Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:11 - ಪರಿಶುದ್ದ ಬೈಬಲ್‌

11 “ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡದಂತೆ ಎಚ್ಚರವಾಗಿರಿ. ನಾನು ಕೊಡುವ ವಿಧಿನಿಯಮಗಳಿಗೆ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಎಚ್ಚರಿಕೆ, ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಅವರನ್ನು ಮರೆತುಬಿಡುವವರೂ ಆಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಆತನನ್ನು ಮರೆಯುವವರೂ ಆಗಬೇಡಿರಿ, ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ಈ ಹೊತ್ತು ನಿಮಗೆ ಕೊಡುವ ದೇವರ ಆಜ್ಞೆಗಳನ್ನೂ ನಿಯಮಗಳನ್ನೂ ತೀರ್ಪುಗಳನ್ನೂ ಕೈಕೊಳ್ಳದವರೂ, ಯೆಹೋವ ದೇವರನ್ನು ಮರೆಯದವರೂ ಆಗದಂತೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:11
19 ತಿಳಿವುಗಳ ಹೋಲಿಕೆ  

ಆತನು ನಮ್ಮ ಪೂರ್ವಿಕರನ್ನು ರಕ್ಷಿಸಿದರೂ ಅವರು ಆತನನ್ನು ಮರೆತುಬಿಟ್ಟರು! ಈಜಿಪ್ಟಿನಲ್ಲಿ ಮಹತ್ಕಾರ್ಯಗಳನ್ನು ಮಾಡಿದ ದೇವರನ್ನು ಅವರು ಮರೆತುಬಿಟ್ಟರು.


“ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು.


ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.


ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು.


ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.


ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.


ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.


“ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”


“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.


“ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.


ನೀವು ಕೂಡಿಸಿಡದ ಉತ್ತಮ ವಸ್ತುಗಳಿಂದ ತುಂಬಿರುವ ಮನೆಗಳನ್ನು ಯೆಹೋವನು ನಿಮಗೆ ಕೊಡುತ್ತಾನೆ. ನೀವು ತೋಡದಿರುವ ಬಾವಿಗಳನ್ನು ನಿಮಗೆ ಕೊಡುವನು. ನೀವು ನೆಡದಿರುವ ದ್ರಾಕ್ಷಾತೋಟಗಳನ್ನೂ ಎಣ್ಣೆಮರಗಳ ತೋಪುಗಳನ್ನೂ ನಿಮಗೆ ಕೊಡುವನು. ನಿಮಗೆ ತಿನ್ನಲು ಯಾವ ಕೊರತೆಯೂ ಇರುವುದಿಲ್ಲ.


ಆದ್ದರಿಂದ ನಾನು ಈ ದಿನ ನಿಮಗೆ ಕೊಡುವ ಆಜ್ಞಾವಿಧಿನಿಯಮಗಳನ್ನು ನೀವು ಚೆನ್ನಾಗಿ ಮನದಟ್ಟು ಮಾಡಿಕೊಳ್ಳಬೇಕು.


ಈ ದೇಶದಲ್ಲಿ ನೀವು ವಾಸಿಸುವಾಗ ನಾನು ಈ ಹೊತ್ತು ನಿಮಗೆ ಕೊಡುವ ಕಟ್ಟಳೆಗಳನ್ನೂ ವಿಧಿನಿಯಮಗಳನ್ನೂ ತಪ್ಪದೆ ಪರಿಪಾಲಿಸಬೇಕು.


ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.


ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು