ಧರ್ಮೋಪದೇಶಕಾಂಡ 7:9 - ಪರಿಶುದ್ದ ಬೈಬಲ್9 “ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.
ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.