Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:5 - ಪರಿಶುದ್ದ ಬೈಬಲ್‌

5 ಇವೆಲ್ಲವನ್ನು ನಿಮ್ಮ ದೇವರಾದ ಯೆಹೋವನು ನಿಮಗೆ ಮಾಡಿದನು. ತಂದೆಯು ತನ್ನ ಮಗನನ್ನು ತಿದ್ದಿ ಶಿಸ್ತಿನಲ್ಲಿ ನಡೆಸುವಂತೆ ದೇವರು ನಿಮ್ಮೊಂದಿಗೆ ವರ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಒಬ್ಬ ತಂದೆ ತನ್ನ ಮಗನನ್ನು ಹೇಗೊ ಹಾಗೆಯೇ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಶಿಕ್ಷಿಸುತ್ತಾ ಬಂದರೆಂಬುದನ್ನು ನೀವು ಆಲೋಚಿಸಿ ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತಂದೆ ಮಗನನ್ನು ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನೆಂಬದನ್ನು ನೀವು ಆಲೋಚಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಒಬ್ಬನು ತನ್ನ ಮಗನನ್ನು ಶಿಸ್ತುಪಡಿಸುವ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಶಿಸ್ತಿನಿಂದ ನಡೆಸುತ್ತಾ ಬಂದರೆಂದು ನಿಮ್ಮ ಹೃದಯದಲ್ಲಿ ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:5
19 ತಿಳಿವುಗಳ ಹೋಲಿಕೆ  

“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ತಂದೆಯು ತನ್ನ ಮಗನನ್ನು ಗದರಿಸುವಂತೆಯೇ ಯೆಹೋವನು ತಾನು ಪ್ರೀತಿಸುವವರನ್ನು ಶಿಕ್ಷಿಸುತ್ತಾನೆ.


ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ಅವನು ಪಾಪಗಳನ್ನು ಮಾಡಿದರೆ ಇತರ ಜನರ ಮೂಲಕ ನಾನು ಅವನನ್ನು ದಂಡಿಸುವೆನು. ಅವರೇ ನನ್ನ ಚಾವಟಿಗಳಾಗಿರುತ್ತಾರೆ.


ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.


ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು.


ತಾನು ಎಷ್ಟು ಕೆಟ್ಟವನಾಗಿ ಜೀವಿಸಿದನೆಂದು ತಿಳಿದು ನನ್ನ ಕಡೆಗೆ ತಿರುಗಿ ದುಷ್ಟತನ ಮಾಡುವದನ್ನು ನಿಲ್ಲಿಸಿದರೆ. ಅಂಥವನು ಸಾಯದೆ, ಬಾಳುವನು.”


ನಾನು ಅವರನ್ನು ಅವರ ದ್ರೋಹಕ್ಕಾಗಿ ಬಹು ಕಠಿಣವಾಗಿ ಶಿಕ್ಷಿಸುವೆನು. ಅವರ ಅಪರಾಧಕ್ಕಾಗಿ ಬೆತ್ತದಿಂದ ಹೊಡೆಯುವೆನು.


ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.


ಆದ್ದರಿಂದ ನರಪುತ್ರನೇ, ನಿನ್ನ ಚೀಲಗಳನ್ನು ತುಂಬಿಸಿ ಸೆರೆಯಾಳಾಗಿ ಹೋಗುವವನಂತೆ ನಟಿಸು. ನೀನು ಹಗಲಲ್ಲಿ ಹೋಗುವುದನ್ನು ಜನರು ನೋಡಲಿ. ಸೆರೆಯಾಳಿನಂತೆ ಅವರ ಕಣ್ಣೆದುರಿನಲ್ಲೆ ನಿನ್ನ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗು. ಒಂದುವೇಳೆ ಅವರು ತಾವು ದಂಗೆಕೋರರೆಂದು ತಿಳಿದುಕೊಳ್ಳಬಹುದು.


ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ.


ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”


ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು.


“ಆತನ ಆಜ್ಞೆಗಳಿಗೆ ವಿಧೇಯರಾಗಿರಿ. ಆತನನ್ನು ಅನುಸರಿಸಿ ಗೌರವಿಸಿರಿ.


ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸದ ತಂದೆಯು ಅವರಿಗೆ ಶತ್ರುವಿನಂತಿದ್ದಾನೆ. ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸುವ ತಂದೆಯು ಅವರಿಗೆ ಮಿತ್ರನಂತಿದ್ದಾನೆ.


ಸುಖದ ದಿನಗಳಲ್ಲಿ ಸಂತೋಷಿಸು. ದುಃಖದ ದಿನಗಳಲ್ಲಿ, ಸುಖದುಃಖಗಳನ್ನು ಕೊಡುವವನು ದೇವರೇ ಎಂಬುದನ್ನು ಜ್ಞಾಪಿಸಿಕೊ. ಮುಂದೆ ಏನಾಗುವುದೋ ಯಾರಿಗೂ ಗೊತ್ತಿಲ್ಲ.


ಅಡವಿಗಳಲ್ಲಿಯೂ ಮರುಭೂಮಿಗಳಲ್ಲಿಯೂ ಮನುಷ್ಯನು ತನ್ನ ಮಗುವನ್ನು ಹೊತ್ತುಕೊಂಡು ತರುವಂತೆ ದೇವರಾದ ಯೆಹೋವನು ನಿಮ್ಮನ್ನು ಹೊತ್ತುಕೊಂಡು ತಂದಿದ್ದಾನೆ. ಈ ಸ್ಥಳಕ್ಕೆ ಸುರಕ್ಷಿತವಾಗಿ ನಿಮ್ಮನ್ನು ತಂದು ಮುಟ್ಟಿಸಿದ್ದಾನೆ’ ಎಂದು ಹೇಳಿದೆನು.


ನನ್ನ ಮಗನೇ, ಯೆಹೋವನು ನಿನ್ನನ್ನು ಶಿಕ್ಷಿಸುವಾಗ ಕೋಪಗೊಳ್ಳಬೇಡ. ಆತನು ಗದರಿಸುವಾಗ ಬೇಸರಪಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು