Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:12 - ಪರಿಶುದ್ದ ಬೈಬಲ್‌

12 ಯೆಹೋವನು ಯೆಹೂದನಿಗೆ ಇಂತೆಂದೆನು: “ಅಶ್ಶೂರದ ಜನರು ಬಲಶಾಲಿಗಳು. ಅವರಲ್ಲಿ ಅಸಂಖ್ಯಾತ ಸೈನಿಕರಿದ್ದಾರೆ. ಆದರೆ ಅವರೆಲ್ಲಾ ತುಂಡರಿಸಲ್ಪಡುವರು. ಅವರೆಲ್ಲಾ ಹತರಾಗುವರು. ನನ್ನ ಜನರೇ, ನೀವು ಕಷ್ಟ ಅನುಭವಿಸುವಂತೆ ಮಾಡಿದೆನು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಸ್ವಾಮಿ ಇಂತೆನ್ನುತ್ತಾನೆ: “ನಿನ್ನ ಶತ್ರುಗಳು ಎಷ್ಟು ಬಲಾಢ್ಯರಾಗಿದ್ದರೂ ಎಷ್ಟು ಅಧಿಕ ಸಂಖ್ಯೆಯಲ್ಲಿದ್ದರೂ ಅವರು ನಾಶಕ್ಕೊಳಗಾಗುವರು; ಆ ದುರಾಲೋಚಕನು ಇಲ್ಲವಾಗುವನು. ನನ್ನ ಜನರೇ, ನಾನು ನಿಮ್ಮನ್ನು ಬಾಧಿಸಿದ್ದುಂಟು, ಆದರೆ ಇನ್ನು ಮುಂದೆ ಬಾಧಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಇಂತೆನ್ನುತ್ತಾನೆ - ನಿನ್ನ ಶತ್ರುಗಳು ಎಷ್ಟು ಪ್ರಬಲರಾಗಿದ್ದರೂ ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು, ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಇನ್ನು ಬಾಧಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರೊಂದಿಗೆ ಒಪ್ಪಂದ ಮಾಡಿಕೊಂಡವರಿದ್ದರೂ, ಅವರು ಬಹುಮಂದಿಯಾಗಿದ್ದರೂ ನಾಶಕ್ಕೆ ಒಳಗಾಗುವರು. ಯೆಹೂದವೇ, ನಾನು ನಿನ್ನನ್ನು ಕಷ್ಟಪಡಿಸಿದಾಗ್ಯೂ, ಇನ್ನು ಮೇಲೆ ಕಷ್ಟಪಡಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:12
20 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಜನರೊಂದಿಗೆ ಮಾತನಾಡಿ ಹೀಗೆ ಹೇಳಿದನು: “ನಾನು ನಿಮಗೆ ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕಳುಹಿಸುವೆನು. ನಿಮಗೆ ಬೇಕಾದಷ್ಟು ಇರುವದು. ಅನ್ಯ ಜನಾಂಗದವರೆದುರು ನಿಮ್ಮನ್ನು ಇನ್ನು ಮುಂದೆ ನಾಚಿಕೆಗೆ ಗುರಿಪಡಿಸುವುದಿಲ್ಲ.


ಆ ಜನರಿಗೆ ಮತ್ತೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಸೂರ್ಯನ ತಾಪವಾಗಲಿ ಇರುವುದಿಲ್ಲ. ಅವರನ್ನು ಯಾವ ತಾಪವೂ ಸುಡುವುದಿಲ್ಲ.


ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.


“ಉತ್ತರದ ರಾಜನ ಮಗನು ಯುದ್ಧದ ಸಿದ್ಧತೆಯನ್ನು ಮಾಡುವನು. ಅವರಿಬ್ಬರೂ ಸೇರಿ ಒಂದು ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ರಭಸದಿಂದ ಬಂದ ಪ್ರವಾಹದಂತೆ ದೇಶದಲ್ಲೆಲ್ಲ ಸಂಚರಿಸಿ ಯುದ್ಧ ಮಾಡುತ್ತಾ ದಕ್ಷಿಣ ರಾಜನ ದುರ್ಗದವರೆಗೆ ನುಗ್ಗುವದು.


ನಿನ್ನ ದೇವರೂ ಒಡೆಯನೂ ಆಗಿರುವ ಯೆಹೋವನು ತನ್ನ ಜನರಿಗಾಗಿ ಯುದ್ಧ ಮಾಡುವನು. ಅವನು ನಿನಗೆ ಹೇಳುವುದೇನೆಂದರೆ, “ಇಗೋ, ನಾನು ನಿನ್ನಿಂದ ವಿಷದ ಪಾತ್ರೆಯನ್ನು (ಶಿಕ್ಷೆ) ತೆಗೆದುಬಿಡುತ್ತೇನೆ. ಇನ್ನು ಮುಂದೆ ನನ್ನ ಸಿಟ್ಟಿನಿಂದ ನೀನು ಶಿಕ್ಷಿಸಲ್ಪಡುವದಿಲ್ಲ.


ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.


ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು.


ಚೀಯೋನ್ ಪರ್ವತದಲ್ಲಿರುವ ಜೆರುಸಲೇಮಿನಲ್ಲಿ ಯೆಹೋವನ ಜನರು ವಾಸಿಸುವರು. ನೀವು ಇನ್ನು ಮೇಲೆ ಅಳುವದಿಲ್ಲ. ಯೆಹೋವನು ನಿಮ್ಮ ಅಳುವಿಕೆಯನ್ನು ನೋಡಿ ನಿಮ್ಮನ್ನು ಆದರಿಸುವನು. ಆತನು ನಿಮ್ಮ ಮೊರೆಯನ್ನು ಕೇಳಿ ನಿಮಗೆ ಸಹಾಯಿಸುವನು.


ಆ ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ. ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು.


ಆ ನೀರು ಹೊಳೆಯಿಂದಾಚೆ ಬಂದು ಯೆಹೂದದ ಮೇಲೆ ಹರಿಯುವುದು. ಆ ನೀರು ಏರುತ್ತಾಬಂದು ಯೆಹೂದವನ್ನು ಕುತ್ತಿಗೆಯ ತನಕ ಮುಳುಗಿಸುವದು ಮಾತ್ರವಲ್ಲ ಅದನ್ನು ಸಂಪೂರ್ಣವಾಗಿ ಮುಳುಗಿಸಿಬಿಡುವದು. “ಇಮ್ಮಾನುವೇಲನೇ, ಈ ಜಲಪ್ರವಾಹವು ಎಲ್ಲಾ ಕಡೆಗಳಿಗೆ ಹಬ್ಬುತ್ತಾ ನಿಮ್ಮ ದೇಶವನ್ನು ಪೂರ್ತಿಯಾಗಿ ಮುಚ್ಚಿಬಿಡುವದು.”


ಯೆಹೋವನು ಅಶ್ಶೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಶೂರವನ್ನು ಬಾಡಿಗೆಗೆ ತೆಗೆದುಕೊಂಡ ಕ್ಷೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆಕೂದಲನ್ನೂ ಕೈಕಾಲುಗಳ ಕೂದಲನ್ನೂ ಗಡ್ಡವನ್ನೂ ಬೋಳಿಸಿಬಿಡುವನು.


ಸನ್ಹೇರೀಬನು ಒಂದು ದಿನ ತನ್ನ ದೇವರಾದ ನಿಸ್ರೋಕನನ್ನು ಆಲಯದಲ್ಲಿ ಆರಾಧಿಸುತ್ತಿದ್ದನು. ಅವನ ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅವನನ್ನು ಖಡ್ಗದಿಂದ ಇರಿದುಕೊಂದರು. ನಂತರ ಅದ್ರಮ್ಮೆಲೆಕ್ ಮತ್ತು ಸರೆಚೆರ್ ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಸನ್ಹೇರೀಬನ ಮಗನಾದ ಏಸರ್‌ಹದ್ದೋನನು ಅವನ ನಂತರ ಹೊಸ ರಾಜನಾದನು.


ಆ ರಾತ್ರಿ ಯೆಹೋವನ ದೂತನು ಹೊರಕ್ಕೆ ಹೋಗಿ, ಅಶ್ಶೂರದ ಶಿಬಿರದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಜನರನ್ನು ಕೊಂದುಹಾಕಿದನು. ಜನರು ಬೆಳಗಿನ ಜಾವದಲ್ಲಿ ಮೇಲಕ್ಕೆದ್ದಾಗ ಸತ್ತ ದೇಹಗಳನ್ನು ನೋಡಿದರು.


“ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.


ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು