Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:11 - ಪರಿಶುದ್ದ ಬೈಬಲ್‌

11 ಸಿಂಹದ ಗುಹೆಯಂತಿದ್ದ ನಿನೆವೆಯು ಎಲ್ಲಿ? ಗಂಡು ಹೆಣ್ಣು ಸಿಂಹಗಳು ಅದರೊಳಗೆ ವಾಸಿಸುತ್ತಿದ್ದವು. ಅದರ ಮರಿಗಳಿಗೆ ಭಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೃಗರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೃಗರಾಜನ ಗವಿಯೆಲ್ಲಿ? ಯುವಸಿಂಹಗಳ ಹಕ್ಕೆಯೆಲ್ಲಿ? ಸಿಂಹ ಸಿಂಹಿಣಿಗಳು, ಅವುಗಳ ಮರಿಗಳು ಹೆದರದೆ ತಿರುಗಾಡುತ್ತಿದ್ದ ಎಡೆಯೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೃಗರಾಜರ ಗವಿ, ಪ್ರಾಯದ ಸಿಂಹಗಳ ಹಕ್ಕೆ ಎಲ್ಲಿ? ಸಿಂಹ, ಸಿಂಹಿ, ಸಿಂಹದ ಮರಿ, ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಿಂಹದ ಗವಿಯೂ, ಎಳೆಯ ಸಿಂಹಗಳು ಮೇಯುವ ಸ್ಥಳವೂ ಎಲ್ಲಿ? ಸಿಂಹವೂ, ಸಿಂಹಿಣಿಯೂ, ಸಿಂಹದ ಮರಿಗಳೂ ಭಯವಿಲ್ಲದೆ ನಡೆದಾಡುವ ಸ್ಥಳಗಳೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:11
17 ತಿಳಿವುಗಳ ಹೋಲಿಕೆ  

ಶತ್ರುಗಳು ಆರ್ಭಟಿಸುವರು, ಆ ಆರ್ಭಟವು ಪ್ರಾಯದ ಸಿಂಹಗಳ ಗರ್ಜನೆಯಂತಿರುವುದು. ಶತ್ರುಗಳು ಹೂಂಕರಿಸುತ್ತಾ ತಮ್ಮೊಂದಿಗೆ ಯುದ್ಧ ಮಾಡುತ್ತಿರುವವರನ್ನು ಹಿಡಿದುಬಿಡುವರು. ಜನರು ಹೋರಾಡಿ ಪಾರಾಗಲು ಪ್ರಯತ್ನಿಸುವರು. ಆದರೆ ಅವರನ್ನು ರಕ್ಷಿಸುವವರು ಯಾರೂ ಇರುವುದಿಲ್ಲ.


ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶಮಾಡಿವೆ. ಇಸ್ರೇಲ್‌ನ ನಗರಗಳು ಸುಡಲ್ಪಟ್ಟಿವೆ; ಅವುಗಳು ನಿರ್ಜನವಾಗಿವೆ.


ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.


ಕೊಲೆಗಡುಕರ ಆ ಪಟ್ಟಣಕ್ಕೆ ಬಹಳ ಕೆಡುಕು ಉಂಟಾಗುವದು. ನಿನೆವೆಯು ಸುಳ್ಳಿನಿಂದ ತುಂಬಿದ ನಗರ. ಬೇರೆ ರಾಜ್ಯಗಳಿಂದ ದೋಚಿದ ವಸ್ತುಗಳಿಂದ ತುಂಬಿದ ನಗರ. ಆ ಪಟ್ಟಣವು ಕೊಲ್ಲುವುದನ್ನೂ ಲೂಟಿ ಮಾಡುವುದನ್ನೂ ನಿಲ್ಲಿಸುವುದೇ ಇಲ್ಲ.


ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”


“ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು.


ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.


ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.


ಯೆಹೂದನು ಪ್ರಾಣಿಯನ್ನು ಕೊಂದ ಪ್ರಾಯದ ಸಿಂಹದಂತಿದ್ದಾನೆ. ಮಗನೇ, ನೀನು ಸಿಂಹದಂತೆ ಬೇಟೆಗಾಗಿ ಹೊಂಚುಹಾಕಿ ನಿಂತಿರುವೆ. ಯೆಹೂದನು ಸಿಂಹದಂತಿರುವನು. ಅವನು ಮಲಗಿ ವಿಶ್ರಮಿಸಿಕೊಳ್ಳುವನು; ಅವನನ್ನು ಕೆಣಕಲು ಯಾರಿಗೂ ಧೈರ್ಯವಿಲ್ಲ.


ಆ ಜನರು ಪ್ರಾಯಸಿಂಹದಂತೆ ಬಲಿಷ್ಠರು. ಅವರು ಸಿಂಹದಂತೆ ಹೋರಾಡುತ್ತಾರೆ. ಆ ಸಿಂಹ ತನ್ನ ವೈರಿಯನ್ನು ತಿಂದುಬಿಡುವತನಕ ವಿಶ್ರಮಿಸುವುದಿಲ್ಲ. ಆ ಸಿಂಹವು ತನಗೆ ಬಲಿಯಾದವರ ರಕ್ತವನ್ನು ಹೀರುವವರೆಗೆ ಎಂದಿಗೂ ವಿಶ್ರಮಿಸುವುದಿಲ್ಲ.”


“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”


ಅವರು ತಮ್ಮ ಖಡ್ಗಗಳನ್ನು ಉಪಯೋಗಿಸಿ ಅಶ್ಶೂರದವರನ್ನು ಆಳುವರು. ಅವರು ನಿಮ್ರೋದನ ದೇಶವನ್ನು ಆಳುವರು. ಕೈಯಲ್ಲಿ ಖಡ್ಗವನ್ನು ಹಿಡಿದುಕೊಂಡು ಆ ಜನರನ್ನು ಆಳುವರು. ಆದರೆ ಇಸ್ರೇಲಿನ ರಾಜನು ಅಶ್ಶೂರದವರಿಂದ ನಮ್ಮನ್ನು ರಕ್ಷಿಸುವನು. ಅವರು ನಮ್ಮ ದೇಶದೊಳಕ್ಕೆ ಬಂದು ನಮ್ಮ ಪ್ರದೇಶವನ್ನು ತುಳಿದು ಹಾಳುಮಾಡುವಾಗ ನಾವು ರಕ್ಷಿಸಲ್ಪಡುವೆವು.


ನಿನೆವೆಯು (ಅರಸನಾದ ಸಿಂಹವು) ಜನರನ್ನು ಕೊಂದಿತು. ತನ್ನ ಮರಿಗಳಿಗೂ ಸಿಂಹಿಣಿಗೂ ಆಹಾರವನ್ನು ಕೊಟ್ಟಿತು. ತನ್ನ ಗುಹೆಯನ್ನು (ನಿನೆವೆ ರಾಜನು) ಮನುಷ್ಯರ ಶರೀರಗಳಿಂದಲೂ ತಾನು ಕೊಂದ ಹೆಂಗಸರಿಂದಲೂ ತುಂಬಿಸಿತು.


ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಭಯದಿಂದ ಬಲಹೀನರಾಗುವರು.


ಈ ಸೈನ್ಯವನ್ನು ನೋಡುವ ಜನರು ಹೆದರಿ ನಡುಗುವರು; ಅವರ ಮುಖಗಳು ಕಂಗೆಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು