ಧರ್ಮೋಪದೇಶಕಾಂಡ 9:8 - ಪರಿಶುದ್ದ ಬೈಬಲ್8 ನೀವು ಹೋರೇಬ್ ಎಂಬ ಸೀನಾಯ್ ಬೆಟ್ಟದಲ್ಲಿ ಯೆಹೋವನನ್ನು ಬಹಳ ಸಿಟ್ಟಿಗೆಬ್ಬಿಸಿದ್ದೀರಿ. ಯೆಹೋವನು ನಿಮ್ಮನ್ನು ನಾಶಪಡಿಸುವಷ್ಟು ಕೋಪಗೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಉದಾಹರಣೆಗೆ, ಹೋರೇಬಿನಲ್ಲಿ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಅವರು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸಮಾಡಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೃಷ್ಟಾಂತ - ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸಮಾಡಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ಹೋರೇಬಿನಲ್ಲಿಯೂ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದಾಗ, ಅವರು ನಿಮ್ಮನ್ನು ನಿಮ್ಮ ಮೇಲೆ ಸಿಟ್ಟುಮಾಡಿಕೊಂಡು ನಾಶಮಾಡಬೇಕೆಂದಿದ್ದರು. ಅಧ್ಯಾಯವನ್ನು ನೋಡಿ |
“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.