Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:18 - ಪರಿಶುದ್ದ ಬೈಬಲ್‌

18 ನಿಮ್ಮ ದೇವರಾದ ಯೆಹೋವನನ್ನು ಜ್ಞಾಪಕಮಾಡಿಕೊಳ್ಳಿ. ಇವೆಲ್ಲಾ ಸಂಪಾದಿಸುವುದಕ್ಕೆ ಆತನೇ ನಿಮಗೆ ಶಕ್ತಿ ಕೊಟ್ಟನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಯೆಹೋವನು ನಿಮಗೆ ಹೀಗೆ ಮಾಡುವುದರ ಉದ್ದೇಶವೇನಾಗಿತ್ತು? ಆತನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮಗೆ ಮನಮುಟ್ಟುವ ರೀತಿಯಲ್ಲಿ ನೆರವೇರಿಸಿದ್ದಾರೆ. ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವ ಸಾಮರ್ಥ್ಯವನ್ನು ಕೊಟ್ಟಿದ್ದಾರೆ ಎಂಬುದನ್ನು ಜ್ಞಾಪಕಮಾಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದದರಿಂದ ನಿಮ್ಮ ದೇವರಾದ ಯೆಹೋವನೇ ತಾನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:18
19 ತಿಳಿವುಗಳ ಹೋಲಿಕೆ  

ಐಶ್ವರ್ಯವು ಯೆಹೋವನ ಆಶೀರ್ವಾದವೇ. ಶ್ರಮದ ಕೆಲಸವು ಅದನ್ನು ಹೆಚ್ಚಿಸಲಾರದು.


“ಆಕೆಗೆ (ಇಸ್ರೇಲಿಗೆ) ನಾನು (ಯೆಹೋವನು) ಧಾನ್ಯ, ಎಣ್ಣೆ, ದ್ರಾಕ್ಷಾರಸವನ್ನು ಕೊಟ್ಟವನೆಂದು ತಿಳಿದಿಲ್ಲ. ಆಕೆಗೆ ಹೆಚ್ಚೆಚ್ಚಾಗಿ ಬೆಳ್ಳಿಬಂಗಾರಗಳನ್ನು ಕೊಡುತ್ತಾ ಬಂದೆನು. ಆದರೆ ಆ ಬೆಳ್ಳಿಬಂಗಾರವನ್ನು ಇಸ್ರೇಲ್ ಬಾಳನ ವಿಗ್ರಹಗಳನ್ನು ತಯಾರಿಸಲು ಉಪಯೋಗಿಸಿದಳು.


ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ.


“ನೀವು ಈ ಕಟ್ಟಳೆಗಳಿಗೆ ಕಿವಿಗೊಡುವುದಾದರೆ ಮತ್ತು ಅವುಗಳಿಗೆ ಎಚ್ಚರಿಕೆಯಿಂದ ವಿಧೇಯರಾದರೆ, ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರೊಡನೆ ಮಾಡಿಕೊಂಡ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವನು;


ಯೆಹೋವನು ನನಗೆ ಬಂಡೆಯಾಗಿದ್ದಾನೆ. ಆತನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಯುದ್ಧಕ್ಕೂ ಕದನಕ್ಕೂ ತರಬೇತು ಮಾಡುವನು.


ಈಗ, ಯೆಹೋವನೇ, ನೀನು ಕೊಟ್ಟ ದೇಶದಲ್ಲಿ ಬೆಳೆದ ಬೆಳೆಯಲ್ಲಿ ಪ್ರಥಮ ಫಲಗಳನ್ನು ತಂದಿದ್ದೇನೆ.’ “ಆ ಪ್ರಥಮ ಬೆಳೆಯನ್ನು ನಿಮ್ಮ ದೇವರಾದ ಯೆಹೋವನ ಮುಂದೆ ಇಟ್ಟು ಆತನನ್ನು ಆರಾಧಿಸಬೇಕು.


ಆಗ ಯೆಹೋವನು ಗಿದ್ಯೋನನಿಗೆ, “ನಾನು ಮಿದ್ಯಾನ್ಯರನ್ನು ಸೋಲಿಸಲು ನಿನ್ನ ಜನರಿಗೆ ಸಹಾಯ ಮಾಡುತ್ತೇನೆ. ಆದರೆ ಈ ಕೆಲಸಕ್ಕೆ ನಿನ್ನ ಜನರು ತುಂಬ ಹೆಚ್ಚು. ಇಸ್ರೇಲರು ನನ್ನನ್ನು ಮರೆತು ತಾವೇ ತಮ್ಮನ್ನು ರಕ್ಷಿಸಿಕೊಂಡೆವೆಂದು ಜಂಬಕೊಚ್ಚಿಕೊಳ್ಳುವುದು ನನಗೆ ಇಷ್ಟವಿಲ್ಲ.


ಯೆಹೋವನು ಜನರನ್ನು ಬಡವರನ್ನಾಗಿಸುತ್ತಾನೆ. ಆತನು ಜನರನ್ನು ಹಣವಂತರನ್ನಾಗಿಸುತ್ತಾನೆ. ಯೆಹೋವನು ಜನರನ್ನು ದೀನರನ್ನಾಗಿಸುತ್ತಾನೆ. ಆತನು ಜನರನ್ನು ದೊಡ್ಡವರನ್ನಾಗಿಸುತ್ತಾನೆ.


ಅಮಚ್ಯನು ಆ ದೇವರ ಮನುಷ್ಯನಿಗೆ, “ಹಾಗಾದರೆ, ನಾನು ಈಗಾಗಲೇ ಅವರಿಗೆ ಕೊಟ್ಟಿರುವ ಹಣಕ್ಕೇನು ಮಾಡಲಿ?” ಎಂದು ಕೇಳಿದನು. ದೇವರ ಮನುಷ್ಯನು ಉತ್ತರಿಸಿದ್ದೇನೆಂದರೆ, “ಯೆಹೋವನ ಬಳಿಯಲ್ಲಿ ಯಾವ ಕೊರತೆಯೂ ಇಲ್ಲ. ನಿನಗೆ ಅದಕ್ಕಿಂತ ಅಧಿಕವಾಗಿ ಕೊಡಲು ಆತನು ಶಕ್ತನಾಗಿದ್ದಾನೆ” ಎಂದು ಹೇಳಿದನು.


ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.


ಇದಲ್ಲದೆ ಲೋಕದಲ್ಲಿ ಇನ್ನೂ ಕೆಲವು ಅನ್ಯಾಯಗಳನ್ನು ಗಮನಿಸಿದ್ದೇನೆ. ಅತಿವೇಗದ ಓಟಗಾರನಿಗೆ ಓಟದಲ್ಲಿ ಯಾವಾಗಲೂ ಗೆಲುವಾಗದು; ಬಲಿಷ್ಠವಾದ ಸೈನ್ಯಕ್ಕೆ ಯುದ್ಧದಲ್ಲಿ ಯಾವಾಗಲೂ ಜಯವಾಗದು; ಜ್ಞಾನಿಗೆ ಯಾವಾಗಲೂ ಆಹಾರ ದೊರಕದು; ಜಾಣನಿಗೆ ಯಾವಾಗಲೂ ಐಶ್ವರ್ಯ ದೊರೆಯದು; ಪ್ರವೀಣರಿಗೆ ಯಾವಾಗಲೂ ಹೊಗಳಿಕೆಬಾರದು; ಸಮಯ ಬಂದಾಗ, ಪ್ರತಿಯೊಬ್ಬರಿಗೂ ಕೇಡುಗಳಾಗುತ್ತವೆ.


ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.


ಯಾಕೋಬನು ಇನ್ನೂರು ಮೇಕೆಗಳನ್ನು, ಇಪ್ಪತ್ತು ಹೋತಗಳನ್ನು, ಇನ್ನೂರು ಕುರಿಗಳನ್ನು ಮತ್ತು ಇಪ್ಪತ್ತು ಟಗರುಗಳನ್ನು ತೆಗೆದುಕೊಂಡನು.


ನೀವು ಕೂಡಿಸಿಡದ ಉತ್ತಮ ವಸ್ತುಗಳಿಂದ ತುಂಬಿರುವ ಮನೆಗಳನ್ನು ಯೆಹೋವನು ನಿಮಗೆ ಕೊಡುತ್ತಾನೆ. ನೀವು ತೋಡದಿರುವ ಬಾವಿಗಳನ್ನು ನಿಮಗೆ ಕೊಡುವನು. ನೀವು ನೆಡದಿರುವ ದ್ರಾಕ್ಷಾತೋಟಗಳನ್ನೂ ಎಣ್ಣೆಮರಗಳ ತೋಪುಗಳನ್ನೂ ನಿಮಗೆ ಕೊಡುವನು. ನಿಮಗೆ ತಿನ್ನಲು ಯಾವ ಕೊರತೆಯೂ ಇರುವುದಿಲ್ಲ.


“ನಾನು ಈ ದಿನ ಕೊಡುವ ಎಲ್ಲಾ ಆಜ್ಞೆಗಳನ್ನು ನೀವು ಅನುಸರಿಸಬೇಕು. ಆಗ ನೀವು ದೊಡ್ಡ ಜನಾಂಗವಾಗಿ ಅಭಿವೃದ್ಧಿಯಾಗುವಿರಿ. ನಿಮ್ಮ ಪೂರ್ವಿಕರಿಗೆ ಯೆಹೋವನು ವಾಗ್ದಾನ ಮಾಡಿದ ದೇಶವನ್ನು ನೀವು ಪಡೆದುಕೊಳ್ಳುವಿರಿ.


ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.


ಗೌರವವೂ ಐಶ್ವರ್ಯವೂ ನಿನ್ನಿಂದಲೇ ಹೊರಡುವವು. ಎಲ್ಲವನ್ನು ಆಳುವಾತನು ನೀನೇ. ನಿನ್ನ ಬಾಹುಗಳಲ್ಲಿ ಶಕ್ತಿಸಾಮರ್ಥ್ಯವು ತುಂಬಿವೆ. ಯಾರನ್ನೇ ಆಗಲಿ ಮಹಾಪುರುಷರನ್ನಾಗಿಯೂ ಪ್ರಬಲರನ್ನಾಗಿಯೂ ಮಾಡುವ ಶಕ್ತಿಯಿರುವುದು ನಿನ್ನ ಕೈಗಳಲ್ಲಿಯೇ.


ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು