Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:8 - ಪರಿಶುದ್ದ ಬೈಬಲ್‌

8 ಆದರೆ ಆತನು ತನ್ನ ವೈರಿಗಳನ್ನು ಪೂರ್ತಿಯಾಗಿ ನಾಶಮಾಡುತ್ತಾನೆ. ತೆರೆಯಂತೆ ಅವರನ್ನು ಕೊಚ್ಚಿಕೊಂಡು ಹೋಗುತ್ತಾನೆ. ಕತ್ತಲೆಯ ಕಡೆಗೆ ವೈರಿಗಳನ್ನು ಅಟ್ಟಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನೆವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಮೇರೆ ಮೀರುವ ಪ್ರಳಯದಿಂದ ನಿನೆವೆಯನ್ನು ಮುಗಿಸಿಬಿಡುವರು. ಕತ್ತಲೆ ಅವರ ಶತ್ರಗಳನ್ನು ಹಿಂದಟ್ಟುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:8
26 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ನಾನು ಸಿಟ್ಟುಗೊಂಡಿದ್ದೇನೆ. ಮತ್ತು ನಿಮಗೆ ವಿರುದ್ಧವಾಗಿ ಬಿರುಗಾಳಿಯನ್ನು ಕಳುಹಿಸುತ್ತೇನೆ. ನಾನು ಕೋಪಗೊಂಡಿದ್ದೇನೆ. ಆದ್ದರಿಂದ ಭಾರೀ ಮಳೆಯು ಬೀಳುವಂತೆ ಮಾಡುವೆನು. ನಾನು ಕೋಪಗೊಂಡಿದ್ದರಿಂದ ನಾಶಕರವಾದ ಆಲಿಕಲ್ಲು ಆಕಾಶದಿಂದ ಬೀಳುವಂತೆ ಮಾಡುವೆನು.


“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.


ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ಆ ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ.


ದೇವರು ಆಮೇಲೆ ಉತ್ತರಕ್ಕೆ ಮುಖಮಾಡಿ ಅಶ್ಶೂರವನ್ನು ಶಿಕ್ಷಿಸುವನು. ಆತನು ನಿನೆವೆ ಪಟ್ಟಣವನ್ನು ಶಿಕ್ಷಿಸಿದಾಗ ಅದು ನಿರ್ಜನವಾದ ಮರುಭೂಮಿಯಾಗುವದು.


ಅದರ ಸಲುವಾಗಿ ಇಡೀ ದೇಶವು ಅಲುಗಾಡುವದು. ಸತ್ತವರಿಗಾಗಿ ದೇಶದ ಪ್ರತಿ ನಿವಾಸಿಯೂ ರೋಧಿಸುವನು. ಈಜಿಪ್ಟಿನ ನೈಲ್ ನದಿಯ ರೀತಿಯಲ್ಲಿ ದೇಶವು ತಿರುಗುಮುರುಗಾಗುವುದು.”


ಪರಲೋಕರಾಜ್ಯವನ್ನು ಹೊಂದತಕ್ಕವರು ಹೊರಗೆ ಕತ್ತಲೆಗೆ ಎಸೆಯಲ್ಪಡುವರು. ಅಲ್ಲಿ ಅವರು ಗೋಳಾಡುವರು ಮತ್ತು ನೋವಿನಿಂದ ಹಲ್ಲುಗಳನ್ನು ಕಡಿಯುವರು” ಎಂದನು.


ಬಿರುಸಾದ ಮಳೆ ಸುರಿದು ನೀರು ಮೇಲಕ್ಕೆ ಏರಿತು, ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆಗ ಆ ಮನೆಯು ಕುಸಿದು ಬಿತ್ತು.”


ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ, ನಿಲ್ಲಿ, ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ.


ಎಲ್ಕೋಷ್ ಎಂಬ ಊರಿನವನಾದ ನಹೂಮನಿಗೆ ಆದ ದೇವದರ್ಶನದ ಪುಸ್ತಕ. ನಿನೆವೆ ಪಟ್ಟಣದ ವಿಷಯವಾಗಿ ದುಃಖಕರವಾದ ಸಂದೇಶ.


“ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.


ಅವನು ದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯಗಳನ್ನು ಸೋಲಿಸುತ್ತಾನೆ. ಅವನು ಒಪ್ಪಂದ ಮಾಡಿಕೊಂಡ ನಾಯಕನಿಗೂ ಮೋಸಮಾಡುತ್ತಾನೆ.


ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಆ ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಆ ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.


ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.


ಆದರೆ ದುಷ್ಟರ ಜೀವಿತವು ರಾತ್ರಿಯ ಕತ್ತಲೆಯಂತಿದೆ. ಅವರು ಕತ್ತಲೆಯಲ್ಲಿ ತಪ್ಪಿಸಿಕೊಂಡಿದ್ದು ತಮಗೆ ಕಾಣದ ವಸ್ತುಗಳ ಮೇಲೆ ಎಡವಿ ಬೀಳುತ್ತಾರೆ.


ನಾನು ಭಯದಿಂದ ನಡುಗುತ್ತಿರುವೆ. ಗಾಳಿಯು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ಆ ಯೌವನಸ್ಥರು ನನ್ನ ಮಾನವನ್ನು ಅಟ್ಟಿಬಿಡುವರು. ನನ್ನ ಸುರಕ್ಷತೆಯು ಮೋಡದಂತೆ ಕಾಣದೆಹೋಗುವುದು.


“ಉತ್ತರದ ರಾಜನ ಮಗನು ಯುದ್ಧದ ಸಿದ್ಧತೆಯನ್ನು ಮಾಡುವನು. ಅವರಿಬ್ಬರೂ ಸೇರಿ ಒಂದು ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯವು ರಭಸದಿಂದ ಬಂದ ಪ್ರವಾಹದಂತೆ ದೇಶದಲ್ಲೆಲ್ಲ ಸಂಚರಿಸಿ ಯುದ್ಧ ಮಾಡುತ್ತಾ ದಕ್ಷಿಣ ರಾಜನ ದುರ್ಗದವರೆಗೆ ನುಗ್ಗುವದು.


ನೀನು ದೇವರಂತಿದ್ದರೆ, ನಿನ್ನ ಕೋಪವನ್ನು ತೋರಿ ಗರ್ವಿಷ್ಠರನ್ನು ದಂಡಿಸು; ಅವರನ್ನು ದೀನರನ್ನಾಗಿ ಮಾಡು.


ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭಯಂಕರವಾದ ದಿನವಾಗಿದೆ. ದೇವರು ಅತ್ಯಂತ ಕೋಪದಿಂದ ದೇಶವನ್ನೆಲ್ಲಾ ನಾಶಮಾಡುವನು; ದುಷ್ಟಜನರನ್ನೆಲ್ಲಾ ದೇಶವನ್ನು ಬಿಟ್ಟುಹೋಗುವಂತೆ ಮಾಡುವನು.


ಆಕಾಶವು ಕತ್ತಲಾಗುವದು; ಸೂರ್ಯ, ಚಂದ್ರ, ನಕ್ಷತ್ರಾದಿಗಳು ಪ್ರಕಾಶವನ್ನು ಕಳೆದುಕೊಳ್ಳುವವು.


ಇಗೋ, ನನ್ನ ಒಡೆಯನಿಗೆ ಬಲಿಷ್ಠನೂ ಧೈರ್ಯವಂತನೂ ಆಗಿರುವ ಒಬ್ಬನಿದ್ದಾನೆ. ಅವನು ದೇಶದೊಳಗೆ ಆಲಿಕಲ್ಲಿನ ಮಳೆಯಿಂದ ಕೂಡಿದ ಬಿರುಗಾಳಿಯಂತೆಯೂ ನದಿಯ ಬಲವಾದ ಪ್ರವಾಹವು ದೇಶದೊಳಗೆ ನುಗ್ಗಿಬರುವಂತೆಯೂ ಅವನು ಬರುವನು. ಆ ಕಿರೀಟವನ್ನು (ಸಮಾರ್ಯ) ನೆಲದ ಮೇಲೆ ಬಿಸಾಡುವನು.


ಆಮೇಲೆ ‘ಇದೇ ರೀತಿಯಲ್ಲಿ ಬಾಬಿಲೋನ್ ಕೂಡ ಮುಳುಗಿಹೋಗುವುದು. ಬಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಬರಮಾಡುವ ಅನೇಕ ವಿಪತ್ತುಗಳಿಂದಾಗಿ ಬಾಬಿಲೋನ್ ಮುಳುಗಿಹೋಗುವುದು’” ಎಂದು ಹೇಳು. ಯೆರೆಮೀಯನ ಸಂದೇಶ ಇಲ್ಲಿಗೆ ಮುಗಿಯುತ್ತದೆ.


ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.


ಮರಣದೊಂದಿಗೆ ನೀವು ಮಾಡಿದ ಒಪ್ಪಂದವು ಮುರಿಯಲ್ಪಡುವದು. ಪಾತಾಳದೊಂದಿಗೆ ನೀವು ಮಾಡಿದ ಒಪ್ಪಂದವು ನಿಮ್ಮ ಸಹಾಯಕ್ಕೆ ಬಾರದು. “ನಿಮ್ಮನ್ನು ಶಿಕ್ಷಿಸಲು ಒಬ್ಬನು ಬರುವನು. ಆತನು ನೀವು ಧೂಳೋ ಎಂಬಂತೆ ನಿಮ್ಮ ಮೇಲೆ ತುಳಿದಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು