Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:10 - ಪರಿಶುದ್ದ ಬೈಬಲ್‌

10 ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿದೆ. ಅವರ ದೇಹವು ಅಲ್ಲಾಡುತ್ತಿದೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಗರಿಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನೆವೆ ಬರಿದಾಗಿದೆ, ಸುಲಿಗೆಯಾಗಿದೆ, ಹಾಳುಬಿದ್ದಿದೆ, ಹೃದಯಗಳು ಕರಗುತ್ತವೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲರ ಸೊಂಟಗಳಲ್ಲಿ ಸಂಕಟವಿದೆ; ಎಲ್ಲಾ ಮುಖಗಳು ಕಳೆಗುಂದುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:10
24 ತಿಳಿವುಗಳ ಹೋಲಿಕೆ  

ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ನನ್ನ ಮೂಳೆಗಳೆಲ್ಲಾ ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.


ಈ ಸೈನ್ಯವನ್ನು ನೋಡುವ ಜನರು ಹೆದರಿ ನಡುಗುವರು; ಅವರ ಮುಖಗಳು ಕಂಗೆಡುವದು.


ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ.


“ಈ ಪ್ರಶ್ನೆಯನ್ನು ಕೇಳಿ ಪರಿಶೀಲಿಸಿರಿ. ಪುರುಷನು ಮಗುವಿಗೆ ಜನ್ಮಕೊಡಬಲ್ಲನೆ? ಖಂಡಿತವಾಗಿಯೂ ಇಲ್ಲ. ಹಾಗಾದರೆ ಪ್ರತಿಯೊಬ್ಬ ಬಲಿಷ್ಠನೂ ಪ್ರಸವವೇದನೆಪಡುತ್ತಿರುವ ಸ್ತ್ರೀಯಂತೆ ತನ್ನ ಹೊಟ್ಟೆಯನ್ನು ಏಕೆ ಹಿಡಿದುಕೊಂಡಿದ್ದಾನೆ? ಪ್ರತಿಯೊಬ್ಬನ ಮುಖವು ಸತ್ತವನ ಮುಖದಂತೆ ಏಕೆ ಬಿಳಿಚಿದೆ? ಏಕೆಂದರೆ ಜನರು ಬಹಳ ಭಯಪಟ್ಟಿದ್ದಾರೆ.


ಇಗೋ, ಯೆಹೋವನು ಈ ದೇಶವನ್ನು ನಾಶಮಾಡುವನು. ಆತನು ಅದನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವನು. ಜನರನ್ನು ಅತಿದೂರಕ್ಕೆ ಚದರಿಸಿಬಿಡುವನು.


ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ.


ದೇವರು ಹೀಗೆನ್ನುತ್ತಾನೆ, “ನಾನು ಇಡೀ ಜನಾಂಗಗಳನ್ನು ನಾಶಮಾಡಿದ್ದೇನೆ. ಅವರ ಬುರುಜುಗಳನ್ನು ನಾಶಮಾಡಿ, ಅವರ ರಸ್ತೆಗಳಲ್ಲಿ ಯಾರೂ ನಡೆಯದ ಹಾಗೆ ಮಾಡಿರುತ್ತೇನೆ. ಅವರ ನಗರಗಳು ನಿರ್ಜನವಾಗಿವೆ. ಯಾರೂ ಅಲ್ಲಿ ವಾಸಮಾಡುವದಿಲ್ಲ.


ನಿನ್ನನ್ನು ನೋಡಿದವರೆಲ್ಲರು ದಂಗುಬಡಿಯಲ್ಪಡುವರು. ‘ನಿನೆವೆಯು ನಾಶವಾಯಿತು. ಆಕೆಗಾಗಿ ಯಾರು ಮರುಗುವರು?’ ಎಂದು ಜನರು ಹೇಳುವರು. ನಿನ್ನನ್ನು ಸಂತೈಸುವವರು ಯಾರೂ ಸಿಗುವುದಿಲ್ಲವಲ್ಲಾ?”


ಆಮೇಲೆ ಹೀಗೆ ಹೇಳು: ‘ಯೆಹೋವನೇ, ಬಾಬಿಲೋನ್ ನಗರವನ್ನು ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನ್ನು ನಾಶಮಾಡುವದಾಗಿ ಹೇಳಿರುವೆ.’


ಯೆಹೋವನು ಹೇಳುವುದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ.


ಭೂಮಿಯು ಅಸ್ತವ್ಯಸ್ತವಾಗಿಯೂ ಬರಿದಾಗಿಯೂ ಇತ್ತು. ಭೂಮಿಯ ಮೇಲೆ ಏನೂ ಇರಲಿಲ್ಲ. ಸಾಗರದ ಮೇಲೆ ಕತ್ತಲು ಕವಿದಿತ್ತು. ದೇವರಾತ್ಮನು ಜಲಸಮೂಹಗಳ ಮೇಲೆ ಚಲಿಸುತ್ತಿದ್ದನು.


ನನ್ನ ಜನರು ಗಾಯಗೊಂಡಿದ್ದಾರೆ. ಆದ್ದರಿಂದ ನಾನೂ ಗಾಯಗೊಂಡಿದ್ದೇನೆ. ಈಗ ಗಾಯಗೊಂಡ ಜನರ ಬಗ್ಗೆ ಯೋಚಿಸುತ್ತ ನಾನು ದುಃಖದಿಂದ ಮೌನವಾಗಿದ್ದೇನೆ.


ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಹೆದರಿಕೊಂಡಿವೆ. ಅವು ಕೆಟ್ಟ ಸಮಾಚಾರವನ್ನು ಕೇಳಿದ್ದರಿಂದ ಹೆದರಿಕೊಂಡಿವೆ. ಅವುಗಳು ನಿರಾಶೆಗೊಂಡಿವೆ. ಅವು ಆತಂಕಪಡುತ್ತಿವೆ ಮತ್ತು ಭಯಪಡುತ್ತಿವೆ.


ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನು ಉಂಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ: “ಆ ಮರವು ಪಾತಾಳಕ್ಕೆ ಹೋದ ದಿವಸದಲ್ಲಿ ನಾನು ಜನರನ್ನು ಅಳುವಂತೆ ಮಾಡಿದೆನು. ಅದನ್ನು ನಾನು ಆಳವಾದ ಸಾಗರದಿಂದ ಮುಚ್ಚಿಬಿಟ್ಟೆನು. ನಾನು ಅದರ ನದಿಗಳನ್ನೂ ಬೇರೆ ನೀರಿನ ತೊರೆಗಳನ್ನೂ ನಿಲ್ಲಿಸಿಬಿಟ್ಟೆನು. ಲೆಬನೋನ್ ಅದಕ್ಕಾಗಿ ಶೋಕಿಸುವಂತೆ ಮಾಡಿದೆನು. ಆ ದೊಡ್ಡ ಮರವು ಹೋದುದಕ್ಕಾಗಿ ಆ ಪ್ರಾಂತ್ಯದ ಬೇರೆ ಎಲ್ಲಾ ಮರಗಳು ದುಃಖದಿಂದ ಕಾಯಿಲೆಯಲ್ಲಿ ಬಿದ್ದವು.


ಹೌದು, ಯೆಹೋವನು ಯಾಕೋಬನ ವೈಭವವನ್ನು ಇಸ್ರೇಲಿನ ವೈಭವವಾಗಿ ಸ್ಥಾಪಿಸುವನು. ವೈರಿಯು ಅವರನ್ನು ನಾಶಮಾಡಿ ಅವರ ದ್ರಾಕ್ಷಿಬಳ್ಳಿಯನ್ನು ಹಾಳುಮಾಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು