ಧರ್ಮೋಪದೇಶಕಾಂಡ 8:8 - ಪರಿಶುದ್ದ ಬೈಬಲ್8 ಆ ದೇಶವು ಗೋಧಿ, ಜವೆಗೋಧಿ, ದ್ರಾಕ್ಷಾಲತೆಗಳು, ಅಂಜೂರ, ದಾಳಿಂಬೆ ಮರಗಳಿಂದ ತುಂಬಿದೆ. ಅಲ್ಲಿ ಎಣ್ಣೆ, ಜೇನುತುಪ್ಪ ಧಾರಾಳವಾಗಿ ಸಿಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ನಾಡಿನಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬೆ ಇವುಗಳು ಬೆಳೆಯುತ್ತವೆ; ಎಣ್ಣೆಮರಗಳು ಹಾಗು ಜೇನುತುಪ್ಪ ಸಿಕ್ಕುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷೆ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಜೇನೂ ಸಿಕ್ಕುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆ ದೇಶದಲ್ಲಿ ಗೋಧಿಯೂ, ಜವೆಗೋಧಿಯೂ, ದ್ರಾಕ್ಷೆಯೂ, ಅಂಜೂರ ಮರಗಳೂ, ದಾಳಿಂಬೆಗಳೂ ಇರುತ್ತವೆ. ಅದು ಓಲಿವ್ ಎಣ್ಣೆಯೂ, ಜೇನೂ ಉಳ್ಳ ದೇಶವೇ. ಅಧ್ಯಾಯವನ್ನು ನೋಡಿ |
ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”
ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ.