ಧರ್ಮೋಪದೇಶಕಾಂಡ 9:28 - ಪರಿಶುದ್ದ ಬೈಬಲ್28 ನೀನು ಇವರಿಗೆ ಶಿಕ್ಷೆಕೊಟ್ಟರೆ ಈಜಿಪ್ಟಿನವರು, “ದೇವರು ತನ್ನ ಜನರನ್ನು ತಾನು ವಾಗ್ದಾನ ಮಾಡಿದ ದೇಶಕ್ಕೆ ನಡೆಸಲು ಅಸಮರ್ಥನಾದನು. ಆತನು ಅವರನ್ನು ದ್ವೇಷಿಸುತ್ತಾನೆ; ಆದ್ದರಿಂದ ಅವರನ್ನು ಮರುಭೂಮಿಯಲ್ಲಿ ಹತಮಾಡಲು ಕೊಂಡೊಯ್ದಿದ್ದಾನೆ” ಎಂದು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ಪದವಾದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ ಆ ದೇಶದವರು, ‘ಸರ್ವೇಶ್ವರ ಇಸ್ರಯೇಲರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೇ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು - ಯೆಹೋವನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವದಕ್ಕೆ ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾದೀತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ, ಆ ದೇಶದವರು, ‘ಯೆಹೋವ ದೇವರು ಇಸ್ರಾಯೇಲರಿಗೆ ವಾಗ್ದಾನ ಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು. ಅಧ್ಯಾಯವನ್ನು ನೋಡಿ |
ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ.