Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:13 - ಪರಿಶುದ್ದ ಬೈಬಲ್‌

13 ನಾನು ನಿಮ್ಮನ್ನು ಸ್ವತಂತ್ರರನ್ನಾಗಿ ಬಿಟ್ಟಿದ್ದೇನೆ. ಅಶ್ಶೂರದವರ ಹಿಡಿತದಿಂದ ನಿಮ್ಮನ್ನು ಪಾರುಮಾಡಿದ್ದೇನೆ. ನಿಮ್ಮ ಭುಜದಿಂದ ನೊಗವನ್ನು ತೆಗೆದುಹಾಕುವೆನು. ನಿಮ್ಮನ್ನು ಬಂಧಿಸಿದ್ದ ಸಂಕೋಲೆಯನ್ನು ಮುರಿದುಹಾಕುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ಹೇರಿದ ನೊಗವನ್ನು ಈಗ ನಿನ್ನ ಮೇಲಿನಿಂದ ಮುರಿದು ಕಟ್ಟಿದ್ದ ಕಣ್ಣಿಗಳನ್ನು ಕಿತ್ತುಹಾಕುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಶತ್ರು ನಿಮ್ಮ ಮೇಲೆ ಹೇರಿದ ನೊಗವನ್ನು ಈಗ ನಿಮ್ಮಿಂದ ತೆಗೆದು ಮುರಿದುಬಿಡುವೆನು. ನಿಮ್ಮ ಸಂಕೋಲೆಗಳನ್ನು ಕಿತ್ತುಹಾಕುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನು ಹೇರಿದ ನೊಗವನ್ನು ಈಗ ನಿನ್ನ ಮೇಲಿನಿಂದ ಮುರಿದುಬಿಟ್ಟು ಕಣ್ಣಿಗಳನ್ನು ಕಿತ್ತುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಈಗ ನಿನ್ನ ಮೇಲಿನ ಅವರ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:13
8 ತಿಳಿವುಗಳ ಹೋಲಿಕೆ  

ಅಶ್ಶೂರವು ನಿಮಗೆ ಸಂಕಟವನ್ನು ಉಂಟುಮಾಡುವದು. ಅದು ನಿಮಗೆ ನಿತ್ಯವೂ ಹೊರುವ ಭಾರವಾಗಿ ಪರಿಣಮಿಸುವದು. ನಿಮ್ಮ ಹೆಗಲಿನ ಮೇಲೆ ನೊಗವನ್ನು ಹಾಕುವದು. ಆದರೆ ಅದು ತೆಗೆದುಹಾಕಲ್ಪಡುವದು. ಅದು ನಿನ್ನ ದೇವರ ಶಕ್ತಿಯಿಂದ ಮುರಿಯಲ್ಪಡುವದು.


ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದುಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.


“ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.


ನನ್ನ ದೇಶದಲ್ಲಿ ಅಶ್ಶೂರದ ರಾಜನನ್ನು ನಾಶಮಾಡುವೆನು. ನನ್ನ ಪರ್ವತಗಳ ಮೇಲೆ ಆ ರಾಜನ ಮೇಲೆ ತುಳಿದುಕೊಂಡು ನಡೆದಾಡುವೆನು. ಆ ರಾಜನು ನನ್ನ ಜನರನ್ನು ಗುಲಾಮರನ್ನಾಗಿ ಮಾಡಿದನು. ಅವರ ಹೆಗಲಿನ ಮೇಲೆ ನೊಗವನ್ನಿಟ್ಟನು. ಆ ನೊಗವು ಯೆಹೂದದ ಹೆಗಲಿನಿಂದ ತೆಗೆಯಲ್ಪಡುವದು.


ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು; ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು.


ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನ್ನು ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಧಿಗಳನ್ನು ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನ್ನು ತೊರೆದುಬಿಟ್ಟಿದ್ದರು. ಅವರು ದೇವರಿಗೆ ವಿರೋಧಿಗಳಾದರು.


ನಿಮ್ಮ ದೇವರಾಗಿರುವ ಯೆಹೋವನು ನಾನೇ! ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ಆದರೆ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನೀವು ಗುಲಾಮರಾಗಿ ಭಾರವಾದ ಹೊರೆಗಳನ್ನು ಹೊರುತ್ತಾ ಗೂನಾಗಿದ್ದಿರಿ. ಆದರೆ ನಿಮ್ಮ ಭುಜದ ಮೇಲಿದ್ದ್ದ ನೊಗವನ್ನು ನಾನು ಮುರಿದುಹಾಕಿ ನೀವು ಮತ್ತೆ ನೆಟ್ಟಗೆ ನಡೆಯುವಂತೆ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು