Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:16 - ಪರಿಶುದ್ದ ಬೈಬಲ್‌

16 ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯಪಡಿಸುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:16
21 ತಿಳಿವುಗಳ ಹೋಲಿಕೆ  

ನಿಮ್ಮ ದೇಶದಲ್ಲಿ ವಾಸಿಸಲು ಅವರನ್ನು ಬಿಡಬೇಡಿರಿ. ಇಲ್ಲವಾದರೆ ಅವರು ನಿಮ್ಮಲ್ಲಿ ದ್ರೋಹ ಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವರುಗಳನ್ನು ಪೂಜಿಸಿದರೆ ಆ ಪೂಜೆಯೂ ನಿಮಗೆ ಉರುಲಾಗುವುದು.”


ಗಿದ್ಯೋನನು ಈ ಚಿನ್ನವನ್ನು ಒಂದು ಏಫೋದ್ ಮಾಡುವುದಕ್ಕೆ ಬಳಸಿದನು. ಆ ಏಫೋದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಇಸ್ರೇಲರು ಈ ಏಫೋದನ್ನು ಆರಾಧಿಸಿದರು. ಹೀಗಾಗಿ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಗಿದ್ಯೋನನನ್ನು ಮತ್ತು ಅವನ ಕುಟುಂಬದವರನ್ನು ಪಾಪಮಾರ್ಗಕ್ಕೆ ಎಳೆಯಲು ಏಫೋದ್ ಒಂದು ಉರುಲಾಗಿ ಪರಿಣಮಿಸಿತು.


ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.”


ಅಂಥವಳ ಕೈಯನ್ನು ಕಡಿದುಹಾಕಿರಿ; ದಯೆ ತೋರಿಸಬೇಡಿ.


“ಅಪರಾಧ ಎಷ್ಟು ಭಯಂಕರವಾಗಿರುವುದೋ ಅಷ್ಟೇ ಭಯಂಕರ ಶಿಕ್ಷೆಯೂ ಇರಬೇಕು. ತಪ್ಪು ಮಾಡಿದವನನ್ನು ಶಿಕ್ಷಿಸಲು ಬೇಸರಪಟ್ಟುಕೊಳ್ಳಬಾರದು. ಒಬ್ಬನು ಪ್ರಾಣಹತ್ಯೆ ಮಾಡಿದರೆ ಅವನ ಪ್ರಾಣವೂ ತೆಗೆಯಲ್ಪಡಬೇಕು. ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಎಂಬ ನೀತಿಯನ್ನು ಅನುಸರಿಸಬೇಕು.


ನೀವು ಅವನ ವಿಷಯದಲ್ಲಿ ದುಃಖಪಡಬಾರದು. ಯಾಕೆಂದರೆ ಅವನು ನಿರಪರಾಧಿಯನ್ನು ಕೊಂದ ಅಪರಾಧಿಯಾಗಿದ್ದಾನೆ. ಅವನು ಮಾಡಿದ ಪಾಪವನ್ನು ಇಸ್ರೇಲಿನಿಂದ ತೆಗೆದುಹಾಕಬೇಕು. ಆಗ ನಿಮಗೆ ಶುಭವಾಗುವುದು.


ಎಂದರೆ ಆ ವ್ಯಕ್ತಿಯ ಸಲಹೆಗೆ ನೀವು ಒಪ್ಪಬಾರದು. ಅವನಿಗೆ ಕಿವಿಗೊಡಬೇಡಿ; ಅವನಿಗೆ ಕನಿಕರತೋರಬೇಡಿ; ಅವನು ಸ್ವತಂತ್ರನಾಗಿ ಹೋಗಲು ಬಿಡಬೇಡಿ; ಅವನನ್ನು ಸಂರಕ್ಷಿಸಬೇಡಿ.


ಅವರು ದೇವಜನರಿಗೆ ಉರುಲಿನಂತಾದರು. ಅವರ ದೇವರುಗಳನ್ನು ದೇವಜನರು ಪೂಜಿಸತೊಡಗಿದರು.


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ.


“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’


ಇಸ್ರೇಲರು ಅವರ ಕನ್ಯೆಯರನ್ನು ಮದುವೆಯಾಗ ತೊಡಗಿದರು ಮತ್ತು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟರು ಮತ್ತು ಅವರ ದೇವರುಗಳನ್ನು ಪೂಜಿಸಲು ಪ್ರಾರಂಭಿಸಿದರು.


“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ‘ಈ ಪ್ರದೇಶವನ್ನು ಬಿಟ್ಟುಹೋಗುವಂತೆ ನಾನು ಈ ಜನರನ್ನು ಬಲವಂತ ಮಾಡುವುದಿಲ್ಲ. ಈ ಜನರು ನಿಮಗೊಂದು ಸಮಸ್ಯೆಯಾಗುತ್ತಾರೆ. ಅವರು ನಿಮಗೊಂದು ಉರುಲಾಗುತ್ತಾರೆ. ಅವರ ಸುಳ್ಳುದೇವರುಗಳು ನಿಮಗೆ ಬಲೆಯಂತೆ ಉರುಲಾಗುತ್ತವೆ.’”


“ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು.


ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಿದ್ದನು. ಅವರ ಪೂರ್ವಿಕರು ಯೆಹೋವನನ್ನು ಆರಾಧಿಸುತ್ತಿದ್ದರು. ಆದರೆ ಇಸ್ರೇಲರು ಯೆಹೋವನನ್ನು ಅನುಸರಿಸದೆ ತಮ್ಮ ಸುತ್ತಮುತ್ತಲಿನ ಜನರ ಸುಳ್ಳುದೇವರುಗಳನ್ನು ಪೂಜಿಸಲು ಆರಂಭಿಸಿದರು. ಆದ್ದರಿಂದ ಯೆಹೋವನಿಗೆ ಕೋಪ ಬಂತು.


“ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.


ತಾವು ಶಕ್ತಿಶಾಲಿಗಳೆಂಬ ಭಾವನೆಯನ್ನು ಯೆಹೋವನು ಆ ಜನರಲ್ಲಿ ಹುಟ್ಟಿಸಿ ಅವರನ್ನು ಇಸ್ರೇಲರ ಮೇಲೆ ಯುದ್ಧಕ್ಕೆ ಬರಮಾಡಿದನು. ಯುದ್ಧದಲ್ಲಿ ಕರುಣೆಯಿಲ್ಲದೆ ಅವರನ್ನು ಸಂಹರಿಸಬೇಕೆಂಬುದು ಯೆಹೋವನ ಯೋಜನೆಯಾಗಿತ್ತು. ಯೆಹೋವನು ಮೋಶೆಗೆ ಹೇಳಿದ ರೀತಿಯಲ್ಲಿ ಯೆಹೋಶುವನು ಆ ಪಟ್ಟಣಗಳನ್ನು ನಾಶಮಾಡಲು ಇದರಿಂದ ಸಾಧ್ಯವಾಯಿತು.


ಕಾನಾನಿನಲ್ಲಿ ವಾಸವಾಗಿದ್ದ ಅನ್ಯ ಜನಾಂಗಗಳನ್ನು ನಾಶಮಾಡಲು ಯೆಹೋವನು ಅವರಿಗೆ ಹೇಳಿದನು. ಆದರೆ ಇಸ್ರೇಲರು ದೇವರಿಗೆ ವಿಧೇಯರಾಗಲಿಲ್ಲ.


ನೀವು ಅವನನ್ನು ಕೊಂದುಹಾಕಬೇಕು. ನೀವು ಕಲ್ಲೆಸೆದು ಅವನನ್ನು ಸಾಯಿಸಬೇಕು. ನೀವು ಅವನ ಮೇಲೆ ಮೊದಲನೆ ಕಲ್ಲನ್ನು ಎಸೆಯಬೇಕು. ಈಜಿಪ್ಟಿನ ದಾಸತ್ವದಿಂದ ನಿಮ್ಮನ್ನು ಬಿಡಿಸಿಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಡೆದುಕೊಳ್ಳುವಂತೆ ನಿಮ್ಮನ್ನು ಪ್ರೇರೇಪಿಸಿದವನು ಅವನೇ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು