Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:25 - ಪರಿಶುದ್ದ ಬೈಬಲ್‌

25 “ನಾನು ಯೆಹೋವನ ಮುಂದೆ ನಲವತ್ತು ದಿನ ಹಗಲಿರುಳು ಬೋರಲಬಿದ್ದು ಆತನು ನಾಶಮಾಡಬೇಕೆಂದಿದ್ದ ನಿಮಗಾಗಿ ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಸರ್ವೇಶ್ವರ ನಿಮ್ಮನ್ನು ನಾಶಮಾಡಬೇಕೆಂದಿದ್ದುದರಿಂದ ನಾನು ಆ ನಲವತ್ತು ದಿನವೂ ಹಗಲಿರುಳು ಅವರ ಸನ್ನಿಧಿಯಲ್ಲೇ ಬಿದ್ದಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನು ನಿಮ್ಮನ್ನು ನಾಶ ಮಾಡಬೇಕೆಂದಿದ್ದದರಿಂದ ನಾನು ಆ ನಾಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹೀಗಿರಲಾಗಿ ಯೆಹೋವ ದೇವರು ನಿಮ್ಮನ್ನು ನಾಶಮಾಡುತ್ತೇನೆಂದು ಹೇಳಿದ್ದರಿಂದ, ನಾನು ಮುಂಚೆ ಬಿದ್ದುಕೊಂಡ ಹಾಗೆಯೇ ನಲವತ್ತು ದಿವಸ ಹಗಲುರಾತ್ರಿ ಯೆಹೋವ ದೇವರ ಮುಂದೆ ಬಿದ್ದಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:25
4 ತಿಳಿವುಗಳ ಹೋಲಿಕೆ  

ಆಮೇಲೆ ನಾನು ನಲವತ್ತು ದಿನ ಹಗಲಿರುಳು ಯೆಹೋವನ ಮುಂದೆ ಬೋರಲ ಬಿದ್ದಿದ್ದೆನು. ನಾನು ಊಟ ಮಾಡಲಿಲ್ಲ, ನೀರನ್ನು ಕುಡಿಯಲಿಲ್ಲ ಯಾಕೆಂದರೆ ನೀವು ಪಾಪಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಆತನು ಕೋಪಗೊಂಡಿದ್ದನು.


ನಾನು ಕೆಳಗೆ ನೋಡಿದಾಗ ಬಂಗಾರದಿಂದ ಬಸವನನ್ನು ಮಾಡಿಕೊಂಡು ಯೆಹೋವನ ವಿರುದ್ಧವಾಗಿ ಪಾಪ ಮಾಡಿದ್ದಿರಿ. ಯೆಹೋವನ ಆಜ್ಞೆಯನ್ನು ಅಷ್ಟು ಬೇಗನೇ ನೀವು ಉಲ್ಲಂಘಿಸಿದ್ದಿರಿ.


ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು