Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:7 - ಪರಿಶುದ್ದ ಬೈಬಲ್‌

7 ವೈರಿಗಳು ರಾಣಿಯನ್ನು ಎತ್ತಿಕೊಂಡು ಹೋಗುತ್ತಾರೆ. ಆಕೆಯ ಸೇವಕಿಯರು ಪಾರಿವಾಳಗಳಂತೆ ಗೋಳಾಡುತ್ತಿದ್ದಾರೆ. ತಮ್ಮ ದುಃಖವನ್ನು ಪ್ರದರ್ಶಿಸಲು ಎದೆಯನ್ನು ಬಡಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ವಸ್ತ್ರವನ್ನು ಕಿತ್ತು ರಾಣಿಯನ್ನು ಬಯಲಿಗೆ ತರಲು ಆಕೆಯ ಸೇವಕಿಯರು ಎದೆ ಬಡೆದುಕೊಂಡು ಪಾರಿವಾಳಗಳಂತೆ ರೋದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸೆರೆಹಿಡಿದಿರುವರು ರಾಣಿಯನು; ತಂದಿಹರು ಆಕೆಯನು ಬೈಲಿಗೆ. ದಾಸಿಯರು ಬಡಿದುಕೊಳ್ಳುತಿಹರು ಎದೆ; ರೋದಿಸುತಿಹರು ಪಾರಿವಾಳಗಳಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ವಸ್ತ್ರವನ್ನು ಕಿತ್ತು ರಾಣಿಯನ್ನು ಬೈಲಿಗೆ ತರಲು ಆಕೆಯ ತೊತ್ತುಗಳು ಎದೆಬಡಿದುಕೊಂಡು ಪಾರಿವಾಳಗಳಂತೆ ಮೂಲುಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನೆವೆಯು ಸೆರೆಯಾಗಿ ಹೋಗಬೇಕೆಂಬ ಆಜ್ಞೆಯಾಗಿದೆ. ಅವಳ ದಾಸಿಯರು ಪಾರಿವಾಳಗಳಂತೆ ರೋದಿಸುವರು, ತಮ್ಮ ಎದೆಗಳನ್ನು ಬಡಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:7
9 ತಿಳಿವುಗಳ ಹೋಲಿಕೆ  

ನಾವೆಲ್ಲಾ ಗುಣುಗುಟ್ಟುತ್ತೇವೆ. ನಾವು ಕರಡಿಗಳಂತೆ ಗುರುಗುಟ್ಟುತ್ತಿದ್ದೇವೆ, ಪಾರಿವಾಳಗಳಂತೆ ಮೂಲುಗುತ್ತಿದ್ದೇವೆ. ಜನರು ಧರ್ಮವನ್ನು ಅನುಸರಿಸುವ ಸಮಯಕ್ಕಾಗಿ ನಾವು ಕಾಯುತ್ತಿದ್ದೇವೆ. ಆದರೆ ಧರ್ಮವೇ ಇಲ್ಲ. ನಾವು ರಕ್ಷಣೆಗಾಗಿ ಕಾಯುತ್ತಿದ್ದೇವೆ. ಆದರೆ ರಕ್ಷಣೆಯು ಬಹುದೂರವಿದೆ.


ನಾನು ಪಾರಿವಾಳದಂತೆ ಕೂಗಿಕೊಂಡೆನು. ಪಕ್ಷಿಯಂತೆ ಅರಚಿಕೊಂಡೆನು. ನನ್ನ ಕಣ್ಣುಗಳು ಸ್ವರ್ಗದ ಕಡೆಗೆ ನೋಡುತ್ತಾ ಆಯಾಸಗೊಂಡವು. ನನ್ನ ಒಡೆಯನೇ, ನಾನು ತುಂಬಾ ಚಿಂತಾಕ್ರಾಂತನಾಗಿದ್ದೇನೆ. ನೀನು ನನಗೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡು.”


ಈ ಸಂಗತಿಯನ್ನು ನೋಡುವುದಕ್ಕೆ ಅನೇಕ ಜನರು ಪಟ್ಟಣದ ಹೊರಗೆ ಬಂದಿದ್ದರು. ಜನರು ಇದ್ದನ್ನು ನೋಡಿ, ಬಹಳ ದುಃಖದಿಂದ ಹೊರಟುಹೋದರು.


ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ದೊಡ್ಡಗುಂಪಾಗಿ ಸೇರಿದ್ದ ಸ್ತ್ರೀಯರು ಯೇಸುವಿಗಾಗಿ ದುಃಖಪಟ್ಟು ಎದೆ ಬಡಿದುಕೊಂಡು ಗೋಳಾಡುತ್ತಿದ್ದರು.


ಶೋಕವಸ್ತ್ರಗಳನ್ನು ದುಃಖದಿಂದ ತುಂಬಿದ ನಿಮ್ಮ ಎದೆಗಳ ಮೇಲೆ ಹಾಕಿಕೊಳ್ಳಿ. ನಿಮ್ಮ ಹೊಲಗಳು ನಿಷ್ಪ್ರಯೋಜಕವಾಗಿರುವದಕ್ಕಾಗಿ ಅಳಿರಿ. ನಿಮ್ಮ ದ್ರಾಕ್ಷಿತೋಟವು ಒಳ್ಳೆಯ ಫಲ ಕೊಡುತ್ತಿತ್ತು. ಆದರೆ ಈಗ ತೋಟವು ಬರಿದಾಗಿದೆ.


ಆ ಸಮಯದಲ್ಲಿ ಪೇತ್ರನು ಇನ್ನೂ ಅಂಗಳದಲ್ಲಿದ್ದನು. ಪ್ರಧಾನಯಾಜಕನ ದಾಸಿಯಾಗಿದ್ದ ಹುಡುಗಿಯೊಬ್ಬಳು ಪೇತ್ರನ ಬಳಿಗೆ ಬಂದಳು.


“ಆದರೂ ಕೆಲವರು ತಪ್ಪಿಸಿಕೊಳ್ಳುವರು. ಅವರು ಬೆಟ್ಟಕ್ಕೆ ಓಡುವರು. ಆದರೆ ಅವರು ಸಂತೋಷಪಡುವುದಿಲ್ಲ. ತಮ್ಮ ಪಾಪಗಳಿಗಾಗಿ ಅವರು ದುಃಖಿತರಾಗುವರು. ಪಾರಿವಾಳಗಳಂತೆ ಮೂಲುಗುವರು, ಅಳುವರು.


ಆದರೆ ಹೊಳೆಯ ಕದಗಳು ತೆರೆಯಲ್ಪಟ್ಟಿವೆ. ಅದರ ಮೂಲಕ ವೈರಿಗಳು ಮುನ್ನುಗ್ಗುತ್ತಿದ್ದಾರೆ. ಅರಸನ ಮನೆಯನ್ನು ನಾಶಮಾಡುತ್ತಿದ್ದಾರೆ.


ನಿನೆವೆಯೇ, ನಿನ್ನ ಜನರೆಲ್ಲಾ ಹೆಂಗಸರಂತೆ, ವೈರಿ ಸೈನಿಕರು ಅವರನ್ನು ಹಿಡಿದುಕೊಳ್ಳಲು ತಯಾರಾಗಿದ್ದಾರೆ. ನಿನ್ನ ದೇಶದ ದ್ವಾರಗಳು, ವೈರಿಗಳು ಪ್ರವೇಶಿಸುವಂತೆ ಅಗಲವಾಗಿ ತೆರೆಯಲ್ಪಟ್ಟಿವೆ. ದ್ವಾರದ ಬಾಗಿಲಿನ ಅಡ್ಡಪಟ್ಟಿಯು ಬೆಂಕಿಯಿಂದ ಸುಟ್ಟಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು