ಧರ್ಮೋಪದೇಶಕಾಂಡ 8:1 - ಪರಿಶುದ್ದ ಬೈಬಲ್1 “ನಾನು ಈ ದಿನ ಕೊಡುವ ಎಲ್ಲಾ ಆಜ್ಞೆಗಳನ್ನು ನೀವು ಅನುಸರಿಸಬೇಕು. ಆಗ ನೀವು ದೊಡ್ಡ ಜನಾಂಗವಾಗಿ ಅಭಿವೃದ್ಧಿಯಾಗುವಿರಿ. ನಿಮ್ಮ ಪೂರ್ವಿಕರಿಗೆ ಯೆಹೋವನು ವಾಗ್ದಾನ ಮಾಡಿದ ದೇಶವನ್ನು ನೀವು ಪಡೆದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬಾಳಿ ಅಭಿವೃದ್ಧಿಯಾಗುವಿರಿ. ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚಿ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನೀವು ಬದುಕಿ ಅಭಿವೃದ್ಧಿಯಾಗಿ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಿ, ಅದನ್ನು ಸ್ವಾಧೀನ ಮಾಡಿಕೊಳ್ಳುವ ಹಾಗೆ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಗೊಳ್ಳಿರಿ. ಅಧ್ಯಾಯವನ್ನು ನೋಡಿ |