Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:14 - ಪರಿಶುದ್ದ ಬೈಬಲ್‌

14 ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀವು ಗರ್ವಗೊಂಡು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಂದು ವೇಳೆ ನೀವು ಮದಿಸಿ ನಿಮ್ಮ ದೇವರಾದ ಯೆಹೋವನನ್ನು ಮರೆತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ಹೃದಯವು ಗರ್ವಗೊಂಡು, ನಿಮ್ಮನ್ನು ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ ನಿಮ್ಮ ದೇವರಾದ ಯೆಹೋವ ದೇವರನ್ನೇ ಮರೆತುಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:14
22 ತಿಳಿವುಗಳ ಹೋಲಿಕೆ  

ಆತನು ನಮ್ಮ ಪೂರ್ವಿಕರನ್ನು ರಕ್ಷಿಸಿದರೂ ಅವರು ಆತನನ್ನು ಮರೆತುಬಿಟ್ಟರು! ಈಜಿಪ್ಟಿನಲ್ಲಿ ಮಹತ್ಕಾರ್ಯಗಳನ್ನು ಮಾಡಿದ ದೇವರನ್ನು ಅವರು ಮರೆತುಬಿಟ್ಟರು.


ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.


“ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡದಂತೆ ಎಚ್ಚರವಾಗಿರಿ. ನಾನು ಕೊಡುವ ವಿಧಿನಿಯಮಗಳಿಗೆ ವಿಧೇಯರಾಗಿರಿ.


ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?


‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.


ಆದರೆ ಹಿಜ್ಕೀಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಕೀಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು.


ಆಗ ಅರಸನು ತನ್ನ ಪ್ರಜೆಗಳಿಗಿಂತ ತಾನು ಉತ್ತಮನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ಧರ್ಮಶಾಸ್ತ್ರಕ್ಕೆ ವಿಮುಖನಾಗದೆ ಅದನ್ನು ಚಾಚೂತಪ್ಪದೆ ಅನುಸರಿಸುವನು. ಆಗ ರಾಜನೂ ಅವನ ಸಂತತಿಯವರೂ ಇಸ್ರೇಲ್ ರಾಜ್ಯವನ್ನು ಬಹುಕಾಲ ಆಳುವರು.


ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು.


ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.


ನಿಮ್ಮ ಹಿಂಡು ವೃದ್ಧಿಯಾಗುವುದು. ನಿಮಗೆ ಬೆಳ್ಳಿಬಂಗಾರಗಳು ಹೇರಳವಾಗಿ ದೊರಕುವವು ಮತ್ತು ನೀವು ಪ್ರತಿಯೊಂದು ವಿಷಯದಲ್ಲೂ ಸಮೃದ್ಧಿಯನ್ನು ಕಾಣುವಿರಿ.


ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದುಹೋಗುವುದು!” ಎಂದು ಹೇಳಿದನು.


ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು. ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ. ಅವರು ಜಾಗ್ರತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು.


ನಾನು ಇಸ್ರೇಲರಿಗೆ ಆಹಾರ ಒದಗಿಸಿದೆನು. ಅವರು ಆ ಆಹಾರವನ್ನು ಉಂಡು ತಿಂದು ತೃಪ್ತರಾಗಿ ಕೊಬ್ಬೇರಿದ್ದರಿಂದ ನನ್ನನ್ನು ಮರೆತರು.


ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.


“ಯೆಹೋವನು ಹೇಳಿದ್ದೇನೆಂದರೆ: ‘ನಾನು ನಿಮ್ಮ ದೇವರಾದ ಯೆಹೋವನು. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ನಿಮ್ಮನ್ನು ಅಲ್ಲಿಂದ ಬಿಡುಗಡೆ ಮಾಡಿದೆನು. ಆದ್ದರಿಂದ ನೀವು ಈ ಆಜ್ಞೆಗಳಿಗೆ ವಿಧೇಯರಾಗಬೇಕು:


ನೀವು ಕೂಡಿಸಿಡದ ಉತ್ತಮ ವಸ್ತುಗಳಿಂದ ತುಂಬಿರುವ ಮನೆಗಳನ್ನು ಯೆಹೋವನು ನಿಮಗೆ ಕೊಡುತ್ತಾನೆ. ನೀವು ತೋಡದಿರುವ ಬಾವಿಗಳನ್ನು ನಿಮಗೆ ಕೊಡುವನು. ನೀವು ನೆಡದಿರುವ ದ್ರಾಕ್ಷಾತೋಟಗಳನ್ನೂ ಎಣ್ಣೆಮರಗಳ ತೋಪುಗಳನ್ನೂ ನಿಮಗೆ ಕೊಡುವನು. ನಿಮಗೆ ತಿನ್ನಲು ಯಾವ ಕೊರತೆಯೂ ಇರುವುದಿಲ್ಲ.


“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.


ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.


ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೀವು ಮರೆಯಲೇಬಾರದು. ನೀವು ಅನ್ಯದೇವರುಗಳನ್ನು ಪೂಜಿಸಬಾರದು.


ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು.


ಉತ್ತರದ ಸೈನ್ಯವು ಸೋತು ಸೆರೆಯಾಗುವುದು. ದಕ್ಷಿಣ ರಾಜನು ತುಂಬ ಜಂಬಪಡುವನು ಮತ್ತು ಉತ್ತರದ ರಾಜನ ಸಾವಿರಾರು ಜನ ಸೈನಿಕರ ವಧೆ ಮಾಡುವನು. ಆದರೆ ಅವನು ಜಯಶೀಲನಾಗಿ ಮುಂದುವರೆಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು