ಧರ್ಮೋಪದೇಶಕಾಂಡ 9:9 - ಪರಿಶುದ್ದ ಬೈಬಲ್9 ನಾನು ಕಲ್ಲಿನ ಹಲಗೆಗಳನ್ನು ತೆಗೆದುಕೊಂಡು ಬರಲು ಬೆಟ್ಟದ ಮೇಲೇರಿದ್ದೆನು. ಯೆಹೋವ ದೇವರು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆ ಆ ಹಲಗೆಯ ಮೇಲೆ ಬರೆಯಲ್ಪಟ್ಟಿತ್ತು. ನಾನು ಆ ಬೆಟ್ಟದ ಮೇಲೆ ನಲವತ್ತು ದಿವಸ ಹಗಲಿರುಳು ಕಳೆದೆನು. ನಾನು ಅನ್ನವನ್ನಾಗಲಿ ನೀರನ್ನಾಗಲಿ ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಾಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ಕಲ್ಲಿನ ಹಲಗೆಗಳು ಅಂದರೆ, ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ, ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ. ಅಧ್ಯಾಯವನ್ನು ನೋಡಿ |
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.