Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:29 - ಪರಿಶುದ್ದ ಬೈಬಲ್‌

29 ಆದರೆ ಅವರು ನಿನ್ನ ಜನರಾಗಿದ್ದಾರೆ. ಅವರು ನಿನಗೆ ಸಂಬಂಧಪಟ್ಟವರಾಗಿದ್ದಾರೆ; ನಿನ್ನ ಬಲಪರಾಕ್ರಮದಿಂದ ಅವರನ್ನು ದಾಸತ್ವದಿಂದ ಬಿಡುಗಡೆ ಮಾಡಿರುವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀವು ಬಿಡಿಸಿದ ನಿಮ್ಮ ಸ್ವಕೀಯ ಜನ ಹಾಗು ಸೊತ್ತು ಇವರಲ್ಲವೇ? ಎಂದು ಬಿನ್ನೈಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇವರು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ ಎಂದು ಬಿನ್ನೈಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೂ ನೀವು ನಿಮ್ಮ ದೊಡ್ಡ ಶಕ್ತಿಯಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಹೊರಗೆ ಬರಮಾಡಿದ ನಿಮ್ಮ ಜನವೂ ನಿಮ್ಮ ಸೊತ್ತೂ ಇವರೇ,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:29
22 ತಿಳಿವುಗಳ ಹೋಲಿಕೆ  

“ಇಸ್ರೇಲ್ ಜನರು ನಿನ್ನ ಜನಾಂಗ; ಅವರು ನಿನ್ನ ಸೇವಕರಾಗಿದ್ದಾರೆ. ನೀನು ನಿನ್ನ ಮಹಾಶಕ್ತಿಯನ್ನು ಉಪಯೋಗಿಸಿ ಅವರನ್ನು ರಕ್ಷಿಸಿರುವೆ.


ಅವರು ನಿನ್ನ ಜನರೆಂಬುದನ್ನು ಜ್ಞಾಪಿಸಿಕೊ. ನೀನು ಅವರನ್ನು ಈಜಿಪ್ಟಿನಿಂದ ಬರಮಾಡಿದೆಯೆಂಬುದನ್ನು ಜ್ಞಾಪಿಸಿಕೊ. ಸುಡುವ ಕುಲುಮೆಯಿಂದ ಹೊರಕ್ಕೆ ಎಳೆದು ತಂದಂತೆ ನೀನು ಅವರನ್ನು ರಕ್ಷಿಸಿದೆ.


‘ನನ್ನ ಒಡೆಯನೇ, ಯೆಹೋವನೇ, ನಿನ್ನ ಜನರನ್ನು ನೀನು ನಾಶಮಾಡಬೇಡ. ಅವರು ನಿನ್ನ ಜನಾಂಗ. ನಿನ್ನ ಪರಾಕ್ರಮದಿಂದ ನೀನು ಈಜಿಪ್ಟಿನಿಂದ ಅವರನ್ನು ಬಿಡಿಸಿ ಹೊರತಂದಿರುವೆ.


ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!


ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.


ಆದರೆ ಯೆಹೋವನು ನಿಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡಿಕೊಂಡಿರುತ್ತಾನೆ. ಕಬ್ಬಿಣವನ್ನು ಕರಗಿಸುವ ಬೆಂಕಿಯ ಕುಲುಮೆಯಂತಿದ್ದ ಈಜಿಪ್ಟಿನಿಂದ ನಿಮ್ಮನ್ನು ಎಳೆದು ತಂದು ತನ್ನ ವಿಶೇಷ ಜನಾಂಗವಾಗಿ ನಿಮ್ಮನ್ನು ತೆಗೆದುಕೊಂಡಿರುತ್ತಾನೆ. ಈಗ ನೀವು ಆತನ ಜನರಾಗಿದ್ದೀರಿ.


