ಧರ್ಮೋಪದೇಶಕಾಂಡ 9:13 - ಪರಿಶುದ್ದ ಬೈಬಲ್13 “ಅಲ್ಲದೆ ಯೆಹೋವನು ನನಗೆ, ‘ನಾನು ಈ ಜನರನ್ನು ಗಮನಿಸುತ್ತಿದ್ದೇನೆ. ಇವರು ತುಂಬಾ ಹಠಮಾರಿಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಅದಲ್ಲದೆ ಅವರು ನನಗೆ, ‘ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಲ್ಲದೆ ಆತನು ನನಗೆ - ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಒಳಗಾಗದವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಯೆಹೋವ ದೇವರು ನನಗೆ, “ನಾನು ಈ ಜನರನ್ನು ನೋಡಿದ್ದೇನೆ. ಇಗೋ, ಇದು ಆಜ್ಞೆಗೆ ವಿಧೇಯವಾಗದ ಜನಾಂಗವೇ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”