19 ಆತನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಡೆಸಿದ್ದನ್ನು ನೀವು ನೋಡಿದಿರಿ. ಆತನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬರಲು ತನ್ನ ಮಹಾಶಕ್ತಿಯನ್ನೂ ಬಲವನ್ನೂ ಬಳಸಿದ್ದನ್ನು ನೀವು ನೋಡಿದಿರಿ. ನೀವು ಭಯಪಡುವ ಎಲ್ಲಾ ಜನರ ಮೇಲೆ ದೇವರಾದ ಯೆಹೋವನು ಅದೇ ಶಕ್ತಿಯನ್ನು ಬಳಸುವನು.
19 ಆಗ ನೀವು ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.
19 ಆಗ ನೀವೇ ಕಣ್ಣಾರೆ ನೋಡಿದಂತೆ ಸರ್ವೇಶ್ವರ ವಿಶೇಷ ಪರಿಶೋಧನೆ, ಪವಾಡ, ಮಹತ್ಕಾರ್ಯ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದರಲ್ಲವೆ? ನೀವು ಹೆದರಿಕೊಳ್ಳುವ ಆ ಎಲ್ಲ ಜನಾಂಗಗಳಿಗೂ ಅವರು ಹಾಗೆಯೇ ಮಾಡುವರು.
19 ನೀವು ಆಗ ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.
19 ಕಣ್ಣಾರೆ ನೋಡಿದ ದೊಡ್ಡ ಉಪದ್ರವಗಳನ್ನೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ, ಅದ್ಭುತಗಳನ್ನೂ, ದೇವರ ಬಲವಾದ ಹಸ್ತವನ್ನೂ, ಚಾಚಿದ ತೋಳನ್ನೂ ನೀವು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀವು ಯಾವ ಜನರಿಗೆ ಭಯಪಡುತ್ತೀರೋ, ಆ ಜನರಿಗೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ಹಾಗೆಯೇ ಮಾಡುವರು.
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!
ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.
ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.
ಆಗ ಯೆಹೋಶುವನು ತನ್ನ ಜನರಿಗೆ, “ಸ್ಥಿರಚಿತ್ತರಾಗಿರಿ, ಧೈರ್ಯದಿಂದಿರಿ, ಅಂಜಬೇಡಿರಿ, ಇನ್ನು ಮುಂದೆ ನಮ್ಮ ಜೊತೆ ಹೋರಾಡುವ ಎಲ್ಲ ಶತ್ರುಗಳಿಗೆ ಯೆಹೋವನು ಏನು ಮಾಡುತ್ತಾನೆಂಬುದನ್ನು ನಿಮಗೆ ತೋರಿಸುತ್ತೇನೆ” ಎಂದು ಹೇಳಿದನು.
ನಮ್ಮ ಜನರನ್ನು ಈಜಿಪ್ಟಿನಿಂದ ಹೊರತಂದವನು ನಮ್ಮ ದೇವರಾದ ಯೆಹೋವನೆಂದು ನಮಗೆ ಗೊತ್ತು. ನಾವು ಈಜಿಪ್ಟಿನಲ್ಲಿ ಗುಲಾಮರಾಗಿದ್ದೆವು; ಆದರೆ ಯೆಹೋವನು ಅಲ್ಲಿ ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿ ನಮ್ಮನ್ನು ಅಲ್ಲಿಂದ ಬಿಡಿಸಿಕೊಂಡು ಬಂದನು. ನಾವು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿಕೊಂಡು ಬರುವಾಗ ನಮ್ಮನ್ನು ರಕ್ಷಿಸಿದನು.