Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:10 - ಪರಿಶುದ್ದ ಬೈಬಲ್‌

10 ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:10
19 ತಿಳಿವುಗಳ ಹೋಲಿಕೆ  

ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!


“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆದ್ದರಿಂದ ನಿನೆವೆಯೇ, ನೀನು ಸಹ ಕುಡಿದು ಅಮಲೇರಿದವನಂತೆ ಕೆಳಗೆ ಬಿದ್ದುಬಿಡುವೆ. ನೀನು ಅಡಗಿಕೊಳ್ಳಲು ಪ್ರಯತ್ನಿಸುವೆ. ವೈರಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತವಾದ ಸ್ಥಳವನ್ನು ಹುಡುಕುವೆ.


ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.


ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.


ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.


ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. ನಾನು ಅವರಿಗೊಂದು ಔತಣವನ್ನೇರ್ಪಡಿಸುವೆನು. ಅವರಿಗೆ ಮತ್ತೇರುವಂತೆ ಕುಡಿಸುವೆನು. ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. ಆಮೇಲೆ ಅವರು ಶಾಶ್ವತವಾಗಿ ಮಲಗುವರು. ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ.


ನಾನು ಕೋಪಗೊಂಡಿಲ್ಲ. ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು ಸುಟ್ಟುಹಾಕುವೆನು.


ಗಾಳಿ ಬಡಿದುಕೊಂಡು ಹೋಗುವ ಹೊಗೆಯಂತೆ ನಿನ್ನ ಶತ್ರುಗಳು ಚದರಿಹೋಗಲಿ. ಬೆಂಕಿಯಲ್ಲಿ ಕರಗಿಹೋಗುವ ಮೇಣದಂತೆ ನಿನ್ನ ಶತ್ರುಗಳು ನಾಶವಾಗಲಿ.


ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.


ಅಬೀಗೈಲಳು ನಾಬಾಲನ ಬಳಿಗೆ ಹಿಂದಿರುಗಿ ಹೋದಳು. ನಾಬಾಲನು ಮನೆಯಲ್ಲಿಯೇ ಇದ್ದನು. ನಾಬಾಲನು ರಾಜನಂತೆ ತಿನ್ನುತ್ತಾ ಕುಡಿದು ಮತ್ತನಾಗಿದ್ದನು. ಆದ್ದರಿಂದ ಅಬೀಗೈಲಳು ಮಾರನೆಯ ದಿನದ ಹೊತ್ತಾರೆಯವರೆಗೆ ನಾಬಾಲನಿಗೆ ಏನನ್ನೂ ಹೇಳಲಿಲ್ಲ.


ಶತ್ರುಗಳು ಜೇನುನೊಣಗಳ ಹಿಂಡಿನಂತೆ ನನ್ನನ್ನು ಸುತ್ತುಗಟ್ಟಿದರು. ಆದರೆ, ಧಗಧಗನೆ ಉರಿಯುವ ಪೊದೆಯಂತೆ ಅವರು ಕೊನೆಗೊಂಡರು. ನಾನು ಅವರನ್ನು ಯೆಹೋವನ ಶಕ್ತಿಯಿಂದ ಸೋಲಿಸಿದೆನು.


ಆದರೆ ಆ ಮನುಷ್ಯರಿಗೆ ತಮ್ಮನ್ನೇ ರಕ್ಷಿಸಲು ಅಸಾಧ್ಯವಾಗುವದು. ಅವರು ಹುಲ್ಲಿನಂತೆ ಸುಟ್ಟುಹೋಗುವರು. ರೊಟ್ಟಿಸುಡಲು ಕೆಂಡಗಳು ಕಾಣಿಸದಂತೆಯೂ ಚಳಿ ಕಾಯಿಸಿಕೊಳ್ಳಲು ಬೆಂಕಿ ಇರದಂತೆಯೂ ಅವರು ಕ್ಷಣಕಾಲದಲ್ಲಿ ಸುಟ್ಟುಹೋಗುವರು.


ಅವರು ಬಂದು, “ನಾನು ಸ್ವಲ್ಪ ದ್ರಾಕ್ಷಾರಸ ಕುಡಿಯುತ್ತೇನೆ. ಅಥವಾ ನಾನು ಸ್ವಲ್ಪ ಮದ್ಯವನ್ನು ಕುಡಿಯುತ್ತೇನೆ. ನಾನು ನಾಳೆಯೂ ಹೀಗೆ ಮಾಡುವೆನು. ನಾನು ಇನ್ನೂ ಹೆಚ್ಚಾಗಿ ಕುಡಿಯುವೆನು” ಎಂದು ಹೇಳುವರು.


ಆದ್ದರಿಂದ ಜನರು ಹುಲ್ಲನ್ನು ಹುಡುಕುತ್ತಾ ಈಜಿಪ್ಟಿನ ಪ್ರತಿಯೊಂದು ಕಡೆಗೂ ಹೋದರು.


ನೀನು ಅತ್ಯಧಿಕ ಮಹತ್ವವುಳ್ಳವನಾಗಿ, ನಿನಗೆದುರು ನಿಲ್ಲುವವರನ್ನು ನಾಶಗೊಳಿಸಿದೆ. ಬೆಂಕಿಯು ಹುಲ್ಲನ್ನು ಸುಡುವಂತೆ ನಿನ್ನ ಕೋಪವು ಅವರನ್ನು ನಾಶಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು