ನಹೂಮ 1:7 - ಪರಿಶುದ್ದ ಬೈಬಲ್7 ಯೆಹೋವನು ಒಳ್ಳೆಯವನು. ಕಷ್ಟದ ಸಮಯದಲ್ಲಿ ಆತನು ಆಶ್ರಯಸ್ಥಾನ. ಆತನ ಮೇಲೆ ಭರವಸವಿಡುವವರನ್ನು ಸಂರಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮರೆಹೊಕ್ಕವರನ್ನು ಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರು ಒಳ್ಳೆಯವರು. ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ. ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.
ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.