ನಹೂಮ 2:3 - ಪರಿಶುದ್ದ ಬೈಬಲ್3 ಆ ಸೈನಿಕರ ಗುರಾಣಿಗಳು ಕೆಂಪಗಿವೆ. ಅವರ ಸಮವಸ್ತ್ರಗಳು ಕೆಂಪುಬಣ್ಣದಿಂದ ಹೊಳೆಯುತ್ತಿವೆ. ಅವರ ರಥಗಳು ಯುದ್ಧಕ್ಕಾಗಿ ಸಾಲುಗಟ್ಟಿ ನಿಂತಿವೆ ಮತ್ತು ಬೆಂಕಿಯ ಜ್ವಾಲೆಯಂತೆ ಹೊಳೆಯುತ್ತಿವೆ. ಅವರ ಭರ್ಜಿಗಳು ಎತ್ತಲ್ಪಟ್ಟಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಥಳಥಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಶತ್ರುವಿನ ಶೂರರ ಗುರಾಣಿ ರಕ್ತಗೆಂಪು, ಪರಾಕ್ರಮಿಗಳ ಉಡುಪು ಕಡುಗೆಂಪು. ರಣರಂಗದೊಳು ಥಳಥಳಿಸುತ್ತವೆ ರಥಗಳು ಝಳಪಿಸುತ್ತವೆ ಈಟಿಗಳು. ಕಾಳಗಕ್ಕೆ ಕಾತರದಿಂದಿವೆ ಕುದುರೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರವಿುಗಳ ಉಡುಪು ಕಿರಿಮಂಜಿಯದು; ಅವನ ಸನ್ನಾಹದಿನದಲ್ಲಿ ರಥಗಳ ಉಕ್ಕು ಥಳಥಳಿಸುತ್ತದೆ, ಈಟಿಗಳು ಝಳಪಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸೈನಿಕರ ಗುರಾಣಿಗಳು ಕೆಂಪಾಗಿವೆ; ಯುದ್ಧವೀರರು ರಕ್ತವರ್ಣದ ಬಟ್ಟೆ ಧರಿಸಿದ್ದಾರೆ; ಆತನು ಸಿದ್ಧಮಾಡುವ ದಿವಸದಲ್ಲಿ, ರಥಗಳ ಉಕ್ಕು ಥಳಥಳಿಸುವುದು, ತುರಾಯಿ ಮರದಿಂದ ಮಾಡಿದ ಈಟಿಗಳು ಝಳಪಿಸುವುವು; ಅಧ್ಯಾಯವನ್ನು ನೋಡಿ |