Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:13 - ಪರಿಶುದ್ದ ಬೈಬಲ್‌

13 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಸುಟ್ಟುಹಾಕುತ್ತೇನೆ. ನಿನ್ನ ಎಳೆ ಸಿಂಹಗಳನ್ನು ರಣರಂಗದಲ್ಲಿ ಸಾಯಿಸುತ್ತೇನೆ. ಈ ಭೂಮಿಯ ಮೇಲೆ ಇನ್ನು ಯಾರನ್ನೂ ಭೇಟಿ ಮಾಡದಿರುವೆ. ನಿನ್ನ ಸಂದೇಶವಾಹಕರಿಂದ ಕೆಟ್ಟ ಸಮಾಚಾರವನ್ನು ಜನರು ಇನ್ನು ಎಂದಿಗೂ ಕೇಳರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನಗೆ ವಿರುದ್ಧವಾಗಿದ್ದೇನೆ ನಾನು; ಸುಟ್ಟು ಭಸ್ಮಮಾಡುವೆ ನಿನ್ನ ರಥಗಳನು; ಸಂಹರಿಸಿಬಿಡುವೆನು ನಿನ್ನ ಯುವಸಿಂಹಗಳನು; ನಿನಗೆ ಜಗದಲ್ಲೆಲ್ಲ ಬೇಟೆ ಸಿಗದಂತೆ ಮಾಡುವೆನು; ಯಾರೂ ಕೇಳರು ನಿನ್ನ ರಾಯಭಾರಿಗಳ ಮಾತನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ನುಂಗಿಬಿಡುವದು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು, ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಹೊಗೆಯಾಗಲು ಸುಡುತ್ತೇನೆ. ಖಡ್ಗವು ನಿನ್ನ ಎಳೆಯ ಸಿಂಹಗಳನ್ನು ನುಂಗಿಬಿಡುವುದು. ನಿನಗೆ ಸಿಕ್ಕಿದ ಬೇಟೆಯನ್ನು ಭೂಮಿಯ ಮೇಲಿನಿಂದ ತೆಗೆದುಬಿಡುತ್ತೇನೆ. ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:13
33 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮೇಲಂಗಿಯನ್ನು ನಿನ್ನ ಮುಖದ ತನಕ ಎತ್ತುವೆನು. ಜನಾಂಗಗಳು ನಿನ್ನ ಬೆತ್ತಲೆತನವನ್ನು ನೋಡಲಿ. ನಿನ್ನ ನಾಚಿಕೆಯನ್ನು ಅವರು ನೋಡಲಿ.


“ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ. ನೀನು ಬೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನ್ನು ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ.” ಆದರೆ ಯೆಹೋವನ ಸಂದೇಶವನ್ನು ಕೇಳಿರಿ.


ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.


ನೀನು ಯೆಹೋವನನ್ನು ನಿಂದಿಸಲು ನಿನ್ನ ಸಂದೇಶಕರನ್ನು ಬಳಸಿದೆ, ‘ನಾನು ನನ್ನ ಅನೇಕ ರಥಗಳೊಂದಿಗೆ ಉನ್ನತಗಿರಿಗಳಿಗೆ ಬಂದೆನು. ನಾನು ಲೆಬನೋನಿನ ದುರ್ಗಮ ಸ್ಥಳಗಳಿಗೆ ಹೋದೆನು. ನಾನು ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಲೆಬನೋನಿನ ಉತ್ತಮ ತುರಾಯಿಮರಗಳನ್ನೂ ಕಡಿದುರುಳಿಸಿದೆನು.


ಕೊಲೆಗಡುಕರ ಆ ಪಟ್ಟಣಕ್ಕೆ ಬಹಳ ಕೆಡುಕು ಉಂಟಾಗುವದು. ನಿನೆವೆಯು ಸುಳ್ಳಿನಿಂದ ತುಂಬಿದ ನಗರ. ಬೇರೆ ರಾಜ್ಯಗಳಿಂದ ದೋಚಿದ ವಸ್ತುಗಳಿಂದ ತುಂಬಿದ ನಗರ. ಆ ಪಟ್ಟಣವು ಕೊಲ್ಲುವುದನ್ನೂ ಲೂಟಿ ಮಾಡುವುದನ್ನೂ ನಿಲ್ಲಿಸುವುದೇ ಇಲ್ಲ.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮಗೆ ವಿರೋಧವಾಗಿದ್ದೇನೆ. ಬೇರೆ ಜನರ ಕಣ್ಣೆದುರಿನಲ್ಲಿಯೇ ನಿಮ್ಮನ್ನು ದಂಡಿಸುವೆನು.


ಇಥಿಯೋಪಿಯದ ರಾಜ ತಿರ್ಹಾಕನ ಬಗ್ಗೆ ಅಶ್ಶೂರದ ರಾಜ ಒಂದು ಗಾಳಿ ಸುದ್ದಿಯನ್ನು ಕೇಳಿದನು. “ತಿರ್ಹಾಕನು ನಿನ್ನ ವಿರುದ್ಧ ಹೋರಾಡಲು ಬಂದಿದ್ದಾನೆ” ಎಂಬುದೇ ಆ ಗಾಳಿಸುದ್ದಿಯಾಗಿತ್ತು. ಆದ್ದರಿಂದ ಅಶ್ಶೂರದ ರಾಜನು ಹಿಜ್ಕೀಯನ ಬಳಿಗೆ ಮತ್ತೆ ಸಂದೇಶಕರನ್ನು ಕಳುಹಿಸಿದನು. ಅಶ್ಶೂರದ ರಾಜನು ಈ ಸಂದೇಶಕರಿಗೆ ಒಂದು ಸಂದೇಶವನ್ನು ನೀಡಿದನು.


ಯೆಹೋವನು ಹೇಳಿದಂತೆಯೇ ಯೆಹೋಶುವನು ಮಾಡಿದನು. ಯೆಹೋಶುವನು ಅವರ ಕುದುರೆಯ ಕಾಲುಗಳನ್ನು ಕತ್ತರಿಸಿದನು; ಅವರ ರಥಗಳನ್ನು ಸುಟ್ಟುಹಾಕಿದನು.


ಆದರೆ ನಿನೆವೆಯೇ, ನಿನ್ನ ಎಲ್ಲಾ ಬಲವಾದ ಬುರುಜುಗಳು ಅಂಜೂರದ ಮರದಂತಿರುವವು. ಹೊಸ ಅಂಜೂರ ಹಣ್ಣುಗಳು ಮಾಗುವವು. ಒಬ್ಬನು ಬಂದು ಮರವನ್ನು ಅಲ್ಲಾಡಿಸಲು ಅಂಜೂರ ಹಣ್ಣುಗಳು ಅಲ್ಲಾಡಿಸುವವನ ಬಾಯಿಗೆ ಬೀಳುವವು. ಅವನು ಅವುಗಳನ್ನು ತಿಂದುಬಿಡುವನು; ಅವು ಇಲ್ಲವಾಗುವವು.


“ನರಪುತ್ರನೇ, ನನ್ನ ಪರವಾಗಿ ಗೋಗನಿಗೆ ವಿರುದ್ಧವಾಗಿ ಹೇಳು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆಂದು ಅವನಿಗೆ ಹೇಳು: ‘ಗೋಗನೇ, ನೀನು ಮೆಷೆಕ್ ಮತ್ತು ತೂಬಲ್ ದೇಶಗಳ ಪ್ರಮುಖ ನಾಯಕನು. ಆದರೆ ನಾನು ನಿನಗೆ ವಿರುದ್ಧವಾಗಿದ್ದೇನೆ.


ಅವನಿಗೆ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಹೇಳು. ‘ಗೋಗನೇ, ನೀನು ಮೆಷೆಕ್ ಮತ್ತು ತೂಬಲ್ ದೇಶದ ಅತ್ಯಂತ ಪ್ರಮುಖ ನಾಯಕನಾಗಿರುವೆ.


‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಅದಕ್ಕೆ ಹೇಳು: “‘ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನನ್ನು ಶಿಕ್ಷಿಸುತ್ತೇನೆ. ನಾನು ನಿನ್ನನ್ನು ಬಂಜರು ಭೂಮಿಯನ್ನಾಗಿ ಮಾಡುವೆನು.


ಆದ್ದರಿಂದ ನಾನು ನಿನಗೆ ವಿರೋಧವಾಗಿರುತ್ತೇನೆ. ನೈಲ್ ನದಿಯ ಅನೇಕ ಶಾಖೆಗಳಿಗೂ ನಾನು ವಿರೋಧವಾಗಿದ್ದೇನೆ. ಈಜಿಪ್ಟನ್ನು ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಮಿಗ್ದೋಲ್‌ನಿಂದ ಅಸ್ವಾನ್ ತನಕ ಇರುವ ಪಟ್ಟಣಗಳು ಬರಿದಾಗುವವು. ಇಥಿಯೋಪ್ಯದ ಮೇರೆಯ ತನಕವೂ ಬರಿದಾಗುವದು.


‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ ಎಂದು ಅವರಿಗೆ ತಿಳಿಸು, “‘ಈಜಿಪ್ಟಿನ ರಾಜನಾದ ಫರೋಹನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನೀನು ನೈಲ್ ನದಿಯ ದಡದಲ್ಲಿ ಮಲಗಿರುವ ಪೇರ್ಮೊಸಳೆ, “ಇದು ನಾನು ನಿರ್ಮಿಸಿದ ಹೊಳೆ” ಎಂದು ನೀನು ಹೇಳಿಕೊಳ್ಳುವೆ.


ನನ್ನ ಒಡೆಯನಾದ ಯೆಹೋವನು ಈ ಮಾತುಗಳನ್ನು ಹೇಳಿದನೆಂದು ಅವನಿಗೆ ತಿಳಿಸು: “‘ಚೀದೋನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನ ಜನರು ನನ್ನನ್ನು ಗೌರವಿಸಲು ಕಲಿಯುವರು. ನಾನು ಚೀದೋನನ್ನು ಶಿಕ್ಷಿಸಿದಾಗ ನಾನೇ ಯೆಹೋವನೆಂದು ಜನರಿಗೆ ಗೊತ್ತಾಗುವದು. ನಾನು ಪವಿತ್ರನು ಎಂದು ಅವರು ತಿಳಿದು ಆ ರೀತಿಯಾಗಿ ಅವರು ನನ್ನೊಂದಿಗೆ ವರ್ತಿಸುವರು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ತೂರೇ, ನಾನು ನಿನಗೆ ಮ್ಯುಯಿತೀರಿಸುವೆನು. ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅನೇಕ ರಾಜ್ಯಗಳನ್ನು ಎಬ್ಬಿಸುತ್ತೇನೆ. ಅವರು ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿನಗೆ ವಿರುದ್ಧವಾಗಿ ಬರುವರು.”


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ಇಡೀ ದೇಶವನ್ನು ನಾಶಪಡಿಸುವ ಜ್ವಾಲಾಮುಖಿಯಂತಿರುವೆ. ಆದರೆ ನಾನು ನಿನಗೆ ವಿರುದ್ಧವಾಗಿ ತಿರುಗಿದ್ದೇನೆ. ನಾನು ನಿನ್ನನ್ನು ಸುಟ್ಟುಹೋದ ಪರ್ವತವನ್ನಾಗಿ ಮಾಡುವೆನು.


“ಬಾಬಿಲೋನೇ, ನೀನು ತುಂಬಾ ದುರಹಂಕಾರಿ. ನಾನು ನಿನಗೆ ವಿರುದ್ಧವಾಗಿದ್ದೇನೆ.” ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ. “ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನನ್ನು ದಂಡಿಸುವ ಸಮಯ ಬಂದಿದೆ.


ಲೋಕದ ಜನರು ಆರಾಧಿಸಿದ ಮತ್ತು ಕೈಯಾರೆ ಮಾಡಿದ್ದ ದೇವರುಗಳನ್ನು ಜೆರುಸಲೇಮಿನ ದೇವರೊಂದಿಗೆ ಹೋಲಿಸಿ ಆತನ ವಿರುದ್ಧವಾಗಿ ಮಾತಾಡಿದರು.


ಸೇನಾಧಿಪತಿಗಳಲ್ಲಿ ಒಬ್ಬನಾದ ರಬ್ಷಾಕೆಯು ಅವರಿಗೆ, “ಅಶ್ಶೂರದ ಮಹಾರಾಜನು ಹಿಜ್ಕೀಯನಿಗೆ ತಿಳಿಸುವುದೇನೆಂದರೆ: ‘ನಿನ್ನ ನಂಬಿಕೆಗೆ ಆಧಾರವು ಎಲ್ಲಿದೆ?


ಅಶ್ಶೂರದ ರಾಜ ಜೆರುಸಲೇಮಿನಲ್ಲಿದ್ದ ರಾಜನಾದ ಹಿಜ್ಕೀಯನ ಬಳಿಗೆ ತನ್ನ ಮೂವರು ಮಹಾಸೇನಾಧಿಪತಿಗಳಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಮಹಾಸೈನ್ಯದೊಂದಿಗೆ ಕಳುಹಿಸಿದನು. ಅವರು ಲಾಕೀಷಿನಿಂದ ಜೆರುಸಲೇಮಿಗೆ ಹೋದರು. ಅವರು ಮೇಲಿನ ಕೆರೆಯ ನೀರಿನ ಕೊಳವೆಯ ಬಳಿ ನಿಂತರು. (ಮೇಲಿನ ಕೆರೆಯು ರಸ್ತೆಯ ಮೇಲೆ ದೋಭಿಘಾಟ್ ಬಳಿಯಿತ್ತು.)


ಆಗ ಯೆಹೋವನು ಯೆಹೋಶುವನಿಗೆ, “ಆ ಸೈನ್ಯಕ್ಕೆ ನೀನು ಹೆದರಬೇಡ; ನೀವು ಅವರನ್ನು ಸೋಲಿಸುವಂತೆ ನಾನು ಮಾಡುತ್ತೇನೆ. ನಾಳೆ ಇಷ್ಟು ಹೊತ್ತಿಗೆ ನೀವು ಅವರೆಲ್ಲರನ್ನು ಕೊಂದುಬಿಡುವಿರಿ. ನೀವು ಅವರ ಕುದುರೆಗಳ ಕಾಲುಗಳನ್ನು ಕತ್ತರಿಸುವಿರಿ; ಅವರ ರಥಗಳನ್ನು ಸುಟ್ಟುಹಾಕುವಿರಿ” ಎಂದನು.


“ಈಜಿಪ್ಟಿನಲ್ಲಿ ಈ ಸಂದೇಶವನ್ನು ಪ್ರಕಟಿಸು, ಮಿಗ್ದೋಲ್ ನಗರದಲ್ಲಿ ಇದನ್ನು ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್‌ಗಳಲ್ಲಿ ಪ್ರಚುರಪಡಿಸಿರಿ, ‘ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಹುತಿಯಾಗಿದ್ದಾರೆ.’


ಆದ್ದರಿಂದ ಈಗ ನನ್ನ ಒಡೆಯನಾದ ಯೆಹೋವನು ನಿಜವಾಗಿಯೂ ಮಾತನಾಡುವನು. ಆತನು ಹೇಳುವುದೇನೆಂದರೆ, “ನೀವು ಸುಳ್ಳು ಹೇಳಿದ್ದೀರಿ, ನೀವು ಸುಳ್ಳುದರ್ಶನಗಳನ್ನು ನೋಡಿದ್ದೀರಿ. ಆದ್ದರಿಂದ ನಾನು ನಿಮಗೆ ವಿರುದ್ಧವಾಗಿದ್ದೇನೆ.” ಇದು ನನ್ನ ಒಡೆಯನಾದ ಯೆಹೋವನು ಹೇಳಿದ್ದು.


ಇಸ್ರೇಲ್ ದೇಶಕ್ಕೆ ಹೀಗೆ ಹೇಳು: ‘ಯೆಹೋವನು ನನಗೆ ಹೀಗೆಂದಿದ್ದಾನೆ, ನಾನು ನಿನಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರತೆಗೆಯುವೆನು. ನಿನ್ನಲ್ಲಿರುವ ಒಳ್ಳೆಯ ಜನರನ್ನೂ ಕೆಟ್ಟ ಜನರನ್ನೂ ತೆಗೆದುಬಿಡುವೆನು.


ನಿನೆವೆಯು (ಅರಸನಾದ ಸಿಂಹವು) ಜನರನ್ನು ಕೊಂದಿತು. ತನ್ನ ಮರಿಗಳಿಗೂ ಸಿಂಹಿಣಿಗೂ ಆಹಾರವನ್ನು ಕೊಟ್ಟಿತು. ತನ್ನ ಗುಹೆಯನ್ನು (ನಿನೆವೆ ರಾಜನು) ಮನುಷ್ಯರ ಶರೀರಗಳಿಂದಲೂ ತಾನು ಕೊಂದ ಹೆಂಗಸರಿಂದಲೂ ತುಂಬಿಸಿತು.


ಇವೆಲ್ಲವನ್ನು ನೀನು ಮಾಡಬಹುದು. ಆದರೂ ಬೆಂಕಿಯು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವುದು. ಖಡ್ಗವು ನಿನ್ನನ್ನು ಸಾಯಿಸುವದು. ನಿನ್ನ ದೇಶವು ಮಿಡತೆಗಳ ಹಿಂಡಿನಿಂದ ತಿಂದುಹಾಕಲ್ಪಟ್ಟ ದೇಶದಂತೆ ಕಾಣುವುದು. ನಿನೆವೆಯೇ, ನೀನು ಬೆಳೆಯುತ್ತಾ ಬೆಳೆಯುತ್ತಾ ಮಿಡತೆಗಳ ಹಿಂಡಿನಂತಾದೆ. ನೀನು ಮಿಡತೆಗಳಂತಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು