Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:22 - ಪರಿಶುದ್ದ ಬೈಬಲ್‌

22 ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸ್ವಲ್ಪ ಸ್ವಲ್ಪವಾಗಿಯೇ ಅಲ್ಲಿಂದ ತೆಗೆದುಬಿಡುವನು. ನೀವು ಒಂದೇ ಸಮಯಕ್ಕೆ ಎಲ್ಲರನ್ನು ನಾಶಮಾಡಬಾರದು. ಹಾಗೆ ಮಾಡಿದ್ದಲ್ಲಿ ದೇಶದಲ್ಲೆಲ್ಲಾ ಕಾಡುಪ್ರಾಣಿಗಳು ತುಂಬಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆ ಇದ್ದಾರೆ. ಅವರು ಭಯಭಕ್ತಿಗೆ ಪಾತ್ರರಾದ ಮಹಾದೇವರು. ನಿಮ್ಮ ದೇವರಾದ ಸರ್ವೇಶ್ವರ ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪ ಸ್ವಲ್ಪವಾಗಿ ಹೊರಡಿಸುವರು. ನೀವು ಬಹು ಶೀಘ್ರವಾಗಿ ಅವರನ್ನು ನಿರ್ಮೂಲಮಾಡಕೂಡದು; ಮಾಡಿದರೆ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯನ್ನುಂಟುಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಎದುರಿನಿಂದ ಸ್ವಲ್ಪಸ್ವಲ್ಪವಾಗಿ ಹೊರಡಿಸುತ್ತಿರುವನು. ನೀವು ಬಹು ಶೀಘ್ರವಾಗಿ ಅವರನ್ನು ನಿರ್ಮೂಲಮಾಡಕೂಡದು; ಮಾಡಿದರೆ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯನ್ನುಂಟುಮಾಡಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಿಮ್ಮ ದೇವರಾದ ಯೆಹೋವ ದೇವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವರು. ನೀವು ಅವರನ್ನು ತ್ವರೆಯಾಗಿ ಸಂಹರಿಸಬಾರದು. ಹಾಗೆ ಮಾಡಿದರೆ, ಕಾಡುಮೃಗಗಳು ಹೆಚ್ಚಾಗಿ ನಿಮಗೆ ತೊಂದರೆಕೊಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:22
3 ತಿಳಿವುಗಳ ಹೋಲಿಕೆ  

ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.


ಆದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನದಿಯನ್ನು ದಾಟುತ್ತಾನೆಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಆತನು ದಹಿಸುವ ಬೆಂಕಿಯಂತಿದ್ದಾನೆ. ಆತನು ಆ ಜನಾಂಗಗಳನ್ನು ಬೇಗನೆ ನಾಶಪಡಿಸುವನು; ನಿಮ್ಮ ಎದುರಿನಲ್ಲಿ ಅವರು ಬಿದ್ದುಹೋಗುವಂತೆ ಮಾಡುವನು. ಇದು ನೆರವೇರುವುದಾಗಿ ಯೆಹೋವನೇ ನಿಮಗೆ ವಾಗ್ದಾನ ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು