12 ನಿನೆವೆಯು (ಅರಸನಾದ ಸಿಂಹವು) ಜನರನ್ನು ಕೊಂದಿತು. ತನ್ನ ಮರಿಗಳಿಗೂ ಸಿಂಹಿಣಿಗೂ ಆಹಾರವನ್ನು ಕೊಟ್ಟಿತು. ತನ್ನ ಗುಹೆಯನ್ನು (ನಿನೆವೆ ರಾಜನು) ಮನುಷ್ಯರ ಶರೀರಗಳಿಂದಲೂ ತಾನು ಕೊಂದ ಹೆಂಗಸರಿಂದಲೂ ತುಂಬಿಸಿತು.
12 ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಣಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಸೀಳುತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಗುಹೆಯನ್ನು ಕೊಂದ ಮೃಗಗಳಿಂದಲೂ ತುಂಬಿಸಿತು.
12 ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಹಿಸುಕುತ್ತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಹಕ್ಕೆಗಳನ್ನು ಕೊಂದ ಮೃಗಗಳಿಂದಲೂ ತುಂಬಿಸಿತು.
“ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.
ಆ ಜನರು ಪ್ರಾಯಸಿಂಹದಂತೆ ಬಲಿಷ್ಠರು. ಅವರು ಸಿಂಹದಂತೆ ಹೋರಾಡುತ್ತಾರೆ. ಆ ಸಿಂಹ ತನ್ನ ವೈರಿಯನ್ನು ತಿಂದುಬಿಡುವತನಕ ವಿಶ್ರಮಿಸುವುದಿಲ್ಲ. ಆ ಸಿಂಹವು ತನಗೆ ಬಲಿಯಾದವರ ರಕ್ತವನ್ನು ಹೀರುವವರೆಗೆ ಎಂದಿಗೂ ವಿಶ್ರಮಿಸುವುದಿಲ್ಲ.”
ಅವನು ಮಾತನ್ನು ಮುಂದುವರಿಸಿ, “ನಿನ್ನ ತಂದೆಯು ಮತ್ತು ಅವನ ಜನರು ಶೂರರೆಂಬುದು ನಿನಗೆ ತಿಳಿದಿದೆ. ಕಾಡಿನಲ್ಲಿ ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರು ರೋಷವುಳ್ಳವರಾಗಿದ್ದಾರೆ. ನಿನ್ನ ತಂದೆಯು ಒಬ್ಬ ನುರಿತ ಹೋರಾಟಗಾರ. ಅವನು ಜನರೊಂದಿಗೆ ರಾತ್ರಿಯಲ್ಲಿ ಇರುವುದಿಲ್ಲ.
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಸುಟ್ಟುಹಾಕುತ್ತೇನೆ. ನಿನ್ನ ಎಳೆ ಸಿಂಹಗಳನ್ನು ರಣರಂಗದಲ್ಲಿ ಸಾಯಿಸುತ್ತೇನೆ. ಈ ಭೂಮಿಯ ಮೇಲೆ ಇನ್ನು ಯಾರನ್ನೂ ಭೇಟಿ ಮಾಡದಿರುವೆ. ನಿನ್ನ ಸಂದೇಶವಾಹಕರಿಂದ ಕೆಟ್ಟ ಸಮಾಚಾರವನ್ನು ಜನರು ಇನ್ನು ಎಂದಿಗೂ ಕೇಳರು.”