ಕೆಲವರು ನಿನ್ನನ್ನು ಅನುಸರಿಸುವದಿಲ್ಲ. ಅವರು ನಿನ್ನ ಹೆಸರಿನಿಂದ ಕರೆಯಲ್ಪಡುವದಿಲ್ಲ. ನಾವು ಅವರಂತೆ ಇದ್ದೆವು.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ನಂತರ ರಾಜನಾದ ಸೊಲೊಮೋನನು ಯೆಹೋವನಿಗೆ ದೀರ್ಘ ಪ್ರಾರ್ಥನೆಯನ್ನು ಮಾಡಿದನು. ಅವನ ಪ್ರಾರ್ಥನೆ ಇಂತಿದೆ: “ಇಸ್ರೇಲಿನ ದೇವರಾದ ಯೆಹೋವನು ಮಹತ್ವ ಪೂರ್ಣನಾಗಿದ್ದಾನೆ. ಯೆಹೋವನು ನನ್ನ ತಂದೆಯಾದ ದಾವೀದನಿಗೆ ತಾನು ಮಾಡಿದ್ದ ವಾಗ್ದಾನಗಳನ್ನು ಸ್ವತಃ ತಾನೇ ನೆರವೇರಿಸಿದ್ದಾನೆ. ಯೆಹೋವನು ನನ್ನ ತಂದೆಗೆ,


ನಾನು ನಿನ್ನನ್ನು ನಿಜವಾಗಿಯೂ ಮೆಚ್ಚಿಸಿರುವುದಾದರೆ, ನಾನು ನಿನ್ನನ್ನು ತಿಳಿದುಕೊಳ್ಳುವಂತೆ ನಿನ್ನ ಮಾರ್ಗಗಳನ್ನು ಬೋಧಿಸು. ಆಗ ನಾನು ನಿನ್ನನ್ನು ಯಾವಾಗಲೂ ಮೆಚ್ಚಿಸಲು ಸಾಧ್ಯವಾಗುವುದು. ಇವರೆಲ್ಲರೂ ನಿನ್ನ ಜನರೆಂದು ಜ್ಞಾಪಕಮಾಡಿಕೊ” ಎಂದು ವಿಜ್ಞಾಪಿಸಿದನು.


ಮೋಶೆಯು, “ಯೆಹೋವನೇ, ನಿನ್ನ ದಯೆ ನನಗೆ ದೊರಕುವುದಾದರೆ, ದಯವಿಟ್ಟು ನಮ್ಮೊಂದಿಗೆ ಬಾ. ಇವರು ಅವಿಧೇಯರಾದ ಜನರೆಂದು ನಾನು ಬಲ್ಲೆನು. ಆದರೆ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ನಿನ್ನ ಜನರನ್ನಾಗಿ ಸ್ಪೀಕರಿಸು” ಎಂದು ಬೇಡಿಕೊಂಡನು.


ಯೆಹೋವನೇ, ನಿನ್ನ ಜನರನ್ನು ರಕ್ಷಿಸು, ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.


ನೀನು ನಿನ್ನ ಶಕ್ತಿಯಿಂದ ನಿನ್ನ ಜನರನ್ನು ರಕ್ಷಿಸಿದೆ. ಯಾಕೋಬನ ಮತ್ತು ಯೋಸೇಫನ ಸಂತತಿಯವರನ್ನು ನೀನು ರಕ್ಷಿಸಿದೆ.


ಆತನು ತನ್ನ ಜನರ ಮೇಲೆ ಕೋಪಗೊಂಡನು; ಅವರ ವಿಷಯದಲ್ಲಿ ಬೇಸರಗೊಂಡನು!


ಆತನು ತನ್ನ ಮಹಾಶಕ್ತಿಯನ್ನೂ ಬಲವನ್ನೂ ತೋರಿದನು. ಆತನ ಪ್ರೀತಿ ಶಾಶ್ವತವಾದದ್ದು.


ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.


ಆಗ ಆತನು ನನಗೆ, ‘ಎದ್ದು ಬೇಗನೆ ಕೆಳಗಿಳಿ. ಯಾಕೆಂದರೆ ನೀನು ಈಜಿಪ್ಟಿನಿಂದ ಬಿಡಿಸಿತಂದ ಜನರು ತಮ್ಮನ್ನು ತಾವೇ ಕೆಡಿಸಿಕೊಂಡಿದ್ದಾರೆ. ಇಷ್ಟು ಬೇಗನೆ ಅವರು ನನ್ನ ಆಜ್ಞೆಗಳನ್ನು ಮೀರಿದ್ದಾರೆ. ಅವರು ಬಂಗಾರವನ್ನು ಕರಗಿಸಿ ತಮಗಾಗಿ ವಿಗ್ರಹವನ್ನು ಮಾಡಿಕೊಂಡಿದ್ದಾರೆ’ ಎಂದು ಹೇಳಿದನು.


ಯೆಹೋವನ ಪಾಲು ಆತನ ಜನರೇ. ಇಸ್ರೇಲನ ವಂಶಸ್ಥರು ದೇವಜನರಾಗಿದ್ದಾರೆ.


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೋ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು