ಧರ್ಮೋಪದೇಶಕಾಂಡ 7:8 - ಪರಿಶುದ್ದ ಬೈಬಲ್8 ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ನಿಮ್ಮನ್ನು ಪ್ರೀತಿಸಿ, ತಾನು ನಿಮ್ಮ ಪೂರ್ವಿಕರಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ನಿಮ್ಮನ್ನು ಪ್ರೀತಿಸಿ ತಾನು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿ ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು. ಅಧ್ಯಾಯವನ್ನು ನೋಡಿ |
ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!