ನಹೂಮ 2:4 - ಪರಿಶುದ್ದ ಬೈಬಲ್4 ರಸ್ತೆಯ ಮೇಲೆ ರಥಗಳು ರಭಸದಿಂದ ಓಡುತ್ತಿವೆ. ನಗರದ ಚೌಕಕ್ಕೆ ಹಿಂದೆ ಮುಂದೆ ಓಡುತ್ತಿವೆ. ಅವು ಉರಿಯುವ ಪಂಜಿನೋಪಾದಿಯಲ್ಲಿವೆ, ಒಂದೆಡೆಯಿಂದ ಇನ್ನೊಂದೆಡೆಗೆ ಹಾರುವ ಮಿಂಚಿನಂತಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪಟ್ಟಣದ ಹೊರಗೆ ರಥಗಳು ರಭಸದಿಂದ ತಿರುಗಾಡುತ್ತವೆ, ಮೈದಾನಗಳಲ್ಲಿ ಧಡಧಡ ಓಡಾಡುತ್ತವೆ; ಪಂಜುಗಳಂತೆ ಬೆಳಗುತ್ತವೆ, ಮಿಂಚುಗಳ ಹಾಗೆ ಹಾರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹಾದಿಬೀದಿಗಳಲಿ ಓಡಾಡುತ್ತಿವೆ ರಥಗಳು ರಭಸದಿಂದ ನಗರ ಚೌಕಗಳಲ್ಲಿ ಅವು ಅಡ್ಡಾಡುತ್ತವೆ ವೇಗದಿಂದ ಅವು ಬೆಳಗುತ್ತಿವೆ ಪಂಜುಗಳಂತೆ, ಹೊಳೆಯುತ್ತಿವೆ ಮಿಂಚಿನಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪಟ್ಟಣದ ಹೊರಗೆ ರಥಗಳು ರಭಸದಿಂದ ತಿರುಗಾಡುತ್ತವೆ, ಮೈದಾನದಲ್ಲಿ ಧಡಧಡ ಓಡಾಡುತ್ತವೆ; ಪಂಜುಗಳಂತೆ ಬೆಳಗುತ್ತವೆ, ವಿುಂಚುಗಳ ಹಾಗೆ ಹಾರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ರಥಗಳು ಬೀದಿಗಳಲ್ಲಿ ಬಿರುಗಾಳಿಯಂತೆ ಓಡಾಡುತ್ತವೆ, ಅವು ಚೌಕಗಳಲ್ಲಿ ವೇಗವಾಗಿ ಹಿಂದಕ್ಕೆ ಮತ್ತು ಮುಂದಕ್ಕೆ ನುಗ್ಗುತ್ತವೆ. ಅವು ಉರಿಯುವ ಪಂಜುಗಳಂತೆ ಕಾಣುತ್ತವೆ; ಅವರು ಮಿಂಚಿನಂತೆ ಸುತ್ತಾಡುತ್ತಾರೆ. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.