ಧರ್ಮೋಪದೇಶಕಾಂಡ 8:19 - ಪರಿಶುದ್ದ ಬೈಬಲ್19 “ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿ. ಅನ್ಯದೇವರುಗಳನ್ನು ಅನುಸರಿಸಬೇಡಿ. ಅವುಗಳನ್ನು ಪೂಜಿಸಬೇಡಿ; ಅವುಗಳ ಸೇವೆ ಮಾಡಬೇಡಿ. ಇಲ್ಲವಾದರೆ ನೀವು ಖಂಡಿತವಾಗಿ ನಾಶವಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಒಂದು ವೇಳೆ ನೀವು ನಿಮ್ಮ ಯೆಹೋವ ದೇವರನ್ನು ಮರೆತು, ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧವಾಗಿ ಈ ಹೊತ್ತು ಸಾಕ್ಷಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.
ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.