Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:9 - ಪರಿಶುದ್ದ ಬೈಬಲ್‌

9 ಅಲ್ಲಿ ನೀವು ಯಥೇಚ್ಛವಾಗಿ ತಿನ್ನುವಿರಿ. ನಿಮಗೆ ಬೇಕಾದದ್ದೆಲ್ಲಾ ನಿಮಗಿರುವುದು. ಅಲ್ಲಿಯ ಕಲ್ಲುಗಳು ಕಬ್ಬಿಣದಂತಿವೆ. ಬೆಟ್ಟಗಳಿಂದ ನೀವು ತಾಮ್ರವನ್ನು ಅಗೆದು ತೆಗೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಲ್ಲಿ ನೀವು ದುರ್ಭಿಕ್ಷವನ್ನೇ ಕಾಣದೆ, ಸಮೃದ್ಧಿ ಆಗಿ ಉಂಡು, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ನಾಡಿನಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ. ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಲ್ಲಿ ನೀವು ದುರ್ಭಿಕ್ಷವನ್ನೇ ಕಾಣದೆ ಸಮೃದ್ಧಿಯಾಗಿ ಉಂಡು ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ದೇಶದಲ್ಲಿ ನಿಮಗೆ ಆಹಾರಕ್ಕೆ ಕೊರತೆ ಇರುವುದಿಲ್ಲ. ಅಲ್ಲಿ ಯಾವುದರ ಕೊರತೆ ನಿಮಗೆ ಆಗದು. ಅದರ ಕಲ್ಲುಗಳಲ್ಲಿ ಕಬ್ಬಿಣವನ್ನೂ, ಅದರ ಬೆಟ್ಟಗಳಲ್ಲಿ ತಾಮ್ರದ ಗಣಿಗಳನ್ನೂ ಅಗೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:9
8 ತಿಳಿವುಗಳ ಹೋಲಿಕೆ  

“ಸೊಲೊಮೋನನೇ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಮೂರು ಸಾವಿರದ ಏಳುನೂರೈವತ್ತು ಟನ್ ಬಂಗಾರ, ಮೂವತ್ತೇಳು ಸಾವಿರದ ಐನೂರು ಟನ್ ಬೆಳ್ಳಿ ಮತ್ತು ತೂಕ ಮಾಡಲಾಗದಷ್ಟು ತಾಮ್ರ ಮತ್ತು ಕಬ್ಬಿಣವನ್ನು ಕೂಡಿಸಿಟ್ಟಿದ್ದೇನೆ. ಅಲ್ಲದೆ ಮರಗಳನ್ನು ಮತ್ತು ಕಲ್ಲುಗಳನ್ನು ಕೊಟ್ಟಿರುತ್ತೇನೆ. ಸೊಲೊಮೋನನೇ, ನೀನು ಇವುಗಳಿಗೆ ಇನ್ನೂ ಕೂಡಿಸು.


ಅವನು, “ನೀವು ಬಹಳ ಶ್ರೀಮಂತರಾಗಿದ್ದೀರಿ, ನಿಮ್ಮಲ್ಲಿ ಬಹಳ ಪಶುಗಳಿವೆ; ನಿಮ್ಮಲ್ಲಿ ಚಿನ್ನ, ಬೆಳ್ಳಿ ಮತ್ತು ಬೆಲೆಬಾಳುವ ರತ್ನಾಭರಣಗಳಿವೆ. ನಿಮ್ಮಲ್ಲಿ ಸುಂದರವಾದ ಅನೇಕ ಬಟ್ಟೆಗಳಿವೆ. ನೀವು ನಿಮ್ಮ ಶತ್ರುಗಳಿಂದ ಹಲವಾರು ವಸ್ತುಗಳನ್ನು ತೆಗೆದುಕೊಂಡಿದ್ದೀರಿ. ಈ ವಸ್ತುಗಳನ್ನು ನಿಮ್ಮ ಸಹೋದರರೊಂದಿಗೂ ಹಂಚಿಕೊಳ್ಳಿರಿ” ಅಂದನು.


ನಿನ್ನ ಬಾಗಿಲುಗಳಲ್ಲಿ ಬೀಗವಿರುವುದು. ಅವು ಕಬ್ಬಿಣದಿಂದಲೂ ಹಿತ್ತಾಳೆಯಿಂದಲೂ ಮಾಡಲ್ಪಟ್ಟಿವೆ. ನಿನ್ನ ಜೀವಮಾನ ಕಾಲವೆಲ್ಲಾ ನೀನು ಬಲಶಾಲಿಯಾಗಿರುವೆ.”


ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು.


ಆ ದೇಶವು ಗೋಧಿ, ಜವೆಗೋಧಿ, ದ್ರಾಕ್ಷಾಲತೆಗಳು, ಅಂಜೂರ, ದಾಳಿಂಬೆ ಮರಗಳಿಂದ ತುಂಬಿದೆ. ಅಲ್ಲಿ ಎಣ್ಣೆ, ಜೇನುತುಪ್ಪ ಧಾರಾಳವಾಗಿ ಸಿಗುವವು.


ನಿಮಗೆ ಬೇಕಾದಷ್ಟು ಆಹಾರ ಇರುವುದು. ಆಗ ನೀವು ನಿಮಗೆ ಉತ್ತಮ ದೇಶವನ್ನು ಕೊಟ್ಟಿರುವ ಯೆಹೋವ ದೇವರನ್ನು ಸ್ತುತಿಸುವಿರಿ.


ನೀವು ಆ ಸ್ಥಳಕ್ಕೆ ಬಂದಮೇಲೆ ಅಲ್ಲಿ ಸಾಕಷ್ಟು ಭೂಮಿ ಇದೆ ಎಂಬುದನ್ನು ಅರಿತುಕೊಳ್ಳುತ್ತೀರಿ. ಅಲ್ಲಿ ಎಲ್ಲವೂ ಸಮೃದ್ಧಿಕರವಾಗಿದೆ. ಅಲ್ಲಿಯ ಜನರಿಗೆ ಶತ್ರುಗಳು ಧಾಳಿ ಮಾಡಬಹುದೆಂಬ ಭಯವೇ ಇಲ್ಲ. ಖಂಡಿತವಾಗಿಯೂ ದೇವರು ಆ ಭೂಮಿಯನ್ನು ನಮಗೆ ಕೊಟ್ಟಿದ್ದಾನೆ” ಎಂದು ಉತ್ತರಿಸಿದರು.


ದೇವಾಲಯದ ಬಾಗಿಲುಗಳಿಗೆ ಬೇಕಾದ ಮೊಳೆಗಳಿಗೆ ಮತ್ತು ಕೀಲುಗಳಿಗೆ ಬೇಕಾದ ಕಬ್ಬಿಣವನ್ನು ಶೇಖರಿಸಿಟ್ಟನು. ಅವನು ತನ್ನ ಬಳಿಯಲ್ಲಿ ತೂಕಮಾಡಲು ಸಾಧ್ಯವಾಗದಷ್ಟು ತಾಮ್ರವನ್ನು ಶೇಖರಿಸಿಟ್ಟಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು