Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:5 - ಪರಿಶುದ್ದ ಬೈಬಲ್‌

5 ಯೆಹೋವನು ಬರುತ್ತಾನೆ. ಪರ್ವತಗಳು ಭಯದಿಂದ ನಡುಗುವವು. ಬೆಟ್ಟಗಳು ಕರಗಿಹೋಗುವವು. ಯೆಹೋವನು ಬರುತ್ತಾನೆ, ಮತ್ತು ಭೂಮಿಯು ಭಯದಿಂದ ನಡುಗುವುದು. ಇಡೀ ಪ್ರಪಂಚ ಮತ್ತು ಅದರಲ್ಲಿರುವ ಜನರೆಲ್ಲಾ ಭಯದಿಂದ ನಡುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆತನೆದುರು ಅದರುತ್ತವೆ ಬೆಟ್ಟಗಳು ಕರಗುತ್ತವೆ ಗುಡ್ಡಗಳು. ಆತನ ದರ್ಶನಕೆ ಕಂಪಿಸುತ್ತದೆ ಭೂಗೋಳವು ತಲ್ಲಣಿಸುತ್ತದೆ ಲೋಕ ಲೋಕನಿವಾಸಿಗಳೆಲ್ಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂವಿುಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲವೂ ತಲ್ಲಣಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬೆಟ್ಟಗಳು ಅವರ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ, ಲೋಕವೂ, ಅದರ ನಿವಾಸಿಗಳೆಲ್ಲವೂ ಅವರ ಮುಂದೆ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:5
34 ತಿಳಿವುಗಳ ಹೋಲಿಕೆ  

ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿಹೋಗುತ್ತವೆ. ತಗ್ಗುಗಳು ಇಬ್ಭಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದುಹೋಗುತ್ತವೆ.


ನಾನು ಪರ್ವತಗಳ ಕಡೆಗೆ ನೋಡಿದೆ, ಅವುಗಳು ನಡುಗುತ್ತಿದ್ದವು. ಎಲ್ಲಾ ಬೆಟ್ಟಗಳು ಅದರುತ್ತಿದ್ದವು.


ಆಗ ಭೂಮಿಯು ಗಡಗಡನೆ ನಡುಗಿತು. ಆಕಾಶದ ಅಡಿಪಾಯಗಳು ಅಲುಗಾಡಿದವು. ಏಕೆಂದರೆ ಯೆಹೋವನಿಗೆ ಸಿಟ್ಟೇರಿತ್ತು!


ಪರ್ವತಗಳು ನಿನ್ನನ್ನು ನೋಡಿ ನಡುಗಿದವು. ನೆಲದ ಮೇಲಿಂದ ನೀರು ಹರಿದುಹೋಯಿತು. ಭೂಮಿಯ ಮೇಲೆ ತನಗಿದ್ದ ಶಕ್ತಿ ಹೋದದ್ದನ್ನು ನೋಡಿ ಸಮುದ್ರವು ಗಟ್ಟಿಯಾಗಿ ಶಬ್ದ ಮಾಡಿತು.


ಭೂಮಿಯೇ ಕಂಪಿಸಿತು. ಇಸ್ರೇಲರ ದೇವಾಧಿದೇವನು ಸೀನಾಯಿ ಬೆಟ್ಟಕ್ಕೆ ಬಂದಾಗ ಆಕಾಶವೇ ಕರಗಿಹೋಯಿತು.


ಸೀನಾಯಿ ಬೆಟ್ಟದ ದೇವರಾದ ಯೆಹೋವನ ಎದುರಿಗೆ, ಇಸ್ರೇಲರ ದೇವರಾದ ಯೆಹೋವನ ಎದುರಿಗೆ, ಪರ್ವತಗಳು ನಡುಗಿದವು.


ಬೆಟ್ಟಗಳೇ, ನೀವೇಕೆ ಟಗರುಗಳಂತೆಯೂ ಗುಡ್ಡಗಳೇ, ನೀವೇಕೆ ಕುರಿಮರಿಗಳಂತೆಯೂ ನೃತ್ಯಮಾಡಿದಿರಿ?


ಬೆಟ್ಟಗಳು ಟಗರುಗಳಂತೆಯೂ ಗುಡ್ಡಗಳು ಕುರಿಮರಿಗಳಂತೆಯೂ ನೃತ್ಯಮಾಡಿದವು.


ಸಮುದ್ರವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಗಟ್ಟಿಯಾಗಿ ಹಾಡಲಿ.


ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.


ಸೀನಾಯಿ ಬೆಟ್ಟವು ಹೊಗೆಯಿಂದ ಕವಿದುಕೊಂಡಿತು. ಕುಲುಮೆಯಿಂದ ಬರುವ ಹೊಗೆಯಂತೆ, ಬೆಟ್ಟದಿಂದ ಹೊಗೆಯು ಮೇಲಕ್ಕೇರಿತು. ಯೆಹೋವನು ಬೆಂಕಿಯಲ್ಲಿ ಬೆಟ್ಟದ ಮೇಲೆ ಇಳಿದು ಬಂದದ್ದರಿಂದ ಇದು ಸಂಭವಿಸಿತು. ಇಡೀ ಬೆಟ್ಟ ನಡುಗಲಾರಂಭಿಸಿತು.


ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.


ಆಗ ಭೀಕರ ಭೂಕಂಪವಾಯಿತು. ಪ್ರಭುವಿನ ದೂತನೊಬ್ಬನು ಆಕಾಶದಿಂದ ಇಳಿದುಬಂದನು. ಆ ದೇವದೂತನು ಸಮಾಧಿಯ ಬಳಿಗೆ ಹೋಗಿ, ಸಮಾಧಿಯ ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಆ ಬಂಡೆಯ ಮೇಲೆ ಕುಳಿತುಕೊಂಡನು.


ಆಗ ದೇವಾಲಯದ ತೆರೆಯು ಮೇಲ್ಗಡೆಯಿಂದ ತಳಭಾಗದವರೆಗೂ ಹರಿದು ಎರಡು ಭಾಗವಾಯಿತು. ಭೂಮಿಯು ನಡುಗಿತು. ಬಂಡೆಗಳು ಒಡೆದುಹೋದವು.


ಆಕಾಶವು ವಿಭಾಗಗೊಂಡು ಸುರುಳಿಯಂತೆ ಸುತ್ತಲ್ಪಟ್ಟಿತು. ಪ್ರತಿಯೊಂದು ಬೆಟ್ಟ ಮತ್ತು ದ್ವೀಪಗಳು ತಮ್ಮ ನೆಲೆಯಿಂದ ಚಲಿಸಿದವು.


ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂಮಿಯು ಗಡಗಡನೆ ನಡುಗಿತು; ಪರ್ವತಗಳ ಬುನಾದಿಗಳು ಕಂಪಿಸಿದವು.


ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.


ಇಗೋ, ಯೆಹೋವನು ಈ ದೇಶವನ್ನು ನಾಶಮಾಡುವನು. ಆತನು ಅದನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವನು. ಜನರನ್ನು ಅತಿದೂರಕ್ಕೆ ಚದರಿಸಿಬಿಡುವನು.


ಲೋಕದ ಪಾಪವು ತುಂಬಾ ಭಾರವಾಗಿದೆ. ಆ ಭಾರದಿಂದಾಗಿ ಭೂಮಿಯು ಬೀಳುವದು. ಒಂದು ಹಳೆಯ ಮನೆಯಂತೆ ಭೂಮಿಯು ಅಲುಗಾಡುವದು. ಕುಡಿದು ಮತ್ತನಾಗಿ ನೆಲಕ್ಕೆ ಬೀಳುವವನಂತೆ ಭೂಮಿಯು ಇರುವದು. ಭೂಮಿಗೆ ಮುಂದುವರಿಯಲು ಆಗದು.


ಅವರ ಮುಂದೆ ಭೂಮಿಯೂ ಆಕಾಶವೂ ನಡುಗುವುದು; ಸೂರ್ಯಚಂದ್ರರು ಕಪ್ಪಾಗಿಹೋಗುವರು; ನಕ್ಷತ್ರಗಳು ಹೊಳಪನ್ನು ಕಳೆದುಕೊಳ್ಳುವುದು.


ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”


“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ದೇವರು ಪರ್ವತಗಳನ್ನು ಅವುಗಳಿಗೇ ತಿಳಿಯದಂತೆ ಸರಿಸಿ ಕೋಪದಿಂದ ಅವುಗಳನ್ನು ಉರುಳಿಸುವನು.


ದೇವರು ಗದರಿಸುವಾಗ ಆಕಾಶಮಂಡಲದ ಸ್ತಂಭಗಳು ಭಯದಿಂದ ನಡುಗುತ್ತವೆ.


ಆತನ ಮೂಗಿನಿಂದ ಹೊಗೆಯು ಬಂದಿತು; ಆತನ ಬಾಯಿಂದ ಅಗ್ನಿಜ್ವಾಲೆಯೂ ಬೆಂಕಿಯ ಕಿಡಿಗಳೂ ಬಂದವು.


ಆತನು ಭೂಮಿಯ ಕಡೆಗೆ ನೋಡಿದರೆ ಸಾಕು, ಭೂಮಿಯು ನಡುಗುವುದು; ಆತನು ಬೆಟ್ಟಗಳನ್ನು ಮುಟ್ಟಿದರೆ ಸಾಕು, ಅವು ಜ್ವಾಲಾಮುಖಿಗಳಾಗುತ್ತವೆ.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ಆಗ ಜೀವವುಳ್ಳ ಸಮಸ್ತವೂ ಹೆದರಿಕೆಯಿಂದ ನಡುಗುವವು. ನೀರಿನಲ್ಲಿರುವ ಮೀನುಗಳು, ಆಕಾಶದ ಪಕ್ಷಿಗಳು, ಭೂಮಿಯ ಮೇಲಿರುವ ಪ್ರಾಣಿಗಳು, ನೆಲದ ಮೇಲೆ ಹರಿದಾಡುವವುಗಳೆಲ್ಲಾ ಭೀತಿಯಿಂದ ನಡುಗುವವು. ಪರ್ವತಗಳು ಬಿದ್ದುಹೋಗುವವು, ಪ್ರತಿಯೊಂದು ಗೋಡೆಯು ನೆಲಕ್ಕೆ ಬಿದ್ದು ಹೋಗುವದು.”


ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಭೂಮಿಯನ್ನು ಸ್ಪರ್ಶಿಸುವನು. ಆಗ ಅದು ಕರಗಿಹೋಗುವುದು. ದೇಶದಲ್ಲಿ ವಾಸಿಸುವ ಜನರೆಲ್ಲಾ ಸತ್ತುಹೋದವರಿಗಾಗಿ ಗೋಳಾಡುವರು. ಈಜಿಪ್ಟಿನ ನೈಲ್ ನದಿಯಂತೆ ದೇಶದಲ್ಲಿ ಏರಿಳಿತ ಉಂಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು