷರಲ್ಲಾಗಲಿ, ಹೆಣ್ಣುಗಂಡು ಪಶುಪ್ರಾಣಿಗಳಲ್ಲಾಗಲಿ, ಬಂಜೆತನ ಎಂಬುದು ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ ಹೆಣ್ಣು ಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಎಲ್ಲಾ ಜನರಿಗಿಂತಲೂ ನೀವು ಆಶೀರ್ವಾದಕ್ಕೆ ಪಾತ್ರರಾಗಿರುವಿರಿ. ನಿಮ್ಮೊಳಗೆ ಸ್ತ್ರೀ ಪುರುಷರಲ್ಲಾಗಲಿ, ಹೆಣ್ಣು ಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ. ಅಧ್ಯಾಯವನ್ನು ನೋಡಿ |
ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ದೇವರು ಮಾಡುವನು. ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ದನಗಳನ್ನು ಆಶೀರ್ವದಿಸುವನು. ಅವುಗಳಿಗೆ ಅನೇಕ ಕರುಗಳಿರುವವು. ನಿಮ್ಮ ಹೊಲಗಳು ಅಧಿಕವಾದ ಬೆಳೆಯನ್ನು ಕೊಡುವಂತೆ ಆಶೀರ್ವದಿಸುವನು. ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವುದರಲ್ಲಿ ಸಂತೋಷಿಸುವನು. ನಿಮ್ಮ ಪೂರ್ವಿಕರಿಗೆ ಮೇಲನ್ನು ಉಂಟುಮಾಡಲು ಆತನು ಬಯಸಿದ್ದನು.