Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:16 - ಪರಿಶುದ್ದ ಬೈಬಲ್‌

16 ನಾನು ಕೆಳಗೆ ನೋಡಿದಾಗ ಬಂಗಾರದಿಂದ ಬಸವನನ್ನು ಮಾಡಿಕೊಂಡು ಯೆಹೋವನ ವಿರುದ್ಧವಾಗಿ ಪಾಪ ಮಾಡಿದ್ದಿರಿ. ಯೆಹೋವನ ಆಜ್ಞೆಯನ್ನು ಅಷ್ಟು ಬೇಗನೇ ನೀವು ಉಲ್ಲಂಘಿಸಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಿ ಲೋಹದ ಹೋರಿಕರುವನ್ನು ಮಾಡಿಸಿಕೊಂಡು ಸರ್ವೇಶ್ವರ ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟುಹೋದದ್ದು ನನಗೆ ಕಂಡುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟುಹೋದದ್ದು ನನಗೆ ಕಂಡು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ನೋಡಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಎರಕ ಹೊಯ್ದ ಕರುವನ್ನು ನಿಮಗೆ ಮಾಡಿಕೊಂಡು, ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗ ಬಿಟ್ಟುಬಿಟ್ಟು ಹೋಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:16
5 ತಿಳಿವುಗಳ ಹೋಲಿಕೆ  

ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು.


ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.


“ನಾನು ಕೂಡಲೇ ಬೆಟ್ಟದಿಂದ ಹಿಂತಿರುಗಿ ಬಂದೆನು. ಅದು ಬೆಂಕಿಯಿಂದ ಸುಡುತ್ತಲಿತ್ತು ಮತ್ತು ಒಡಂಬಡಿಕೆಯ ಕಲ್ಲಿನ ಹಲಗೆಗಳು ನನ್ನ ಬಳಿಯಲ್ಲಿ ಇದ್ದವು.


ನನ್ನ ಬಳಿಯಲ್ಲಿದ್ದ ಆ ಕಲ್ಲಿನ ಹಲಗೆಗಳನ್ನು ನಾನು ನೆಲಕ್ಕೆ ಅಪ್ಪಳಿಸಿದೆನು. ನಿಮ್ಮ ಕಣ್ಣೆದುರಿನಲ್ಲಿ ಅವುಗಳನ್ನು ತುಂಡುತುಂಡಾಗಿ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು