ಧರ್ಮೋಪದೇಶಕಾಂಡ 8:7 - ಪರಿಶುದ್ದ ಬೈಬಲ್7 ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಆ ದೇಶದಲ್ಲಿ ನೀರು ಸಮೃದ್ಧಿಯಾಗಿರುವುದು. ನೀರು ಕಣಿವೆಗಳಲ್ಲಿಯೂ ಬೆಟ್ಟಗಳಲ್ಲಿಯೂ ನೆಲದ ಮೇಲೂ ಹರಿದುಬರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬುಗ್ಗೆಗಳಿಂದ ನೀರು ಉಕ್ಕುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ನಿಮ್ಮ ದೇವರಾದ ಸರ್ವೇಶ್ವರ ಉತ್ತಮವಾದ ನಾಡಿಗೆ ನಿಮ್ಮನ್ನು ಸೇರಿಸುತ್ತಾರೆ. ಆ ನಾಡಿನ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತಿರುತ್ತದೆ; ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಿ ಆಗಲಿ, ಎಲ್ಲಾ ಕಡೆಯು ಬಾವಿಗಳಿಂದಲೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿಮ್ಮ ದೇವರಾದ ಯೆಹೋವನು ಉತ್ತಮದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬಾವಿಗಳಲ್ಲಿಯೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಒಳ್ಳೆಯ ದೇಶಕ್ಕೆ ಬರಮಾಡುತ್ತಾರೆ. ಅದು ನೀರಿನ ಹಳ್ಳಗಳೂ, ತಗ್ಗುಗಳಲ್ಲಿಯೂ, ಬೆಟ್ಟದಲ್ಲಿಯೂ, ಉಕ್ಕುವ ಬುಗ್ಗೆಗಳೂ ಇರುವ ದೇಶವಾಗಿರುತ್ತದೆ. ಅಧ್ಯಾಯವನ್ನು ನೋಡಿ |
ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ.